ಕರ್ನಾಟಕ ಹವಾಮಾನ ಮುನ್ಸೂಚನೆ, ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ! ಯೆಲ್ಲೋ ಅಲರ್ಟ್
ಕರ್ನಾಟಕ ರಾಜ್ಯಾದ್ಯಂತ ಚಳಿಯ ಪ್ರಭಾವ ಹೆಚ್ಚಾಗಿದ್ದು, ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಶೀತದಲೆ ತೀವ್ರವಾಗಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
- ಕರ್ನಾಟಕ ರಾಜ್ಯದಲ್ಲಿ ಚಳಿ ಹೆಚ್ಚಳ
- ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು (Bengaluru): ಕರ್ನಾಟಕ ರಾಜ್ಯದೆಲ್ಲೆಡೆ ಚಳಿ ದಿನೇ ದಿನೇ ಹೆಚ್ಚಾಗುತ್ತಿದ್ದು (Karnataka Weather Update), ಜನಜೀವನದ ಮೇಲೆ ಅದರ ಪರಿಣಾಮ ಸ್ಪಷ್ಟವಾಗಿ ಕಾಣುತ್ತಿದೆ. ವಿಶೇಷವಾಗಿ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶೀತದಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗ್ಗಿನ ಸಮಯದಲ್ಲಿ ತಾಪಮಾನ (Cold Wave) ಗಣನೀಯವಾಗಿ ಇಳಿಕೆಯಾಗುತ್ತಿದೆ. ಈ ಪ್ರದೇಶಗಳ ನಿವಾಸಿಗಳು ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರ ವಹಿಸುವಂತೆ ಇಲಾಖೆ ಸೂಚಿಸಿದೆ.
ಒಣ ಹವೆಯ ವಾತಾವರಣ
ಉತ್ತರ ಒಳನಾಡಿನ ಹಲವು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಒಣ ಹವೆಯ ವಾತಾವರಣ ಮುಂದುವರಿದಿದೆ. ಇದೇ ಪರಿಸ್ಥಿತಿ ಇಂದೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿಯೂ ಒಣ ಹವೆ ಆವರಿಸಲಿದೆ.
ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಕಡಿಮೆ ಇದ್ದು, ಒಣ ಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರು: ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ ಮಗುವಿಗೆ ಒದ್ದ ವ್ಯಕ್ತಿ! ವಿಡಿಯೋ ನೋಡಿ ರಕ್ತ ಕುದಿಯುತ್ತೆ
ಬೆಂಗಳೂರು ಭಾಗದಲ್ಲಿ ಮೈಕೊರೆಯುವ ಚಳಿ
ರಾಜಧಾನಿ ಬೆಂಗಳೂರಿನಲ್ಲಿ (Bangalore) ಕಳೆದ ಕೆಲ ದಿನಗಳಿಂದ ಚಳಿ ಜನರನ್ನು ಕಾಡುತ್ತಿದೆ. ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಚಳಿಯ ಅನುಭವ ಹೆಚ್ಚು ಕಾಣಿಸಿಕೊಂಡಿದ್ದು, ಮಕ್ಕಳು ಹಾಗೂ ವೃದ್ಧರು ಹೆಚ್ಚಿನ ಜಾಗ್ರತೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಚ್ಚನೆಯ ಉಡುಪು ಧರಿಸುವುದು ಹಾಗೂ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.
ಮಳೆ ಜೊತೆ ಮೈ ನಡುಗಿಸುವ ಚಳಿ! ಬೆಂಗಳೂರು ಸೇರಿ 2 ದಿನಗಳ ಕರ್ನಾಟಕ ಹವಾಮಾನ ಮುನ್ಸೂಚನೆ ಹೀಗಿದೆ
Read the story
ಕರ್ನಾಟಕ ಮಹಿಳೆಯರಿಗೆ ₹2 ಲಕ್ಷದವರೆಗೆ ಸಾಲ ಸೌಲಭ್ಯ; ಸ್ವಂತ ಉದ್ಯಮ ಆರಂಭಿಸಲು ಆರ್ಥಿಕ ನೆರವು
Read the story
ಇನ್ನು ಮೂರೇ ದಿನ ಗಡುವು! ನವೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಹೊಸ ನಿಯಮ
Read the story
ರೈತರಿಗೆ ಅನುಗ್ರಹ ಯೋಜನೆ ಹಣ ಬಿಡುಗಡೆ! ಬಾಕಿ ಉಳಿದಿದ್ದ ಪರಿಹಾರ ಮೊತ್ತ ಖಾತೆಗೆ ಜಮಾ
Read the story
ಇನ್ನು 2 ದಿನಗಳಲ್ಲಿ ರೈತರ ಖಾತೆಗೆ 2 ಸಾವಿರ ಜಮಾ; ಗುಡ್ ನ್ಯೂಸ್ ಕೊಟ್ಟ ಮೋದಿಜಿ
Read the story



