ಮಂಡ್ಯ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಅಪಘಾತದಲ್ಲಿ ಅವರಿಗೆ ಹಾಗೂ ಚಾಲಕನಿಗೆ ಗಾಯಗಳಾಗಿದ್ದು, ಬಳಿಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

  • ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ
  • ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
  • ಗಾಯಗೊಂಡ ಸುರೇಶ್ ಗೌಡ ಬೆಂಗಳೂರು ಶಿಫ್ಟ್

Mandya accident: ಮಂಡ್ಯ ಜಿಲ್ಲೆಯ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಗಾಯಗೊಂಡಿದ್ದಾರೆ. ಕಾರ್ಯಕರ್ತರ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾಗಿದೆ.

ಅಪಘಾತದ ಹೊಡೆತಕ್ಕೆ ಕಾರು ಭಾಗಶಃ ಜಖಂಗೊಂಡಿದ್ದು, ಸುರೇಶ್ ಗೌಡರ ಕೈಗೆ ಪೆಟ್ಟು ಬಿದ್ದಿದೆ. ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಾರು ಪಲ್ಟಿಯಾದ ತಕ್ಷಣ ಅವರೊಂದಿಗೆ ಇದ್ದ ಗನ್‌ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಇಬ್ಬರನ್ನೂ ತಕ್ಷಣ ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯರಲ್ಲಿ ಆತಂಕ ಉಂಟಾದರೂ, ದೊಡ್ಡ ಅನಾಹುತ ತಪ್ಪಿದಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories