ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್

ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ ತಂದೆಗೆ ಚನ್ನಮ್ಮ ಕಿತ್ತೂರು ನ್ಯಾಯಾಲಯ 25 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಪೋಷಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಸಂದೇಶ ನೀಡಿದೆ.

ಚನ್ನಮ್ಮ ಕಿತ್ತೂರಿನಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ನೀಡುವ ಪೋಷಕರ ವಿರುದ್ಧ ನ್ಯಾಯಾಲಯ ಕಠಿಣ ನಿಲುವು ತಳೆದಿದೆ. ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ ಪ್ರಕರಣದಲ್ಲಿ ತಂದೆಗೆ 25 ಸಾವಿರ ರೂಪಾಯಿ ದಂಡ ವಿಧಿಸಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಎಂ.ಕೆ. ಹುಬ್ಬಳ್ಳಿಯ ನಿವಾಸಿ ನಜೀರಸಾಬ್ ಅತ್ತಾರ ದಂಡಕ್ಕೆ ಒಳಗಾದ ವ್ಯಕ್ತಿ. ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಹಮ್ಮದಲಿ ನಾಯಕ್ ಈ ತೀರ್ಪು ನೀಡಿದ್ದಾರೆ.

ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡುವುದು ಕಾನೂನುಬಾಹಿರ ಮಾತ್ರವಲ್ಲ, ಅವರ ಜೀವಕ್ಕೂ ಇತರ ರಸ್ತೆ ಬಳಕೆದಾರರ ಸುರಕ್ಷತೆಗೆ ಕೂಡ ಅಪಾಯಕಾರಿಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪೋಷಕರು ತಮ್ಮ ಮಕ್ಕಳಿಗೆ ವಾಹನದ ಕೀಲಿ ನೀಡುವ ಮೊದಲು ಕಾನೂನು ಹಾಗೂ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಸಂದೇಶವನ್ನು ಈ ತೀರ್ಪು ನೀಡಿದೆ.

ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತರು ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಇಂತಹ ಉಲ್ಲಂಘನೆಗಳ ವಿರುದ್ಧ ಕಾನೂನು ಕ್ರಮ ಮತ್ತಷ್ಟು ಕಠಿಣವಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಆದೇಶ ಇತರ ಪೋಷಕರಿಗೂ ಎಚ್ಚರಿಕೆಯಾಗಿ ಪರಿಣಮಿಸಿದೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories