ಮುಲಾಜಿಲ್ಲದೆ ಇಂತಹವರ ಬಿಪಿಎಲ್ ರೇಷನ್ ಕಾರ್ಡ್ ರದ್ದು! ಸರ್ಕಾರ ಖಡಕ್ ನಿರ್ಧಾರ

ಡಿಸೆಂಬರ್ 31ರ ಒಳಗೆ ಇದೊಂದು ಕೆಲಸ ಮಾಡದೆ ಇದ್ರೆ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ

Bengaluru, Karnataka, India
Edited By: Satish Raj Goravigere

ಬಿಪಿಎಲ್ ರೇಷನ್ ಕಾರ್ಡ್ (BPL Ration) ಹೊಂದಿರುವವರಿಗೆ ಆಹಾರ ಇಲಾಖೆ (food department) ಮಹತ್ವದ ಆದೇಶ ಒಂದನ್ನು ಹೊರಡಿಸಿದೆ, ಇದರ ಪ್ರಕಾರ ಯಾರು ಡಿಸೆಂಬರ್ 31ರ ಒಳಗೆ ಈ ಕೆಲಸ ಮಾಡಿಕೊಳ್ಳುವುದಿಲ್ಲವೋ ಅಂತವರಿಗೆ ಬಿಪಿಎಲ್ ಕಾರ್ಡ್ ನ ಪ್ರಯೋಜನ ಸಿಗದೇ ಇರಬಹುದು.

ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಆಗಬಹುದು ಎಚ್ಚರ! (BPL card Cancellation)

ಆಧಾರ್ ಕಾರ್ಡ್ (Aadhaar Card) ನಂತೆ ಸರ್ಕಾರದ ಎಲ್ಲಾ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಅಂದ್ರೆ ರೇಷನ್ ಕಾರ್ಡ್ ಕೂಡ ಅಷ್ಟೇ ಮುಖ್ಯವಾಗಿರುತ್ತೆ. ಅದರಲ್ಲೂ ಬಿಪಿಎಲ್ ರೇಷನ್ ಕಾರ್ಡ್ ಇರುವವರಿಗೆ ಸರಕಾರದಿಂದ ಹೆಚ್ಚಿನ ಸೌಲಭ್ಯ ಸಿಗುತ್ತದೆ ಎನ್ನಬಹುದು.

correction of ration card and addition of Family Members name

ಬಡತನ ರೇಖೆಗಿಂತ ಕೆಳಗಿರುವವರಿಗೆ (below poverty line) ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತೆ. ಹಾಗಾಗಿ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಯಾವುದೇ ಉಚಿತ ಯೋಜನೆಗಳು ಇದ್ದರೂ ಬಿಪಿಎಲ್ ಕಾರ್ಡ್ ಹೊಂದಿರುವವರು ಪಡೆದುಕೊಳ್ಳಬಹುದಾಗಿದೆ.

ಈ ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ರೆ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಸಿಗೋಲ್ಲ

ಆಹಾರ ಇಲಾಖೆ ರೇಷನ್ ಕಾರ್ಡ್ ರದ್ದುಪಡಿ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ, ನಿಯಮಗಳನ್ನು ಪಾಲಿಸದೇ ಇದ್ದರೆ ನಿಮ್ಮ ರೇಷನ್ ಕಾರ್ಡ್ ನಿಷ್ಕ್ರಿಯಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಇಷ್ಟಕ್ಕೂ ಉಚಿತ ಯೋಜನೆಗಳನ್ನು ಪಡೆದುಕೊಳ್ಳಲು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಏನು ಮಾಡಬೇಕು ಎಂಬುದನ್ನು ನೋಡೋಣ.

ಬಿಪಿಎಲ್ ಪಡಿತರ ಚೀಟಿ ಹೊಂದಿರುವವರು ಈ ಕೆಲಸ ಮಾಡಬೇಕು!

BPL Ration Cardಎಲ್ಲರಿಗೂ ತಿಳಿದಿರುವಂತೆ ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಸರ್ಕಾರದಿಂದ 5 ಕೆಜಿ ಉಚಿತ ಅಕ್ಕಿಯ (free rice) ಬದಲು ಪ್ರತಿ ಕೆಜಿಗೆ 34 ರೂಪಾಯಿಗಳಂತೆ 5 ಕೆಜಿಗೆ 170 ರೂಪಾಯಿಗಳನ್ನು ಪಡೆದುಕೊಳ್ಳುತ್ತಿದ್ದಾರೆ

ಈ ಹಣವನ್ನು ಫಲಾನುಭವಿಗಳ ಖಾತೆಗೆ (Bank Account) ನೇರವಾಗಿ ವರ್ಗಾವಣೆ (DBT) ಮಾಡಲಾಗುತ್ತಿದೆ, ಆದರೆ ಇನ್ನು ಮುಂದೆ ಈ ಯೋಜನೆಯ ಪ್ರಯೋಜನ ನಿಮಗೆ ಸಿಗಬೇಕು ಅಂದ್ರೆ ಈ ಕೆಲಸ ಮಾಡಬೇಕು.

ಗೃಹಲಕ್ಷ್ಮಿ ಹಣ ಇನ್ಮುಂದೆ ಯಾವುದೇ ಕಾರಣಕ್ಕೂ ಮಿಸ್ ಆಗೋಲ್ಲ; ಹೀಗೆ ಮಾಡಿ ಸಾಕು

ಎಲ್ಲರಿಗೂ ತಿಳಿದಿರುವಂತೆ ಬಡತನ ರೇಖೆಗಿಂತ ಕೆಳಗಿರುವವರ ಹಸಿವು ನೀಗಿಸಲು ಬಿಪಿಎಲ್ ರೇಷನ್ ಕಾರ್ಡ್ ಬಿಡುಗಡೆ ಮಾಡಲಾಗಿತ್ತು. ಇದರ ಅಡಿಯಲ್ಲಿ ಸರ್ಕಾರದಿಂದ ಉಚಿತ ಪಡಿತರ ವಸ್ತುಗಳನ್ನು ನ್ಯಾಯಬೆಲೆ ಅಂಗಡಿಯ ಮೂಲಕ ಫಲಾನುಭವಿಗಳಿಗೆ ನೀಡಲಾಗುತ್ತಿದೆ

ಆದರೆ ಇಂದು ಅದೆಷ್ಟೋ ಜನ ಬಿಪಿಎಲ್ ಕಾರ್ಡ್ ಹೊಂದಿದ್ದರು ಕೂಡ ಪ್ರತಿ ತಿಂಗಳು ಪಡಿತರ ವಸ್ತುವನ್ನು ಪಡೆದುಕೊಳ್ಳುತ್ತಿಲ್ಲ, ಕೇವಲ ಗುರುತಿನ ಆಧಾರವಾಗಿ ಹಾಗೂ ಸರ್ಕಾರದ ಇತರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸುತ್ತಿದ್ದಾರೆ

ಒಂದು ತಿಂಗಳು ಪಡಿತರ ಪಡೆದು ಇನ್ನೊಂದು ತಿಂಗಳು ಪಡಿತರ ತೆಗೆದುಕೊಳ್ಳದೆ ಇರುವುದು ಅಥವಾ ಕಳೆದ ಆರು ತಿಂಗಳಿನಿಂದಲೂ ಪಡಿತರವನ್ನು ತೆಗೆದುಕೊಳ್ಳದೆ ಇದ್ದಂತಹ ಕುಟುಂಬವನ್ನು ಗುರುತಿಸಿ, ಅವರ ಪಡಿತರ ಕಾರ್ಡ್ ರದ್ದು ಪಡಿಸಲು ಸರ್ಕಾರ ಹೊಸ ಕ್ರಮ ಕೈಗೊಂಡಿದೆ.

ನಮ್ಮ ರಾಜ್ಯದಲ್ಲಿ ಒಟ್ಟು 1.27 ಕೋಟಿ ಹೆಚ್ಚು ಬಿಪಿಎಲ್ ಹಾಗೂ ಅಂತ್ಯೋದಯ ಕುಟುಂಬಗಳು ಇದ್ದು 4.37 ಕೋಟಿಗೂ ಅಧಿಕ ಫಲಾನುಭವಿಗಳು ಇದ್ದಾರೆ ಆದರೆ ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ ಆರು ತಿಂಗಳಿನಿಂದಲೂ ಸುಮಾರು 3.26 ಲಕ್ಷ ಬಿಪಿಎಲ್ ಕಾರ್ಡ್ ಹೊಂದಿರುವವರು ಪಡಿತರ ತೆಗೆದುಕೊಳ್ಳುತ್ತಿಲ್ಲ. ಹಾಗಾಗಿ ಇಂಥವರ ಪಡಿತರ ಚೀಟಿ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಇನ್ಮುಂದೆ ಈ ರೈತರು ತಮ್ಮ ಜಮೀನು, ಆಸ್ತಿ ಮಾರಾಟ ಮಾಡುವಂತಿಲ್ಲ! ಖಡಕ್ ಸೂಚನೆ

Cancellation of BPL ration card of such people, Govt decision