ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಹೊತ್ತಿ ಉರಿದ ಕಾರು: ಪ್ರಯಾಣಿಕರು ಪಾರು

Car Catches Fire: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Car Catches Fire: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಂಡೀಪುರ ಅಭಯಾರಣ್ಯದ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದ ಕಾರು ಬೆಂಕಿ ಅವಘಡ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ತಮಿಳುನಾಡಿನ ಬೊಕ್ಕಪುರಂನಲ್ಲಿರುವ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪಟ್ಟಣದ ಪುರಸಭೆಯ ಮಾಜಿ ಸದಸ್ಯ ರಂಗಸ್ವಾಮಿ (ಪಟ್ಟಾಭಿ) ಅವರಿಗೆ ಸೇರಿದ ಕಾರು ಇದಾಗಿತ್ತು. ಪ್ರಯಾಣ ಮುಂದುವರಿದಿದ್ದಾಗ ಕಾರಿನೊಳಗಿನಿಂದ ದಿಢೀರನೆ ಹೊಗೆ ಕಾಣಿಸಿಕೊಳ್ಳಲು ಆರಂಭಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ.

ಕಾರಿನಲ್ಲಿದ್ದ ಎಲ್ಲರೂ ಕೂಡಲೇ ಕೆಳಗಿಳಿದಿದ್ದಾರೆ. ಅವರು ಹೊರಬಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆಯೇ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ (Fire and Rescue Services) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯ (Gundlupet Police) ಸಿಬ್ಬಂದಿ ಘಟನೆಯ ಕುರಿತು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

TRENDING ARTICLES1 / 5
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories