Leopard Attack: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿಯಲ್ಲಿ ಚಿರತೆ ದಾಳಿ; ತೋಟಕ್ಕೆ ತೆರಳಿದ್ದ ರೈತ ಸಾವು

Leopard Attack: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಕಾಕಡ ಹೂ ಬಿಡಿಸಲು ತೋಟಕ್ಕೆ ತೆರಳಿದ್ದ ರೈತ ಶಿವಸ್ವಾಮಿ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Leopard Attack: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚುತ್ತಿರುವ ಆತಂಕದ ನಡುವೆಯೇ, ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸೋಮವಾರ ಮುಂಜಾನೆ ನಡೆದ ಈ ಘಟನೆ ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ಗ್ರಾಮದ ಮಹಾದೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿದ್ದ ಹಾಗೂ ಪ್ರಗತಿಪರ ರೈತರಾಗಿದ್ದ ಶಿವಸ್ವಾಮಿ ಮೃತಪಟ್ಟವರು. ತಮ್ಮ ತೋಟದಲ್ಲಿ ಕಾಕಡ ಹೂ ಬಿಡಿಸುವ ಕೆಲಸಕ್ಕಾಗಿ ಮುಂಜಾನೆ ತೆರಳಿದ್ದಾಗ, ಏಕಾಏಕಿ ಎದುರಾದ ಚಿರತೆ ಅವರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರೆ, ತಾಲೂಕಿನಲ್ಲಿ ಚಿರತೆ ದಾಳಿಯಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಬಿಲ್ ಕೊಡಲು ಹೋದ ಸಿಬ್ಬಂದಿ ಮೇಲೆ ಬೀದಿ ನಾಯಿ ದಾಳಿ

ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಬೇಕು ಹಾಗೂ ಚಿರತೆ ಹಾವಳಿ ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳೀಯ ರೈತರು ಪ್ರತಿಭಟನೆ ನಡೆಸಿದರು.

ಕಾಡಿನಿಂದ ಆಹಾರ ಅರಸಿ ನಾಡಿಗೆ ಬರುತ್ತಿರುವ ವನ್ಯಜೀವಿಗಳಿಂದ ಜನರ ಜೀವಕ್ಕೆ ಅಪಾಯ ಎದುರಾಗುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ.

ಇದೇ ವೇಳೆ, ಮಾಜಿ ಶಾಸಕ ಎ. ಮಂಜುನಾಥ್ (A. Manjunath) ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಅವರು ಮೃತರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಶಿವಸ್ವಾಮಿ ಅವರ ಸಾವಿನಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories