ಅನ್ನಭಾಗ್ಯ ಯೋಜನೆಯ ಏಪ್ರಿಲ್ ತಿಂಗಳ ಹಣ ನಿಮ್ಮ ಖಾತೆಗೆ ಬಂದಿದ್ಯಾ ಚೆಕ್ ಮಾಡಿ!
ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಇಲ್ಲದೆ ಇದ್ದರೆ ಇದೀಗ ಹೊಸದಾಗಿ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಡುತ್ತದೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಂತೆ, 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಅನ್ನಭಾಗ್ಯ ಯೋಜನೆಯು (Annabhagya Scheme) ಕೂಡ ಒಂದು.
ಬಡತನ ರೇಖೆಗಿಂತ ಕೆಳಗಿರುವವರು ಬಿಪಿಎಲ್ ಕಾರ್ಡ್ (BPL Card) ಹೊಂದಿದ್ದರೆ ಉಚಿತವಾಗಿ ರೇಷನ್ ಪಡೆಯಬಹುದು. ಅದರ ಜೊತೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುವುದಾಗಿ ಹೇಳಿತ್ತು ಆದರೆ ಇದುವರೆಗೆ ಅಕ್ಕಿ ಹೊಂದಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ರಾಜ್ಯ ಸರ್ಕಾರ ಈಗ ಫಲಾನುಭವಿಗಳಿಗೆ ಅಕ್ಕಿಯ ಬದಲು ಹಣವನ್ನು ಜಮಾ ಮಾಡುತ್ತಿದೆ.
ಗೃಹಜ್ಯೋತಿ ಯೋಜನೆ ಇದ್ರೂ ಕರೆಂಟ್ ಬಿಲ್ ಬರ್ತಾಯಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ
ಹೌದು, ಕಳೆದ ಏಳು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 170 ರೂಪಾಯಿಗಳನ್ನು ಮನೆಯ ಪ್ರತಿಯೊಂದು ಸದಸ್ಯರಿಗೂ ಸೇರಿಸಿ ಮನೆಯ ಯಜಮಾನನ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.
ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ!
ಒಂದು ವೇಳೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಇಲ್ಲದೆ ಇದ್ದರೆ ಇದೀಗ ಹೊಸದಾಗಿ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಡುತ್ತದೆ. ರೇಷನ್ ಕಾರ್ಡ್ ಒಂದಿದ್ರೆ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುವುದರ ಜೊತೆಗೆ ಪ್ರಮುಖ ಗುರುತಿನ ಚೀಟಿಯಾಗಿ ಬಳಸಿಕೊಳ್ಳಬಹುದಾಗಿದೆ. ಇದೀಗ ವೈದ್ಯಕೀಯ ಎಮರ್ಜೆನ್ಸಿ ಇರುವ ಜನರು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದರೆ ಶೀಘ್ರವೇ ಸರ್ಕಾರ ಮಂಜೂರು ಮಾಡುತ್ತದೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರೇ ಮೊದಲು ಅಕೌಂಟ್ ಚೆಕ್ ಮಾಡಿಕೊಳ್ಳಿ!
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯಾ ಚೆಕ್ ಮಾಡಿ!
ಆನ್ಲೈನಲ್ಲಿ ನೀವು ನಿಮ್ಮ DBT ಸ್ಟೇಟಸ್ ಚೆಕ್ ಮಾಡಬಹುದು. ಇದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ https://ahara.kar.nic.in/lpg/ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಈಗ ನಿಮಗೆ ಮೂರು ಲಿಂಕ್ಗಳು ಕಾಣಿಸುತ್ತವೆ. ಆದರೆ ಕೆಳಭಾಗದಲ್ಲಿರುವ ನಿಮ್ಮ ಜಿಲ್ಲೆ ಯಾವುದು ಎಂಬುದನ್ನು ಆಯ್ಕೆ ಮಾಡಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬಿಪಿಎಲ್ ಕಾರ್ಡುದಾರರಿಗೆ ಆತಂಕ; ಇಂಥವರಿಗೆ ಇನ್ಮುಂದೆ ಗ್ಯಾರಂಟಿ ಯೋಜನೆಯ ಹಣ ಬರಲ್ಲ!
ಈಗ ಡಿಬಿಟಿ ಸ್ಟೇಟಸ್ ಎನ್ನುವ ಆಯ್ಕೆಯನ್ನು ಮಾಡಿ. ಬಳಿಕ ವರ್ಷ ತಿಂಗಳು, ರೇಷನ್ ಕಾರ್ಡ್ ಸಂಖ್ಯೆ, ಕ್ಯಾಪ್ಟನ್ ನಂಬರ್ ಇವುಗಳನ್ನು ನಮೂದಿಸಿ ಗೋ ಎಂದು ಕೊಟ್ಟರೆ ನೀವು ಯಾವ ತಿಂಗಳನ್ನು ಆಯ್ಕೆ ಮಾಡಿದ್ದೀರೋ, ಆ ತಿಂಗಳಿನಲ್ಲಿ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ (Bank Account) ಬಿಡುಗಡೆ ಆಗಿದೆಯೋ ಇಲ್ಲವೋ ಎಂದು ತಿಳಿಯುತ್ತದೆ.
Check April month Annabhagya Yojana Money reached your Bank account