ಡಿವೈಡರ್‌ಗೆ ಡಿಕ್ಕಿ; ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು! ಮಹಿಳೆ ಸ್ಥಿತಿ ಗಂಭೀರ
ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

- ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು
- ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ
- ಮಹಿಳೆಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಮಂಡ್ಯ (Mandya), ಸೆಪ್ಟೆಂಬರ್ 18: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway)ಯಲ್ಲಿ ಶುಕ್ರವಾರ ಬೆಳಗ್ಗೆ ಗಂಭೀರ ರಸ್ತೆ ಅಪಘಾತ (Accident) ಸಂಭವಿಸಿದೆ. ಉಮ್ಮಡಹಳ್ಳಿ ಗೇಟ್ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅತಿವೇಗದಿಂದ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಫ್ಲೈಓವರ್‌ನಿಂದ ಕೆಳಕ್ಕೆ ಹಾರಿ ಅಂಡರ್‌ಪಾಸ್‌ಗೆ (Underpass) ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆಯ ಪತಿ ಹಾಗೂ ಅವರ ಸ್ನೇಹಿತ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ (Road Accident) ಬಳಿಕ ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಂಡ್ಯದ ಮಿಮ್ಸ್ ಆಸ್ಪತ್ರೆಗೆ (MIMS Hospital) ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಬಳಿಕ ಗಾಯಗೊಂಡಿದ್ದ ಪತ್ನಿಯ ಸ್ಥಿತಿ ಕಂಡು ಪತಿ ಸ್ಥಳದಲ್ಲೇ ಆತಂಕಗೊಂಡು ಗೋಳಾಡುತ್ತಿದ್ದ ದೃಶ್ಯ ಕಂಡುಬಂದಿದೆ. ಘಟನೆ ಸ್ಥಳದಲ್ಲಿದ್ದವರ ಮನಕಲಕುವಂತೆ ಮಾಡಿದೆ.
ಮಾಹಿತಿ ತಿಳಿದು ಮಂಡ್ಯ ಸೆಂಟ್ರಲ್ ಠಾಣೆ (Mandya Central Police Station) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



