Karnataka News

ಹೆಜ್ಜೇನು ದಾಳಿ, ಬೆಳೆಗಳಿಗೆ ನೀರು ಹಾಯಿಸಲು ಹೋಗಿದ್ದ ರೈತ ಸಾವು

ಹೆಜ್ಜೇನು ದಾಳಿಯಿಂದ ಗಾಯಗೊಂಡ ರೈತ ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಸಾವನ್ನಪ್ಪಿದ ಘಟನೆ ರಾಣೇಬೆನ್ನೂರು ತಾಲೂಕಿನ ಮೈದೂರು ಗ್ರಾಮದಲ್ಲಿ ನಡೆದಿದೆ.

  • ಬೆಳೆಗಳಿಗೆ ನೀರು ಹಾಯಿಸಲು ಹೋದಾಗ ಹೆಜ್ಜೇನು ದಾಳಿ
  • ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೈತ
  • ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Bee Attack : ರಾಣೇಬೆನ್ನೂರು (Ranebennur) ತಾಲೂಕಿನ ಮೈದೂರು ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, 59 ವರ್ಷದ ರೈತ ಸುರೇಶಗೌಡ ಪಾಟೀಲ್ ಹೆಜ್ಜೇನು ದಾಳಿಯಿಂದ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

ವಾರದ ಹಿಂದೆಯೇ ಜಮೀನಿಗೆ ನೀರು ಹಾಯಿಸುತ್ತಿದ್ದಾಗ ರೈತನ ಮೇಲೆ ಹಠಾತ್ ಹೆಜ್ಜೇನು ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದರು. ತಕ್ಷಣವೇ ಕುಟುಂಬದವರು ಅವರನ್ನು ದಾವಣಗೆರೆಯ (Davanagere) ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿನ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದರೂ ರೈತನ ಪ್ರಾಣ ಉಳಿಸಲಾಗಿಲ್ಲ. ಚಿಕಿತ್ಸೆ ಫಲಕಾರಿಯಾಗದೆ, ಇಂದು ಅವರು ಕೊನೆಯುಸಿರೆಳೆದಿದ್ದಾರೆ.

ಹೆಜ್ಜೇನು ದಾಳಿ, ಬೆಳೆಗಳಿಗೆ ನೀರು ಹಾಯಿಸಲು ಹೋಗಿದ್ದ ರೈತ ಸಾವು

ತೋಟದಲ್ಲಿ ಎಮ್ಮೆ-ಕರುಗಳನ್ನು ಕಟ್ಟುತ್ತಿದ್ದ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ

ಈ ದುರ್ಘಟನೆಯ ಬಗ್ಗೆ ಮೃತ ರೈತನ ಕುಟುಂಬಸ್ಥರು ಕಳವಳ ವ್ಯಕ್ತಪಡಿಸಿದ್ದು, ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವಾಗ ಇಂತಹ ಅಪ್ರತೀಕ್ಷಿತ ಅಪಾಯಗಳು ಸಂಭವಿಸಬಹುದಾದ ಕಾರಣ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಹಾಗೂ ಕೃಷಿ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಘಟನೆ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Farmer Dies After Bee Attack in Field

English Summary

Our Whatsapp Channel is Live Now 👇

Whatsapp Channel

Related Stories