ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್; ಈ ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ!
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ (BPL Ration Card) ಹೊಂದಿರುವ ಫಲಾನುಭವಿಗಳು ಬಿಪಿಎಲ್ ಕಾರ್ಡ್ ಮೂಲಕ, ಉಚಿತ ಪಡಿತರ ವಸ್ತುಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ಕಳೆದ ಆರು ತಿಂಗಳುಗಳಿಂದ ಅಕ್ಕಿಯ ಬದಲು ಹಣವನ್ನ ಪಡೆದುಕೊಳ್ಳುತ್ತಿರುವ ಫಲಾನುಭವಿಗಳು ಫೆಬ್ರವರಿ ತಿಂಗಳ ಹಣಕ್ಕಾಗಿ ಕಾಯುತ್ತಿದ್ದಾರೆ. ಈಗ ಸರ್ಕಾರ ಅಪ್ಡೇಟ್ (update) ಒಂದನ್ನು ನೀಡಿದ್ದು, ಯಾವ ದಿನಾಂಕದ ಒಳಗೆ ಫಲಾನುಭವಿಗಳ ಖಾತೆಗೆ ಹಣ ಡಿಬಿಟಿ (DBT) ಮಾಡಲಾಗುವುದು ಎಂದು ತಿಳಿಸಿದೆ.
ಸೋಲಾರ್ ಪಂಪ್ ಸೆಟ್ ಅಳವಡಿಸಿಕೊಳ್ಳಲು ರೈತರಿಗೆ 50% ಸಹಾಯಧನ! ಅರ್ಜಿ ಆಹ್ವಾನ
ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಲಕ್ಷಾಂತರ ಜನ!
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ (BPL Ration Card) ಹೊಂದಿರುವ ಫಲಾನುಭವಿಗಳು ಸಾಕಷ್ಟು ಜನ ಇದ್ದಾರೆ ಸುಮಾರು ನಾಲ್ಕು ಕೋಟಿಗೂ ಅಧಿಕ ಜನರು ಬಿಪಿಎಲ್ ಕಾರ್ಡ್ ಮೂಲಕ, ಉಚಿತ ಪಡಿತರ ವಸ್ತುಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ಇದರ ಜೊತೆಗೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಆರು ತಿಂಗಳ ಹಿಂದೆ ಘೋಷಣೆ ಮಾಡಿತ್ತು. ಅವುಗಳಲ್ಲಿ ಅನ್ನಭಾಗ್ಯ ಯೋಜನೆ (Annabhagya scheme) ಕೂಡ ಒಂದಾಗಿದ್ದು, ಈ ಮೂಲಕ ಐದು ಕೆಜಿ ಉಚಿತ ಅಕ್ಕಿಯನ್ನು ರಾಜ್ಯ ಸರ್ಕಾರ ವಿತರಿಸುವುದಾಗಿ ತಿಳಿಸಿತ್ತು.
ಇದುವರೆಗೆ ರಾಜ್ಯ ಸರ್ಕಾರಕ್ಕೆ ಅಕ್ಕಿ ದಾಸ್ತಾನು ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಹಾಗಾಗಿ ತಾತ್ಕಾಲಿಕವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಲಾಗಿದೆ. ಫಲಾನುಭವಿ ಜನರಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 5 ಕೆಜಿ ಅಕ್ಕಿಗೆ ಕೊಟ್ಟು 170ಗಳನ್ನು ನೇರವಾಗಿ ಮನೆಯ ಯಜಮಾನನ ಖಾತೆಗೆ ಜಮಾ ಮಾಡಲಾಗುತ್ತಿದೆ.
ಜಮೀನು, ಆಸ್ತಿ ಪತ್ರಗಳಿಗೆ ಆಧಾರ್ ಜೋಡಣೆ ಕಡ್ಡಾಯ! ಸರ್ಕಾರ ಖಡಕ್ ವಾರ್ನಿಂಗ್
ಫೆಬ್ರವರಿ ತಿಂಗಳ ಹಣಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್!
ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ (Bank Account) ಬಾರದೆ ಇದ್ದರೂ ಕೂಡ ಅನ್ನಭಾಗ್ಯ ಯೋಜನೆಯ ಹಣ ಮಾತ್ರ ಬಹುತೇಕ ಎಲ್ಲಾ ಫಲಾನುಭವಿ ಖಾತೆಗೂ ವರ್ಗಾವಣೆ ಆಗಿದೆ ಎನ್ನಬಹುದು.
ಒಂದು ವೇಳೆ ನಿಮಗೆ ಜನವರಿ ತಿಂಗಳ ಹಣ ಜಮಾ ಆಗಿಲ್ಲ ಎಂದಾದರೆ, ಫೆಬ್ರವರಿ ತಿಂಗಳ ಹಣವು ಸೇರಿ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಹಣ ಜಮಾ! ಖಾತೆ ಚೆಕ್ ಮಾಡಿಕೊಳ್ಳಿ
ಹಾಗಾಗಿ ಮಾರ್ಚ್ 15ರ ಒಳಗೆ ಅನ್ನ ಭಾಗ್ಯ ಯೋಜನೆಯ ಹಣ ಎಲ್ಲರ ಖಾತೆಗೆ ತಲುಪಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈಗಾಗಲೇ ಕೆಲವು ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಲಾಗಿದ್ದು, ಮಾರ್ಚ್ ತಿಂಗಳ ಕೊನೆಯ ದಿನಾಂಕದ ಒಳಗೆ ಬಹುತೇಕ ಎಲ್ಲಾ ಫಲಾನುಭವಿಗಳ ಖಾತೆಗೆ ಡಿಬಿಟಿ (Money Deposit) ಆಗುವ ಸಾಧ್ಯತೆ ಇದೆ.
ಇದು ತಾತ್ಕಾಲಿಕ ಪರಿಹಾರ ಅಷ್ಟೇ!
ಹೌದು, ಸರ್ಕಾರ ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಏನೆಂದರೆ ಸರ್ಕಾರಕ್ಕೆ ಪ್ರತಿ ತಿಂಗಳು ಐದು ಕೆಜಿ ಅಕ್ಕಿ ಉಚಿತವಾಗಿ ನೀಡುವಷ್ಟು ಅಕ್ಕಿಯನ್ನು ಹೊಂದಿಸಲು ಸಾಧ್ಯವಾಗಿಲ್ಲ. ಆದರೆ ಅಲ್ಲಿಯವರೆಗೆ ಉಚಿತ ಅಕ್ಕಿಯ ಬದಲು ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಬಿಡುಗಡೆ! ಇಂತಹ ಮಹಿಳೆಯರಿಗೆ ಮಾತ್ರ ಹಣ ಜಮಾ
ಆದರೆ ಇದು ಕೇವಲ ತಾತ್ಕಾಲಿಕ ಪರಿಹಾರ ಅಷ್ಟೇ. ಸದ್ಯದಲ್ಲಿಯೇ ಉಚಿತ ಅಕ್ಕಿ ವಿತರಣೆ ಮಾಡಲು ಸಾಧ್ಯವಾಗದೇ ಇದ್ದರೂ ಇತರ ಪಡಿತರ ವಸ್ತುಗಳನ್ನ ನೀಡಿ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಾಹಿತಿ ಲಭ್ಯವಾಗಿದೆ.
Good news for BPL cardholders, Annabhagya Yojana money was released