ಮಂಗಳೂರಿನಲ್ಲಿ ಆಘಾತಕಾರಿ ಘಟನೆ, ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಬೆಂಕಿ

Story Highlights

ಮಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ, ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ.

  • ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಬೆಂಕಿ
  • ಭಾರೀ ಬೆಂಕಿ, ಹೊತ್ತಿಹುರಿದ ಕಾರು
  • ಮಂಗಳೂರು ಪೆಟ್ರೋಲ್ ಬಂಕ್‌ನಲ್ಲಿ ಘಟನೆ

ಮಂಗಳೂರು (Mangaluru): ಮಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಹೌದು, ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಮಂಗಳೂರಿನ ಪೆಟ್ರೋಲ್ ಬಂಕ್‌ನಲ್ಲಿ (Petrol Bunk) ಭಾನುವಾರ ಸಂಜೆ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದ ವೇಳೆ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಬೆಂಕಿ ಹೊತ್ತಕೊಂಡ ತಕ್ಷಣ ಅವರೆಲ್ಲರೂ ಸುರಕ್ಷಿತವಾಗಿ ಕಾರಿನಿಂದ ಹೊರಬಂದಿದ್ದಾರೆ. ಈ ಘಟನೆಯಿಂದ ಗಾಬರಿಗೊಂಡ ಪೆಟ್ರೋಲ್ ಬಂಕ್ ಸಿಬ್ಬಂದಿ ಬಕೆಟ್‌ಗಳಲ್ಲಿ ನೀರು ಸುರಿದು ಬೆಂಕಿ ನಂದಿಸಲು ಯತ್ನಿಸಿದರು. ಕಾರು ಹೊತ್ತಿ ಉರಿದ ದೃಶ್ಯ ಇದೀಗ ವೈರಲ್ ಆಗಿದೆ.

Car Catches Fire At Mangaluru Petrol Pump

Related Stories