Welcome To Kannada News Today

ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿ: ಸಿಎಂ ಭರವಸೆ

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಶ್ರೀ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಹೇಳಿದ್ದಾರೆ.

The latest news today at your fingertips ! 👇
Kannada News Today an Google News
Google
Kannada news Today Koo App
Koo App
Kannada News Today App an Google Play Store
News App
Kannada News Today on Twitter
Twitter
Kannada news Today Facebook Page
Fb
🌐 Kannada News :

( Kannada News Today ) : ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ಶ್ರೀ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದ ಸಭಾಂಗಣದಲ್ಲಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಯವರು ಪ್ರಾಧಿಕಾರದ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರದ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಧಿಕಾರದ ವತಿಯಿಂದ ೧೫ ಶಾಲೆಗಳನ್ನು ಗುರುತಿಸಲಾಗಿದೆ.

ಈ ಶಾಲೆಗಳನ್ನು ದತ್ತು ತೆಗೆದುಕೊಂಡು ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿ ಶಾಲೆಗಳ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಮಾಡಿಕೊಡಲಾಗುವುದು.

ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದು, ಇದರಲ್ಲಿ ಈಗಾಗಲೇ ಪೂರ್ಣಗೊಂಡಿರುವ ಹಲವು ಕಾಮಗಾರಿಗಳಿದ್ದು. ಇನ್ನು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.

ಪ್ರಾಧಿಕಾರದ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಸುರೇಶ್ ಕುಮಾರ್, ಸಾಲೂರು ಮಠದ ಶ್ರೀಗಳಾದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು ಇದ್ದರು.

ಜೊತೆಗೆ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಶಾಸಕರಾದ ಆರ್ ನರೇಂದ್ರ, ಎನ್ ಮಹೇಶ್, ಸಿ.ಪುಟ್ಟರಂಗಶೆಟ್ಟಿ, ಸಿ.ಎಸ್.ನಿರಂಜನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಪಂ ಸಿಇಓ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಇದ್ದರು.

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.

Google News ಹಾಗೂ Kannada News Today App ನಲ್ಲಿ ಎಲ್ಲಾ ಅಪ್ಡೇಟ್ ಪಡೆಯಿರಿ