ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು

ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಿಂದ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ, ಸಕ್ರೈಬೆಲು ಬಳಿ ಶುಕ್ರವಾರ ಬೆಳಗಿನ ಜಾವ ಈ ಘಟನೆ ನಡೆದಿದೆ

  • ಚಲಿಸುತ್ತಿದ್ದ ಬಸ್‌ಗೆ ಬೆಂಕಿ, ಪ್ರಯಾಣಿಕರು ಸುರಕ್ಷಿತವಾಗಿ ಪಾರು.
  • ಬಸ್ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ, ಬಸ್ ಬೆಂಕಿಗಾಹುತಿಯಾಗಿದೆ.
  • ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿದೆ (Bus Catches Fire). ಅದೃಷ್ಟವಶಾತ್, ಈ ಅಪಘಾತದಿಂದ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಕ್ರೈಬೆಲು (Sakraibailu Shivamogga) ಬಳಿ ಶುಕ್ರವಾರ ಬೆಳಗಿನ ಜಾವ 3.50ಕ್ಕೆ ನಡೆದಿದೆ.

ದುರ್ಗಾಂಬ ಸಂಸ್ಥೆಯ ಬಸ್ ಮಂಗಳೂರಿನಿಂದ ದಾವಣಗೆರೆಗೆ 19 ಪ್ರಯಾಣಿಕರೊಂದಿಗೆ ಹೊರಟಿತ್ತು. ಸಕ್ರೈಬೆಲು ಆನೆಬಿಡಾರ ತಲುಪುತ್ತಿದ್ದಂತೆ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು.

ಎಚ್ಚರಗೊಂಡ ಚಾಲಕ ತಕ್ಷಣವೇ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಎಬ್ಬಿಸಿ ಬೇಗನೆ ಕೆಳಗಿಳಿಯುವಂತೆ ಮಾಡಿದರು. ಕೆಲವೇ ಕ್ಷಣಗಳಲ್ಲಿ ಬಸ್ ಬೆಂಕಿಗಾಹುತಿಯಾಯಿತು.

ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು

ಅಗ್ನಿಶಾಮಕ ಅಧಿಕಾರಿ ನರೇಂದ್ರ ಅವರ ನೇತೃತ್ವದಲ್ಲಿ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು. ಎಂಜಿನ್‌ನಲ್ಲಿ ತಾಂತ್ರಿಕ ದೋಷವೇ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿಯುತ್ತಿದೆ.

Bus Catches Fire in Shivamogga, Passengers Escape Unharmed

English Summary
Related Stories