ಉಚಿತ ವಸತಿ ಯೋಜನೆ! ಮನೆ ಇಲ್ಲದ 36 ಸಾವಿರ ಬಡ ಜನರಿಗೆ ಮನೆ ಹಂಚಿಕೆ
ಪ್ರತಿಯೊಬ್ಬ ವ್ಯಕ್ತಿಗೂ ತನ್ನದೆ ಆದ ಸ್ವಂತ ಮನೆ (Own House) ಕಟ್ಟಿಕೊಳ್ಳಬೇಕು ಎನ್ನುವ ಕನಸು ಇದ್ದೇ ಇರುತ್ತದೆ. ಆದರೆ ಬಡವರಿಗೆ ಈ ಕನಸು ನನಸು ಮಾಡಿಕೊಳ್ಳುವುದು ಕಷ್ಟ ಸಾಧ್ಯದ ವಿಚಾರವಾಗಿದೆ.
ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರ್ಕಾರಗಳ ಕರ್ತವ್ಯ ಆಗಿದೆ. ಮೂಲಭೂತ ಸೌಕರ್ಯಗಳಲ್ಲಿ ವಸತಿಯೂ ಒಂದಾಗಿರುವುದರಿಂದ ಎಲ್ಲ ಸರ್ಕಾರಗಳು ಬಡವರಿಗೆ, ವಸತಿ ರಹಿತರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಸಹಾಯ ಮಾಡುತ್ತವೆ. ಇಲ್ಲವೇ ಮನೆ ನಿರ್ಮಾಣ (Build House) ಮಾಡಿಕೊಡುತ್ತವೆ. ಇದೇ ಹಾದಿಯಲ್ಲಿ ಸದ್ಯ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಾಗಿದೆ.
ಪಿಯುಸಿ ಪಾಸಾಗಿದ್ರೆ ಗ್ರಾಮ ಪಂಚಾಯತಿಯಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಿ
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಬಡವರಿಗಾಗಿ ಮನೆಗಳನ್ನು ನಿರ್ಮಿಸಿಕೊಡಲಾಗುತ್ತಿದೆ. ಈ ಮನೆಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಇದರಲ್ಲಿ ಬಡವರು ಸಂತೋಷದಿಂದ ಜೀವನ ನಡೆಸುವಂತಾಗಬೇಕು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ತಿಂಗಳಾಂತ್ಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದಲ್ಲಿ ಬಡವರಿಗಾಗಿ ನಿರ್ಮಿಸಲಾದ ಬರೋಬ್ಬರಿ 36 ಸಾವಿರ ಮನೆಗಳನ್ನು ಬಡವರಿಗೆ ಹಸ್ತಾಂತರ ಮಾಡಲಿದ್ದಾರೆ.
ಇಂತಹ ಮಹಿಳೆಯರಿಗೆ 6ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣ ಬರೋಲ್ಲ! ಬಿಗ್ ಅಪ್ಡೇಟ್
ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಏಕ ಕಾಲದಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಕಡೆ ನಿರ್ಮಿಸಲಾದ ಮನೆಗಳ ಹಂಚಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಾಗಾಗಿ ಮನೆಗಳಿಗೆ ವಿದ್ಯುತ್, ಕುಡಿಯುವ ನೀರು, ಒಳಚರಂಡಿ ಸಂಪರ್ಕ, ಪ್ರತಿ ಮನೆಗೂ ಶೌಚಾಲಯ ನಿರ್ಮಾಣ ಮಾಡಿರಬೇಕು. ಈ ಎಲ್ಲ ಕೆಲಸಗಳು ಫೆ.2೦ರ ಒಳಗೆ ಮುಗಿಯಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರನ್ನಾಗಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸರ್ಕಾರ!
ಪ್ರತಿ ಯೋಜನೆಯಲ್ಲಿ ಎಷ್ಟು ಮನೆಗಳ ನಿರ್ಮಾಣದ ಗುರಿ ನೀಡಲಾಗಿದೆ ಎನ್ನುವುದರ ವಿವರ ನೀಡಬೇಕು. ಮನೆ ನಿರ್ಮಾಣ ಮಾಡುವ ವೇಳೆ ಅಥವಾ ಬಿಲ್ ಪಾವತಿ ವೇಳೆ ಗುತ್ತಿಗೆದಾರರು ತೊಂದರೆ ನೀಡಿದ್ದರೆ ಅದನ್ನು ಹಿರಿಯ ಅಧಿಕಾರಿಗಳು ಅಥವಾ ನನ್ನ ಗಮನಕ್ಕೆ ತರಬೇಕು. ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಈ ಯೋಜನೆ ಜಾರಿಯಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಬೇಡಿ. ಯಾವುದೇ ಅಧಿಕಾರಿ ನಿರ್ಲಕ್ಷ್ಯ ಮಾಡಿದ್ದಲ್ಲಿ ಅಂತಹ ಅಧಿಕಾರಿಗಳನ್ನು ಕೆಲಸದಿಂದ ಅಮಾನತು ಮಾಡಲಾಗುವುದು ಎಂದು ಸಚಿವರು ತಾಕೀತು ಮಾಡಿದ್ದಾರೆ.
ಮುಖ್ಯಮಂತ್ರಿಗಳು ಮನೆ ಹಂಚಿಕೆ ಮಾಡಿದ ನಂತರ ನಾನೇ ಸ್ವತಹ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಲಿದ್ದೇನೆ. ನಾವು ನೀಡಿದ ಮನೆಯಲ್ಲಿ ಫಲಾನುಭವಿಗಳು ವಾಸವಾಗಿರಬೇಕು. ಮನೆಯನ್ನು ಹಸ್ತಾಂತರ ಮಾಡುವ ವೇಳೆ ಮನೆಗೆ ಎಲ್ಲ ರೀತಿಯ ಸೌಕರ್ಯ ಕಲ್ಪಿಸಿರಬೇಕು. ನಾನು ಪರಿಶೀಲನೆ ನಡೆಸುವ ವೇಳೆ ಏನಾದರೂ ತಪ್ಪುಗಳು ಕಂಡು ಬಂದರೆ ಸಹಿಸುವುದಿಲ್ಲ ಎಂದು ಸಚಿವ ಜಮೀರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Free housing Scheme, Allotment of houses to 36 thousand homeless poor people