ಕೋಲಾರ: ಕಾರು ಡಿವೈಡರ್‌ಗೆ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು! ತಿರುಪತಿಯಿಂದ ವಾಪಸ್‌ ಬರುವಾಗ ದುರಂತ

ತಿರುಪತಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಒಂದೇ ಕುಟುಂಬದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಡಿವೈಡರ್‌ಗೆ ಡಿಕ್ಕಿಯಾಗಿ ಭೀಕರ ಅಪಘಾತ
  • ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು
  • ತಿರುಪತಿಯಿಂದ ವಾಪಸ್‌ ಬರುವಾಗ ದುರಂತ

ಕೋಲಾರ (Kolar): ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ (Tirupati to Bengaluru) ವಾಪಸ್ಸಾಗುತ್ತಿದ್ದ ಒಂದೇ ಕುಟುಂಬದ ಸದಸ್ಯರಿದ್ದ ಕಾರು ಡಿವೈಡರ್‌ಗೆ (car crashed into a road divider) ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಬಳಿ ಈ ದುರ್ಘಟನೆ ನಡೆದಿದೆ.

ಮೃತರನ್ನು ಬೆಂಗಳೂರಿನ ವಿದ್ಯಾರಣ್ಯಪುರದ ಶಾರದಮ್ಮ (70), ದೀಕ್ಷಿತ್ (25), ದೇವೇಂದ್ರ ಕುಮಾರ್ (41) ಹಾಗೂ ಜಿಷ್ಣು (13) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಟುಂಬಸ್ಥರು ಒಟ್ಟಾಗಿ ತಿರುಪತಿಗೆ (Tirupati) ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ದೇವರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ವಾಪಸ್ಸಾಗುತ್ತಿದ್ದ ವೇಳೆ ಟೊಯೋಟಾ ರಿಯಾನ್ ಕಾರು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಹೊರತೆಗೆದಿದ್ದಾರೆ.

ಅಪಘಾತದಲ್ಲಿ ವಿಕಾಸ್, ನೀತು ಹಾಗೂ ಆದ್ವಿಕ ಎಂಬ ಮೂವರು ಗಾಯಗೊಂಡಿದ್ದಾರೆ. ಅವರನ್ನು ಬಂಗಾರಪೇಟೆ ಜಿಲ್ಲಾಸ್ಪತ್ರೆಗೆ (Bangarpet District Hospital) ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ದರ್ಶನ ಮುಗಿಸಿ ಸಂತೋಷದಿಂದ ಮನೆಗೆ ಮರಳುತ್ತಿದ್ದ ಕುಟುಂಬಕ್ಕೆ ಮಾರ್ಗಮಧ್ಯೆಯೇ ಈ ದುರಂತ ಎದುರಾಗಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೇತಮಂಗಲ ಪೊಲೀಸ್ ಠಾಣೆಯಲ್ಲಿ (Bethamangala Police) ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ತನಿಖೆ ಮುಂದುವರಿದಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories