ಇಂತಹ ರೈತರ ಖಾತೆಗೆ ಬರ ಪರಿಹಾರ ಹಣ 2000 ರೂಪಾಯಿ ಬಿಡುಗಡೆ! ಬಿಗ್ ಅಪ್ಡೇಟ್
ಕಡೆಗೂ ರಾಜ್ಯ ಸರ್ಕಾರ (State government) ರಾಜ್ಯದಲ್ಲಿ ಬರಪೀಡಿತ ಪ್ರದೇಶ (Drought prone area) ಗಳಲ್ಲಿ ವಾಸಿಸುವ ರೈತರಿಗೆ ತಾತ್ಕಾಲಿಕ ಬರ ಪರಿಹಾರವನ್ನು ಬಿಡುಗಡೆ ಮಾಡಿರುವುದಾಗಿ ಘೋಷಣೆ ಮಾಡಿದೆ. ಇದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರತಿ ವರ್ಷಕ್ಕಿಂತ ಈ ಬಾರಿ ಮುಂಗಾರು ಮಳೆಯ ಅಭಾವದಿಂದ ರಾಜ್ಯದ ರೈತರು (farmers ) ಸಂಕಷ್ಟ ಎದುರಿಸುವಂತೆ ಆಗಿದೆ. ಈಗಾಗಲೇ ರಾಜ್ಯದಲ್ಲಿ 229 ಹೆಚ್ಚಿನ ಸ್ಥಳಗಳನ್ನು ಬರ ಪೀಡಿತ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದೆ.
ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಒಟ್ಟಿಗೆ ಜಮಾ; ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ
ಇಂಥ ಸ್ಥಳದಲ್ಲಿ ರೈತರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ತೊಂದರೆ ಆಗದಂತೆ ಸರ್ಕಾರ ರೈತರ ಹಿತ ದೃಷ್ಟಿಯಿಂದ ಕೆಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ.
ಕೇಂದ್ರ ಸರ್ಕಾರದ ಮೇಲೆ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ!
ರಾಜ್ಯದಲ್ಲಿ ಇರುವ ಬಿಜೆಪಿ ನಾಯಕರು ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಬರ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ಪ್ರಯತ್ನ ಮಾಡಬೇಕು ಅದನ್ನ ಬಿಟ್ಟು ನಾವು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆಗೆ ಟೀಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಸರ್ಕಾರದಿಂದ 100 ರೂಪಾಯಿಗಳನ್ನು ಕೇಂದ್ರಕ್ಕೆ ಕಳುಹಿಸಿದರೆ ಕೇವಲ 13 ರೂಪಾಯಿಗಳನ್ನು ಹಿಂತಿರುಗಿ ಕೊಡಲಾಗುತ್ತಿದೆ. ರಾಜ್ಯದಿಂದ ಒಟ್ಟು ಸಂಗ್ರಹವಾಗಿರುವ 4,30,000 ಕೋಟಿ ಹಣದಲ್ಲಿ ರಾಜ್ಯಕ್ಕೆ ಸಿಕ್ಕ ಹಣ ಕೇವಲ 50,257 ಕೋಟಿ ಮಾತ್ರ. ಕೇಂದ್ರದ ಧೋರಣೆಯನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಯೊಂದಿಗೆ ಮಾತನಾಡಿ ಹೇಳಿದರು.
ಇಂತಹವರ ರೇಷನ್ ಕಾರ್ಡ್ ಹೊಸ ಅರ್ಜಿಗಳು ರಿಜೆಕ್ಟ್! ರದ್ದಾದವರ ಪಟ್ಟಿ ಬಿಡುಗಡೆ
ಬರ ಪರಿಹಾರಕ್ಕೆ ನಿಧಿ ಬಿಡುಗಡೆ!
ರಾಜ್ಯದಲ್ಲಿ ಬರ ನೀಡಿದ ಪ್ರದೇಶದ ಜನರಿಗೆ ಕುಡಿಯುವ ನೀರು, ಉದ್ಯೋಗ, ಜಾನುವಾರುಗಳಿಗೆ ಮೇವು, ಇದ್ಯಾವುದಕ್ಕೂ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ 860 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗಿದೆ.
ಸುಮಾರು 34 ಲಕ್ಷ ಜನರಿಗೆ ತಲಾ ಎರಡು ಸಾವಿರ ರೂಪಾಯಿಗಳನ್ನು ನೀಡುವುದಕ್ಕಾಗಿ 650 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಹಿಳೆಯರಿಗೆ ಮತ್ತೊಂದು ಯೋಜನೆ ಜಾರಿಗೆ ತಂದ ಸರ್ಕಾರ; ಸಿಗಲಿದೆ ಇನ್ನಷ್ಟು ಬೆನಿಫಿಟ್
ಕೇಂದ್ರ ಸರ್ಕಾರ (Central government) ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಬಹುವಾಗಿ ಟೀಕಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ನಾಯಕರು ರಾಜ್ಯ ಸರ್ಕಾರಕ್ಕೆ ಅಗತ್ಯ ಇರುವ ಅನುದಾನವನ್ನು ತರಲು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಹುದಿತ್ತು. ಆದರೆ ಈ ಕೆಲಸ ಮಾಡುತ್ತಿಲ್ಲ. ಕೇವಲ ಭಾಷಣ ಮಾಡುತ್ತಾರೆ ಎಂದು ದೂರಿದರು.
Drought relief money of 2000 rupees was released to the account of such farmers