Karnataka Weather: ಕರ್ನಾಟಕ ರಾಜ್ಯದಲ್ಲಿ ಮಳೆ ನಿರೀಕ್ಷೆಯಿಲ್ಲ! ಬೆಂಗಳೂರು ಸೇರಿ ಬಿಸಿಲಿನ ತಾಪ ಹೆಚ್ಚಳ
Karnataka Weather: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇನ್ನೂ ಕೆಲವು ದಿನಗಳವರೆಗೆ ಇದೇ ಶುಷ್ಕ ವಾತಾವರಣ ಇರಲಿದ್ದು, ಬೆಂಗಳೂರು ತಾಪಮಾನ 17°C ರಿಂದ 31°C ನಡುವೆ ದಾಖಲಾಗಲಿದೆ.

- ಕರ್ನಾಟಕ ಹವಾಮಾನ ವರದಿ
- ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ
- ಬೆಂಗಳೂರು ತಾಪಮಾನ: ಕನಿಷ್ಠ 17°C, ಗರಿಷ್ಠ 31°C
ಬೆಂಗಳೂರು (Bengaluru): ಕರ್ನಾಟಕದಲ್ಲಿ ಕಳೆದ ಹಲವು ದಿನಗಳಿಂದ ಆವರಿಸಿರುವ ಒಣಹವೆ (Karnataka Weather) ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಲಕ್ಷಣ ಕಾಣಿಸದ ಹಿನ್ನೆಲೆಯಲ್ಲಿ ಜನರು ಬಿಸಿಲಿನ ತಾಪಕ್ಕೆ ಸಿಲುಕುತ್ತಿದ್ದಾರೆ. ದಕ್ಷಿಣ ಒಳನಾಡಿನಲ್ಲಿಯೂ ಇದೇ ರೀತಿಯ ಶುಷ್ಕ ವಾತಾವರಣ ಮುಂದುವರಿಯಲಿದೆ.
ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಚಿಹ್ನೆಯೇ ಇಲ್ಲ.
ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿಯೂ ಒಣಹವೆ ಮುಂದುವರಿದಿದೆ. ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಳೆ ನಿರೀಕ್ಷೆಯಿಲ್ಲ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಇದ್ದ ತೀವ್ರ ಚಳಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದ್ದರೂ, ಬೆಳಿಗ್ಗೆ ಮತ್ತು ರಾತ್ರಿ ವೇಳೆ ಚಳಿ ಅನುಭವವಾಗುತ್ತಿದೆ.
ಹವಾಮಾನ ಬದಲಾವಣೆಯಿಂದ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಬೆಚ್ಚಗಿನ ಉಡುಪು ಧರಿಸುವುದು ಮತ್ತು ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇನ್ನೂ ಕೆಲವು ದಿನಗಳವರೆಗೆ ಇದೇ ಪರಿಸ್ಥಿತಿ ಮುಂದುವರಿಯಬಹುದು. ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.



