Karnataka NewsBangalore News

ಉಚಿತ ವಿದ್ಯುತ್! ಗೃಹಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತಂದ ಸರ್ಕಾರ

ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ (Gruha Jyothi scheme) ಕೂಡ ಒಂದು. ವಿಶೇಷ ಅಂದ್ರೆ ಈ ಯೋಜನೆ ಕೇವಲ ಬಡವರಿಗೆ ಮಾತ್ರ ಸೀಮಿತವಾಗಿಲ್ಲ. ಮಧ್ಯಮ ವರ್ಗದವರು, ಬಾಡಿಗೆ ಮನೆಯಲ್ಲಿ ವಾಸ ಮಾಡುವವರು ಕೂಡ ಉಚಿತ ವಿದ್ಯುತ್ (Free Electricity) ಪಡೆದುಕೊಳ್ಳಲು ಸಾಧ್ಯವಾಗಿದೆ.

ಗೃಹಜ್ಯೋತಿ ಯೋಜನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಯಾಕೆಂದರೆ ಲಕ್ಷಾಂತರ ಕುಟುಂಬಗಳು ಎಂದು ಉಚಿತವಾಗಿ ವಿದ್ಯುತ್ (free electricity) ಪಡೆದುಕೊಳ್ಳುತ್ತಿದ್ದಾರೆ 200 ಯೂನಿಟ್ ಗಿಂತಲೂ ಕಡಿಮೆ ವಿದ್ಯುತ್ ಯಾರು ಬಳಸುತ್ತಿದ್ದಾರೋ ಅಂತವರಿಗೆ ಈ ಯೋಜನೆಯ ಪ್ರಯೋಜನ ಸಿಗುತ್ತಿದೆ. ಗೃಹ ಜ್ಯೋತಿ ಯೋಜನೆಗೆ ಸಂಬಂಧಪಟ್ಟಂತೆ ಮಹತ್ವದ ಬದಲಾವಣೆಯನ್ನು ಸರ್ಕಾರ ತರಲು ನಿರ್ಧರಿಸಿದ್ದು ಈ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ.

Free electricity, significant changes in the Gruha Jyothi scheme

ನಿಮ್ಮ ಊರಲ್ಲೇ ಕರ್ನಾಟಕ ಒನ್ ಫ್ರಾಂಚೈಸಿ ಪ್ರಾರಂಭಿಸಲು ಅವಕಾಶ! ಅರ್ಜಿ ಸಲ್ಲಿಸಿ

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಪೋರ್ಟಲ್!

ಸರ್ಕಾರದ ಇತರ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವುದಕ್ಕೆ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು. ಆದರೆ ಗೃಹಜ್ಯೋತಿ ಯೋಜನೆಗೆ ಮಾತ್ರ ಸೇವಾ ಸಿಂಧು ಅಪ್ಲಿಕೇಶನ್ (seva Sindhu website) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು.

ಇದೀಗ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಸೇವಾ ಸಿಂಧು ಪೋರ್ಟಲ್ ಬದಲಿಗೆ ಪ್ರತ್ಯೇಕ ಪೋರ್ಟಲ್ ಬಿಡುಗಡೆ ಮಾಡಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ಗೃಹಲಕ್ಷ್ಮಿ ಯೋಜನೆಯ ₹2000 ಪಡೆಯುವ ಮಹಿಳೆಯರಿಗೆ ಇಲ್ಲಿದೆ ಭರ್ಜರಿ ಸುದ್ದಿ!

Electricity Billಆನ್ ಲೈನ್ ನಲ್ಲಿಯೇ ಮಾಡಿಕೊಳ್ಳಬಹುದು. ಡಿ ಲಿಂಕ್!

ಗೃಹ ಜ್ಯೋತಿ ಯೋಜನೆಯ ಪ್ರಯೋಜನವನ್ನು ಸಾಕಷ್ಟು ಬಾಡಿಗೆದಾರರು ಕೂಡ ಪಡೆದುಕೊಳ್ಳುತ್ತಿರುವುದು ವಿಶೇಷ. ಇದರಿಂದಾಗಿ ಬಾಡಿಗೆ ಮನೆಯಲ್ಲಿ ವಾಸಿಸುವ ಅದೆಷ್ಟೋ ಜನ ಪ್ರತಿ ತಿಂಗಳು ಸಾವಿರಾರು ರೂಪಾಯಿಗಳನ್ನು ಉಳಿತಾಯ ಮಾಡಿಕೊಳ್ಳಲು ಸಾಧ್ಯವಾಗುತ್ತಿದೆ.

ಆದರೆ ಒಂದು ವೇಳೆ ನೀವು ಉಚಿತ ವಿದ್ಯುತ್ ಪಡೆದುಕೊಳ್ಳುವವರಾಗಿದ್ದು ಒಂದು ಬಾಡಿಗೆ ಮನೆಯಿಂದ ಇನ್ನೊಂದು ಬಾಡಿಗೆ ಮನೆಗೆ ಸ್ಥಳಾಂತರ ಗೊಳ್ಳುವುದಿದ್ದರೆ, ಹಳೆಯ ನೋಂದಣಿಯನ್ನು ರದ್ದುಪಡಿಸಿಕೊಂಡು ಹೊಸ ನೋಂದಣಿ ಮಾಡಿಸಿಕೊಳ್ಳಬೇಕು ಇದಕ್ಕೆ ಡಿ ಲಿಂಕ್ (D Link) ಪ್ರಕ್ರಿಯೆ ಎಂದು ಹೇಳಲಾಗುತ್ತದೆ.

ಇದೀಗ ನಿಮ್ಮ ಆಧಾರ್ ಸಂಖ್ಯೆಯನ್ನು ಕೊಟ್ಟು ಹಳೆಯ ಮನೆಯ ಸಂಖ್ಯೆಯನ್ನು ತೆಗೆಸಿ, ಹೊಸ ಮನೆಯ ಸಂಖ್ಯೆಯನ್ನು ಹಾಕಿಸಿಕೊಂಡು ಮತ್ತೆ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಾಗಾಗಿ ಆನ್ಲೈನ್ ನಲ್ಲಿಯೇ ಡಿ ಲಿಂಕ್ ಪ್ರಕ್ರಿಯೆ ಮಾಡಿಕೊಳ್ಳ ಬಹುದು.

ಗೃಹಲಕ್ಷ್ಮಿ ಯೋಜನೆಯ ₹2000 ಪಡೆಯುವ ಮಹಿಳೆಯರಿಗೆ ಇಲ್ಲಿದೆ ಭರ್ಜರಿ ಸುದ್ದಿ!

10 ಯೂನಿಟ್ ಉಚಿತ ವಿದ್ಯುತ್! (10 Unit free electricity)

ಸುಮಾರು 48 ಯೂನಿಟ್ ಪ್ರತಿ ಸುಮಾರು 48 ಯೂನಿಟ್ ವಾರ್ಷಿಕ ಸರಾಸರಿ ಬಳಕೆ ಮಾಡುತ್ತಿರುವವರಿಗೆ 10% ಹೆಚ್ಚುವರಿಯಾಗಿ ವಿದ್ಯುತ್ ನೀಡಿದರೆ, ಅದು ಹೆಚ್ಚು ಪ್ರಯೋಜನಕಾರಿ ಆಗಿರಲಿಲ್ಲ ಇದನ್ನು ಮನಗಂಡಿರುವ ಸರ್ಕಾರ, ಇಂಥವರಿಗೆ 10% ಯೂನಿಟ್ ಬದಲು 10 ಯೂನಿಟ್ ಗಳನ್ನು ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದೆ.

ಇದರಿಂದ ಸರಾಸರಿ 48 ಯೂನಿಟ್ ವಿದ್ಯುತ್ ಬಳಸುವವರು 58 ಯೂನಿಟ್ ವರೆಗೂ ಕೂಡ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ರಾಜ್ಯಾದ್ಯಂತ ಸುಮಾರು 70 ಲಕ್ಷ ಕುಟುಂಬಗಳು ಪ್ರಯೋಜನ ಪಡೆದುಕೊಳ್ಳಲಿವೆ.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ; ರಾಜ್ಯದ ಜನತೆಗೆ ಗುಡ್ ನ್ಯೂಸ್

Free electricity, significant changes in the Gruha Jyothi scheme

Our Whatsapp Channel is Live Now 👇

Whatsapp Channel

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories