ಹಾಸನ ಜಿಲ್ಲೆ ಸಕಲೇಶಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ಕಾಡ್ಗಿಚ್ಚಿನಲ್ಲಿ ಗಾಯಗೊಂಡ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ನಂದಿಸಲು ತೆರಳಿದ್ದ ಅರಣ್ಯ ಸಿಬ್ಬಂದಿ ಗಾಯಗೊಂಡಿದ್ದರು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ನಂದಿಸಲು ತೆರಳಿದ್ದ ಅರಣ್ಯ ಸಿಬ್ಬಂದಿ ಗಾಯಗೊಂಡಿದ್ದರು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಮರ, ಬಳ್ಳಿಗಳಿಗೆ ಬೆಂಕಿ ವ್ಯಾಪಿಸಿ ಸುಟ್ಟು ಕರಕಲಾಗಿದೆ. ಈ ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿ ಮಂಜುನಾಥ್ , ಅರಣ್ಯ ಸಿಬ್ಬಂದಿ ಸುಂದರೇಶ್ , ಮಹೇಶ್ , ದುಂಗೇಶ್ ಸೇರಿದಂತೆ 6 ಜನ ಬೆಂಕಿ ನಂದಿಸಲು ಯತ್ನಿಸಿದರು.

ಬೆಂಕಿ ಅವಘಡದಲ್ಲಿ ಮಂಜುನಾಥ್, ಸುಂದರೇಶ್, ದುಂಗೇಶ್ ಮತ್ತು ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ಕಾಡ್ಗಿಚ್ಚಿನಲ್ಲಿ ಗಾಯಗೊಂಡ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವು - Kannada News

ಚಿಕಿತ್ಸೆ ಫಲಕಾರಿಯಾಗದೆ ಸಾವು

ಇವರಲ್ಲಿ ಅರಣ್ಯಾಧಿಕಾರಿ ಮಂಜುನಾಥ್ ಹಾಗೂ ಅರಣ್ಯ ರಕ್ಷಕ ಸುಂದರೇಶ್ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕಳುಹಿಸಲಾಗಿತ್ತು. ಅವರನ್ನು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ವಹಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಅರಣ್ಯ ಸಿಬ್ಬಂದಿ ಸುಂದರೇಶ್ ಸಾವನ್ನಪ್ಪಿದ್ದಾರೆ. ಮಂಜುನಾಥ್‌ಗೆ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ.

ಶ್ರದ್ಧಾಂಜಲಿ

ಗಾಯಗೊಂಡಿದ್ದ ಸುಂದರೇಶ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಅವರ ಪಾರ್ಥಿವ ಶರೀರವನ್ನು ಹಾಸನಕ್ಕೆ ತಂದು ಅಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಸುಂದರ್ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯಲಾಯಿತು.

forest guard who was injured in a fire incident in the Hassan Sakleshpur forest was died

Follow us On

FaceBook Google News

forest guard who was injured in a fire incident in the Hassan Sakleshpur forest was died