ಉಚಿತ ಕುರಿ, ಮೇಕೆ ಸಾಕಾಣಿಕೆ ತರಬೇತಿ, ಊಟ-ವಸತಿ ಉಚಿತ! ಸಿಗುತ್ತೆ ಸರ್ಕಾರದ ಪ್ರಮಾಣಪತ್ರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ ಆಯೋಜನೆಗೊಂಡಿದ್ದು, ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರಿಗೆ ಊಟ, ವಸತಿ ಮತ್ತು ಪ್ರಮಾಣಪತ್ರ ಸೌಲಭ್ಯ ಕಲ್ಪಿಸಲಾಗಿದೆ.

Free Sheep Farming Training Camp: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರಿಗಾಗಿ ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರವನ್ನು ಆಯೋಜಿಸಿದೆ. ಮೇ 18, 2026ರಿಂದ ಆರಂಭವಾಗಲಿರುವ ಈ ತರಬೇತಿ ಶಿಬಿರವು 13 ದಿನಗಳ ಕಾಲ ನಡೆಯಲಿದೆ.

ಈ ಶಿಬಿರದಲ್ಲಿ ಕುರಿ ಸಾಕಾಣಿಕೆ ಮಾತ್ರವಲ್ಲದೆ ಮೇಕೆ ಸಾಕಾಣಿಕೆ, ಹಸು ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಹಾಗೂ ತೋಟಗಾರಿಕಾ ಬೆಳೆಗಳ ಕುರಿತು ವೈಜ್ಞಾನಿಕ ರೀತಿಯ ತರಬೇತಿಯನ್ನು ನೀಡಲಾಗುತ್ತದೆ. ಜೊತೆಗೆ ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ಸಹ ತಜ್ಞರಿಂದ ಮಾರ್ಗದರ್ಶನ ದೊರೆಯಲಿದೆ.

18 ರಿಂದ 50 ವರ್ಷದೊಳಗಿನ ಕರ್ನಾಟಕದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದೆ. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ತರಬೇತಿ ಅವಧಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ. ತರಬೇತಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಆಸಕ್ತರು ಮೇ 18ರಂದು ಬೆಳಿಗ್ಗೆ 10 ಗಂಟೆಗೆ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಗೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ನೇರವಾಗಿ ಹಾಜರಾಗಬೇಕು. ಸಂದರ್ಶನಕ್ಕೆ ಬರಲು ಸಾಧ್ಯವಾಗದವರು ಮುಂಚಿತವಾಗಿ 8970476050, 9591514154, 9686248369, 6363139123 ಹಾಗೂ 9505894247 ಸಂಖ್ಯೆಗಳ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories