R L Jalappa : ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ನಿಧನ

R L Jalappa : ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ನಿಧನರಾಗಿದ್ದಾರೆ. ಅಂಗಾಂಗಳ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ  98 ವರ್ಷದ  ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಇಂದು (ಶುಕ್ರವಾರ) ಸಂಜೆ ಕೊನೆಯುಸಿರೆಳೆದಿದ್ದಾರೆ.

Online News Today Team

ಕೋಲಾರ, ಡಿಸೆಂಬರ್ 17 : ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ನಿಧನ – ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ (R L Jalappa) ನಿಧನರಾಗಿದ್ದಾರೆ. ಅಂಗಾಂಗಳ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ  98 ವರ್ಷದ  ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಇಂದು (ಶುಕ್ರವಾರ) ಸಂಜೆ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಡಿ.10ರಂದು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ಇದೇ ಫೆಬ್ರವರಿಯಲ್ಲಿ ಜಾಲಪ್ಪ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಆದ್ದರಿಂದ ಸತತ ಎರಡು ಗಂಟೆಗಳ ಕಾಲ ಶಸ್ತ್ರ ಚಿಕತ್ಸೆ ಮಾಡಲಾಗಿತ್ತು.

ಕರ್ನಾಟಕದ ಪ್ರಮುಖ ರಾಜಕಾರಣಿಯಾಗಿದ್ದ ಜಾಲಪ್ಪ 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು

ಪ್ರಮುಖ ರಾಜಕಾರಣಿಯಾಗಿ, ಜಾಲಪ್ಪ ಅವರು 1979 ರವರೆಗೆ ಕಾಂಗ್ರೆಸ್ ಪಕ್ಷದೊಂದಿಗೆ ಸಕ್ರಿಯವಾಗಿ ಸಂಬಂಧ ಹೊಂದಿದ್ದರು. ಅವರು ಡಿ ದೇವರಾಜ್ ಅರಸ್ ಅವರೊಂದಿಗೆ ಕರ್ನಾಟಕ ಕ್ರಾಂತಿ ರಂಗ ಎಂಬ ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ಕಾಂಗ್ರೆಸ್ ತೊರೆದರು. ನಂತರ ಪಕ್ಷವನ್ನು ಜನತಾ ಪಕ್ಷದ ಅಡಿಯಲ್ಲಿ ಒಳಪಡಿಸಲಾಯಿತು.

ಹಿರಿಯ ನಾಯಕನ ನಿಧನಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ರಾಜ್ಯದ ಹಲವಾರು ಪ್ರಮುಖ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಾಲಪ್ಪ ಅವರ ನಿಧನದಿಂದ ರಾಜ್ಯದಲ್ಲಿ ನಡೆಯುತ್ತಿರುವ ನೀತಿವಂತ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

Former union minister R L Jalappa no more

Follow Us on : Google News | Facebook | Twitter | YouTube