ಕಲಬುರಗಿ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ನಾಲ್ವರು ಸಾವು

Story Highlights

ಕಲಬುರಗಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮರಗುತ್ತಿ ಕ್ರಾಸ್‌ನಲ್ಲಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಅವರಲ್ಲಿ ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತಾ (45) ಮತ್ತು ಅವರ ಮಗ ಉತ್ತಮ್ ರಾಘವನ್ (28) ಸೇರಿದ್ದಾರೆ.ಮೃತರಲ್ಲಿ ಕಾರು ಚಾಲಕನೂ ಸೇರಿದ್ದಾನೆ.

ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ. ಮೃತರನ್ನು ಹೈದರಾಬಾದ್ ಮೂಲದವರು ಎನ್ನಲಾಗಿದೆ.

Four people from Hyderabad died in Kalaburagi road accident

Related Stories