ಚಳಿ ಹಾಗೂ ಶೀತಗಾಳಿಗೆ ಕರ್ನಾಟಕ ತತ್ತರ! ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಿಗೆ ಅಲರ್ಟ್

ರಾಜ್ಯಾದ್ಯಂತ ಮುಂದಿನ ಎರಡು ದಿನ ಚಳಿ ತೀವ್ರವಾಗಲಿದ್ದು ಕನಿಷ್ಠ ತಾಪಮಾನ 9 ಡಿಗ್ರಿವರೆಗೆ ಇಳಿಕೆ ಸಾಧ್ಯತೆ ಇದೆ ಹವಾಮಾನ ಇಲಾಖೆ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮಂಜು ಶೀತಗಾಳಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ

  • ಕರ್ನಾಟಕ ಚಳಿ: ಉತ್ತರ ಒಳನಾಡಿನಲ್ಲಿ ಶೀತದ ಅಲೆ ತೀವ್ರ
  • ಆರೆಂಜ್ ಅಲರ್ಟ್: 5 ಜಿಲ್ಲೆಗಳಲ್ಲಿ ಹೆಚ್ಚುವರಿ ಎಚ್ಚರಿಕೆ
  • ಕನಿಷ್ಠ ತಾಪಮಾನ: 9°C ವರೆಗೆ ಇಳಿಯುವ ಸಾಧ್ಯತೆ

Karnataka Weather: ಉತ್ತರ ಭಾರತದಿಂದ ಪ್ರವೇಶಿಸಿರುವ ಒಣ ಹಾಗೂ ಶೀತಗಾಳಿಯ ಪರಿಣಾಮವಾಗಿ ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ (Cold Wave Alert). ಬೆಳಗ್ಗೆ ಹಾಗೂ ರಾತ್ರಿ ಸಮಯದಲ್ಲಿ ತಾಪಮಾನ ತೀವ್ರವಾಗಿ ಇಳಿಯುತ್ತಿದ್ದು, ಜನಜೀವನದ ಮೇಲೆ ಸ್ಪಷ್ಟ ಪರಿಣಾಮ ಕಾಣಿಸುತ್ತಿದೆ.

5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಡಿಸೆಂಬರ್ 14ರಿಂದ 16ರವರೆಗೆ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಶೀತದ ಅಲೆ ತೀವ್ರವಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್ ಇರುವ ಜಿಲ್ಲೆಗಳು

ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಇಲ್ಲಿ ಕನಿಷ್ಠ ತಾಪಮಾನ 9ರಿಂದ 12 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ಇಳಿಯುವ ಸಾಧ್ಯತೆ ಇದೆ.

ಬೆಂಗಳೂರು ವಾತಾವರಣ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬೆಳಗ್ಗೆಯ ಹೊತ್ತಿನಲ್ಲಿ ಮಂಜು ಕವಿದ ವಾತಾವರಣ ಮುಂದುವರಿಯಲಿದೆ. ಕನಿಷ್ಠ ತಾಪಮಾನ 12ರಿಂದ 14 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದ್ದು, ಗಾಳಿಯ ವೇಗ ಗಂಟೆಗೆ 8 ಕಿ.ಮೀ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಜನರಿಗೆ ಹವಾಮಾನ ಇಲಾಖೆ ಸಲಹೆ

ಮಕ್ಕಳು ಮತ್ತು ವೃದ್ಧರು ಮುಂಜಾನೆ ಹೊರಗೆ ಹೋಗುವುದನ್ನು ತಪ್ಪಿಸುವುದು ಉತ್ತಮ. ಬೆಚ್ಚನೆಯ ಬಟ್ಟೆ ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಸಮತೋಲನ ಆಹಾರ ಸೇವಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಡಿಸೆಂಬರ್ 17ರ ನಂತರ ಚಳಿ ನಿಧಾನವಾಗಿ ತಗ್ಗುವ ನಿರೀಕ್ಷೆಯಿದೆ.

TRENDING ARTICLES1 / 5

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories