ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದ್ದೀರಾ? ಈ ಕಾರಣಕ್ಕೆ ರದ್ದಾಗುತ್ತೆ ನಿಮ್ಮ ಅರ್ಜಿ

ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ತಂದಿದ್ದು, ಆ ಪ್ರಕಾರ ನಿಮ್ಮ ರೇಷನ್ ಕಾರ್ಡ್ ಅರ್ಜಿ ಇಲ್ಲ ಎಂದರೆ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಒಬ್ಬ ವ್ಯಕ್ತಿಯು ಆತ ಒಂದು ದೇಶದ ಪ್ರಜೆ ಎಂದು ಸಾಭೀತು ಮಾಡಿಕೊಳ್ಳಲು ಕೆಲವೊಂದು ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ನಮ್ಮ ದೇಶದಲ್ಲಿ ಆಧಾರ್ ಕಾರ್ಡ್, ಓಟರ್ ಐಡಿ, ಪಾನ್ ಕಾರ್ಡ್, ಪಾಸ್ ಪೋರ್ಟ್, ಚಾಲನಾ ಪರವಾನಿಗೆ ಪತ್ರ ಹೀಗೆ ಹಲವು ದಾಖಲೆ ಹೊಂದಿರಬೇಕಾಗುತ್ತದೆ.

ಈಗ ಇವುಗಳ ಸಾಲಿಗೆ ಪಡಿತರ ಚೀಟಿಯು (Ration Card) ಸೇರುತ್ತದೆ. ಇಂದಿನ ದಿನದಲ್ಲಿ ಪಡಿತರ ಚೀಟಿಯು ಬಹಳ ಮಹತ್ವ ಪಡೆದುಕೊಂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವು ಯೋಜನೆಗಳಿಗೆ ಪಡಿತರ ಚೀಟಿಯನ್ನೇ ಮಾನದಂಡವನ್ನಾಗಿ ಮಾಡಿಕೊಳ್ಳಲಾಗಿದೆ.

ಹಾಗಾಗಿ ಪಡಿತರ ಚೀಟಿ ಇಲ್ಲದವರು ಸಹ ಹೊಸ ಪಡಿತರ ಚೀಟಿ (New Ration Card) ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ತಂದಿದ್ದು, ಆ ಪ್ರಕಾರ ನಿಮ್ಮ ಅರ್ಜಿ ಇಲ್ಲ ಎಂದರೆ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದ್ದೀರಾ? ಈ ಕಾರಣಕ್ಕೆ ರದ್ದಾಗುತ್ತೆ ನಿಮ್ಮ ಅರ್ಜಿ - Kannada News

ಇಷ್ಟು ದಿನ ಆದ್ರೂ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ! ಅನ್ನೋರಿಗೆ ಬಿಗ್ ಅಪ್ಡೇಟ್

ಹೊಸ ಪಡಿತರ ಚೀಟಿ ನೀಡಿ ಎಂದು ಈಗಾಗಲೇ ೨,೯೫,೯೮೬ ಜನರು ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಮಾ.೩೧ ರ ಒಳಗೆ ವಿಲೇವಾರಿ ಮಾಡುವಂತೆ ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೂ ಏ.೧ರಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಈ ಹೊಸ ಪಡಿತರ ಕಾರ್ಡ್ ಮಾಡಿಸುವ ವೇಳೆ ನೀವು ಕೆಲವೊಂದು ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ. ದಾಖಲೆಗಳನ್ನು ಸಲ್ಲಿಸುವ ವೇಳೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ನೀವು ರಾಜ್ಯ ಸರ್ಕಾರ ತಿಳಿಸಿದ ದಾಖಲೆಗಳನ್ನು ನಿಮ್ಮ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸದಿದ್ದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಹೊಸ ರೇಷನ್ ಕಾರ್ಡ್ ಅರ್ಜಿಗೆ ಅವಕಾಶ! ಇನ್ನೊಂದೆಡೆ ಅಕ್ರಮ ರೇಷನ್ ಕಾರ್ಡ್ ಕ್ಯಾನ್ಸಲ್

BPL Ration Cardಯಾವ ಯಾವ ದಾಖಲೆ ಸಲ್ಲಿಸಬೇಕು?

ಆಧಾರ್ ಕಾರ್ಡ್ (Aadhaar Card), ವಯಸ್ಸಿನ ಪ್ರಮಾಣ ಪತ್ರ, ಚಾಲನಾ ಪರವಾನಿಗೆ, ಸ್ವಯಂ ಘೋಷಿತ ಪ್ರಮಾಣ ಪತ್ರ, ಇತ್ತಿಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಲಿಂಕ್ ಆಗಿರುವ ಮೊಬೈಲ್ ನಂಬರ್ (Mobile Number), ಮನೆಯ ಸದಸ್ಯರ ಮಾಹಿತಿ ನೀಡಬೇಕಾಗುತ್ತದೆ.

ಈ ಮೇಲೆ ನಾವು ತಿಳಿಸಿದ ಯಾವುದೇ ಒಂದು ದಾಖಲೆ ಸಲ್ಲಿಸದಿದ್ದರೂ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ನಿಮ್ಮ ಅರ್ಜಿಯನ್ನು ತಿರಸ್ಕರಿಸುತ್ತಾರೆ. ಆಗ ನೀವು ಎಲ್ಲ ದಾಖಲೆಗಳೊಂದಿಗೆ ಮತ್ತೆ ಅರ್ಜಿ ಸಲ್ಲಿಸುವ ಪರಿಸ್ಥಿತಿ ಬರುತ್ತದೆ. ಹಾಗಾಗಿ ಹೊಸ ರೇಶನ್ ಕಾರ್ಡ್ಗೆ ಅರ್ಜಿ ಸಲ್ಲಿಸುವವರು ಸರ್ಕಾರ ತಿಳಿಸಿದ ಎಲ್ಲ ದಾಖಲೆಗಳನ್ನು ಕೂಡ ತಮ್ಮ ಅರ್ಜಿಯೊಂದಿಗೆ ಲಗತ್ತಿಸುವುದು ಕಡ್ಡಾಯವಾಗಿದೆ.

ಇನ್ಮುಂದೆ ಗೃಹಲಕ್ಷ್ಮಿ ಹಣ ಇಂತಹ ಮಹಿಳೆಯರ ಖಾತೆಗೆ ಜಮಾ ಆಗೋದಿಲ್ಲ; ಇಲ್ಲಿದೆ ಕಾರಣ

ರಾಜ್ಯ ಸರ್ಕಾರ ಇರಲಿ, ಕೇಂದ್ರ ಸರ್ಕಾರವೇ ಇರಲಿ ಕಾಲ ಕಾಲಕ್ಕೆ ತನ್ನ ನಿಯಮದಲ್ಲಿ ಬದಲಾವಣೆ ಮಾಡುತ್ತ ಇರುತ್ತದೆ. ಜನರು ಈ ವಿಚಾರಗಳನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬೇಕಾಗುತ್ತದೆ. ಹಿಂದಿನ ಕಾಲದಲ್ಲಿ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸಬೇಕಿತ್ತು. ಇಂದು ಎಲ್ಲ ಕಡೆ ಡಿಜಿಟಲಿಕರಣ ಆಗಿರುವುದರಿಂದ ನೀವು ಮನೆಯಲ್ಲಿಯೇ ಕುಳಿತು ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

For this reason, the new ration card application will be cancelled

Follow us On

FaceBook Google News