ಭ್ರಷ್ಟಾಚಾರ, ವಿಳಂಬ ಧೋರಣೆ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ಭ್ರಷ್ಟಾಚಾರ (corruption) ಮತ್ತು ವಿಳಂಬ ಧೋರಣೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಲಿದ್ದು, ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
- ಭ್ರಷ್ಟಾಚಾರ, ವಿಳಂಬ ಧೋರಣೆ ಸಹಿಸುವುದಿಲ್ಲ, ಸಿಎಂ
- ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ
- ಅಭಿವೃದ್ಧಿಗೆ ಯಾವುದೇ ನಿರ್ಧಾರ ಕೈಗೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ
ಬೆಂಗಳೂರು (Bengaluru): ಭ್ರಷ್ಟಾಚಾರ (corruption) ಮತ್ತು ವಿಳಂಬ ಧೋರಣೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಲಿದ್ದು, ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ (Assembly Hall in Vidhana Souda) ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿಶೇಷವಾಗಿ ರಜಾದಿನವಾದ ಭಾನವರವೂ ಸಭೆ ನಡೆಸಿರುವುದು.
ಸಮಯದ ಮಿತಿಯನ್ನು ಬಿಟ್ಟು ಕೆಲಸ ಮಾಡಿ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ವಿಳಂಬ ಧೋರಣೆ ಬಿಟ್ಟು ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ. ಬಡವರಿಗೆ ಸಹಾಯ ಮಾಡಲು, ಅಭಿವೃದ್ಧಿಗೆ ಯಾವುದೇ ನಿರ್ಧಾರ ಕೈಗೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಬಜೆಟ್ ಕಾರ್ಯಕ್ರಮದ ಅನುಷ್ಠಾನಕ್ಕೆ ಒಟ್ಟು ನೀಡಿ ಮತ್ತು ಆಡಳಿತದಲ್ಲಿ ಸಂಪೂರ್ಣ ಬದಲಾವಣೆ ಮಾಡಲು ಸಂಕಲ್ಪ ಮಾಡಿ ಎಂದು ಸೂಚಿಸಿದರು.
ಭ್ರಷ್ಟಾಚಾರ, ವಿಳಂಬ ಧೋರಣೆ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
Follow Us on : Google News | Facebook | Twitter | YouTube