Karnataka Weather: ಕರ್ನಾಟಕದಲ್ಲಿ ದಟ್ಟ ಮಂಜು ಚಳಿ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ

Karnataka Weather: ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಶೀತಗಾಳಿ ತೀವ್ರವಾಗಿದ್ದು, ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಹಗುರ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

  • ವಾಯುಭಾರ ಕುಸಿತದಿಂದ 3 ದಿನ ಮಳೆ ಸಾಧ್ಯತೆ
  • ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಶೀತಗಾಳಿ
  • ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ

Karnataka Weather: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ವಾತಾವರಣದಲ್ಲಿ ಏಕಾಏಕಿ ಬದಲಾವಣೆ ಕಂಡುಬಂದಿದೆ. ಈಗಾಗಲೇ ದಟ್ಟ ಮಂಜು (Dense Fog) ಮತ್ತು ತೀವ್ರ ಚಳಿ ಕಾಡುತ್ತಿರುವ ನಡುವೆಯೇ, ಮುಂದಿನ 3 ದಿನಗಳ ಕಾಲ ಹಗುರ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮೋಡ, ಚಳಿ ಮತ್ತು ತುಂತುರು ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ದಟ್ಟ ಮಂಜು, ಮೋಡ ಮುಸುಕಿದ ಆಕಾಶ ಹಾಗೂ ಚಳಿ ವಾತಾವರಣ ಮುಂದುವರಿದಿದೆ. ಕೆಲವು ಭಾಗಗಳಲ್ಲಿ ಈಗಾಗಲೇ ತುಂತುರು ಮಳೆ (Rain Update) ದಾಖಲಾಗಿದ್ದು, ಮುಂದುವರಿಯುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 22 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದು! ಲಕ್ಷಾಂತರ ಕಾರ್ಡ್‌ಗಳು ಎಪಿಎಲ್‌ಗೆ ವರ್ಗ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸೂಚನೆ

ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಚಳಿ ವಾತಾವರಣವೂ (Cold Wave) ತೀವ್ರವಾಗಿರಲಿದೆ ಎಂದು ಇಲಾಖೆ ತಿಳಿಸಿದೆ.

ಒಣಹವೆ ಮುಂದುವರಿಯುವ ಜಿಲ್ಲೆಗಳು

ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಚಳಿಯ ಪ್ರಮಾಣ ಹೆಚ್ಚಿರಲಿದೆ. ಹಗಲಿನ ವೇಳೆಯಲ್ಲೂ ತಾಪಮಾನದಲ್ಲಿ ಹೆಚ್ಚಿನ ಏರಿಕೆ ಕಂಡುಬರುವುದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಹಣ ಜಮಾ: ಇಲ್ಲಿದೆ ಫೆಬ್ರವರಿ–ಮಾರ್ಚ್ ತಿಂಗಳ ಬಿಗ್ ಅಪ್‌ಡೇಟ್

ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್

ಭಾರೀ ಶೀತಗಾಳಿ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿ, ಒಣಹವೆ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳ ಸ್ಥಿತಿ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಒಣಹವೆ ಮುಂದುವರಿಯಲಿದೆ. ಜನವರಿ 14ರವರೆಗೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories