Haveri Farmers Protest: ಪ್ರತಿ ಟನ್‌ ಕಬ್ಬಿಗೆ 5,500 ಬೆಲೆ ನಿಗದಿಗೆ ಪಟ್ಟು; ಹಾವೇರಿಯಲ್ಲಿ ರೈತರ ಪ್ರತಿಭಟನೆ

Haveri Farmers Protest: ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆಯ ಬಂಕಾಪುರ ಟೋಲ್‌ಗೇಟ್ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದು, ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Haveri Farmers Protest: ಕಬ್ಬಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿರುವ ರೈತರು, ಪ್ರತಿ ಟನ್‌ಗೆ ₹5,500 ನಿಗದಿಪಡಿಸುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆಯ ಬಂಕಾಪುರ ಟೋಲ್‌ಗೇಟ್‌ನಲ್ಲಿ (Bankapur Toll Gate) ಪ್ರತಿಭಟನೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಈ ಹೋರಾಟದ ವೇಳೆ ಟೋಲ್‌ಗೇಟ್ ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಗ್ಗಾಂವಿ ತಾಲೂಕಿನ ಬಂಕಾಪುರದ ಬಳಿ ಜಮಾಯಿಸಿದ ಕಬ್ಬು ಬೆಳೆಗಾರರು ಬಾರಕೋಲು ಚಳವಳಿ ನಡೆಸಿ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರ ಪ್ರತಿಕೃತಿ ದಹನಕ್ಕೂ ರೈತರು ಮುಂದಾಗಿದ್ದಾರೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಬೇಡಿಕೆಗೆ ಸಿಗದ ಸ್ಪಂದನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಕಬ್ಬು ಬೆಳೆಯಲು ಬೀಜ, ಗೊಬ್ಬರ, ಕಾರ್ಮಿಕರು ಸೇರಿದಂತೆ ವಿವಿಧ ಹಂತಗಳಲ್ಲಿ ಹೆಚ್ಚಿನ ಹಣ ಖರ್ಚಾಗುತ್ತಿದೆ. ಇಷ್ಟೆಲ್ಲಾ ವೆಚ್ಚ ಮಾಡಿದರೂ ಬೆಳೆದ ಬೆಳೆಗೆ ನಿರೀಕ್ಷಿತ ಬೆಲೆ ಸಿಗದಿದ್ದರೆ ಕೃಷಿಯನ್ನು ಮುಂದುವರಿಸುವುದು ಕಷ್ಟವಾಗುತ್ತದೆ ಎಂಬುದು ರೈತರ ಅಳಲು. ಹೀಗಾಗಿ ಕೇಂದ್ರ ಸರ್ಕಾರ (Central Government) ತಕ್ಷಣ ಮಧ್ಯಪ್ರವೇಶಿಸಿ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಬೇಡಿಕೆ ಈಡೇರುವವರೆಗೂ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹೋರಾಟ ಮುಂದುವರಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಕಬ್ಬಿಗೆ ನಿಗದಿತ ಬೆಲೆ ಘೋಷಿಸುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂಬುದು ಅವರ ಸ್ಪಷ್ಟ ನಿಲುವಾಗಿದೆ.

ಇದನ್ನೂ ಓದಿ: ಕಬ್ಬಿಗೆ ಎಂಎಸ್‌ಪಿ ಆಗ್ರಹ, ಇಂದಿನಿಂದ ಹೆದ್ದಾರಿ ತಡೆ! ಪುಣೆ-ಬೆಂಗಳೂರು ಮಾರ್ಗ ಬದಲು

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ (Yashodha Vantagodi) ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories