ರೈತ ಮಹಿಳೆಯರಿಗೆ ಉಚಿತ ನಾಟಿ ಕೋಳಿಮರಿ ವಿತರಣೆ; ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಿ

ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ; ಪ.ಜಾತಿ, ಪ.ಪಂ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಗೆ ಯೋಜನೆಯಡಿ ಕೋಳಿಮರಿಗಳನ್ನು ವಿತರಿಸಲಾಗುತ್ತದೆ.

  • 20 ನಾಟಿ ಕೋಳಿಮರಿಗಳ ವಿತರಣೆ
  • ಗ್ರಾಮೀಣ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
  • ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು (Bengaluru): ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ, ಬೆಂಗಳೂರು (Karnataka Cooperative Poultry Federation) ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: ಈ ದಾಖಲೆಗಳು ರೆಡಿ ಇರಲಿ! ಮನೆ-ಮನೆಗೆ ತೆರಳಿ ಮರುಪರಿಶೀಲನೆ ಆರಂಭ

ಪ.ಜಾತಿ, ಪ.ಪಂ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಆಸಕ್ತ ರೈತ ಮಹಿಳೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳಿಗೆ 5 ವಾರಗಳ ವಯಸ್ಸಿನ 20 ದೇಶಿ ಅಥವಾ ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಭಾಗ್ಯ; ಅ.31ರೊಳಗೆ ಅರ್ಜಿ ಸಲ್ಲಿಸಿ

ಯೋಜನೆಯ ಪ್ರಯೋಜನ ಪಡೆಯಲು ಆಸಕ್ತ ಮಹಿಳೆಯರು ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳ ಕುರಿತು ಸ್ಥಳೀಯ ಪಶುವೈದ್ಯ ಸಂಸ್ಥೆ ಅಥವಾ ತಾಲೂಕು ಪಶು ಆಸ್ಪತ್ರೆಯಿಂದ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (Chief Veterinary Officer) ಅವರನ್ನು ಸಂಪರ್ಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ತಿಳಿಸಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories