ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ
ED Raids MUDA office : ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ED raids MUDA office : ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ, ಹೌದು, ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ (ಅಕ್ಟೋಬರ್ 18, 2024) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮೇಲೆ ದಾಳಿ ನಡೆಸಿದೆ.
ಈ ಸಂಬಂಧ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಡಿಗೆ ದೂರು ಕೂಡ ಸಲ್ಲಿಸಿದ್ದರು. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು .
ಇಡಿ ಅಧಿಕಾರಿಗಳು ಸಿಬ್ಬಂದಿಯಿಂದ ಕೆಲವು ದಾಖಲೆಗಳನ್ನು ಕೇಳಲಾಗಿದೆ ಮತ್ತು ಮುಡಾ ಅಧಿಕಾರಿಗಳು ಅದನ್ನು ನೀಡುತ್ತಿದ್ದಾರೆ ಎಂದು ಮುಡಾ ಕಚೇರಿಯ ಮೇಲೆ ದಾಳಿಯನ್ನು ಖಚಿತಪಡಿಸಿದ ಮೂಲಗಳು ತಿಳಿಸಿವೆ.
ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಎ4 ಆಗಿರುವ ದೇವರಾಜು ಅವರ ಮನೆ ಮೇಲೂ ಇಡಿ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಮುಡಾ ಕಚೇರಿ ಮೇಲೆ ದಾಳಿ ಮಾಡಿರುವ ಇಡಿ ಯಾವುದೇ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ.
ಇನ್ನು, ಸಿಎಂ ಸಿದ್ದರಾಮಯ್ಯ ಅವರಿಗೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡುವ ಸಾಧ್ಯತೆಯೂ ಇದೆ.
ED raids MUDA office in Mysuru