ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಯ ಅರ್ಜಿದಾರರಿಗೆ ಗುಡ್ ನ್ಯೂಸ್! ಹೊಸ ಅಪ್ಡೇಟ್ ಕೊಟ್ಟ ರಾಜ್ಯ ಸರ್ಕಾರ, ಖುಷಿಯಲ್ಲಿ ಜನತೆ
ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳು ಅಧಿಕೃತವಾಗಿ ಲಾಂಚ್ ಆಗುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಮಾಹಿತಿ ನೀಡಿದ್ದು, ಈ ಸುದ್ದಿ ಕಾಯುತ್ತಿದ್ದ ಎಲ್ಲಾ ಮಹಿಳೆಯಿರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಕಾಂಗ್ರೆಸ್ ಸರ್ಕಾರವು ಎಲೆಕ್ಷನ್ ವೇಳೆ 5 ಯೋಜನೆಗಳ ಗ್ಯಾರಂಟಿ ನೀಡಿತ್ತು, ಅದನ್ನು ನಂಬಿದ ಜನರು ಕಾಂಗ್ರೆಸ್ ಗೆ ವೋಟ್ ಮಾಡಿ ಗೆಲ್ಲಿಸಿದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆ ಎಲ್ಲಾ ಯೋಜನೆಗಳು ಸುಳ್ಳು, ಅದನ್ನೆಲ್ಲ ಜಾರಿಗೆ ತರಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದವರೇ ಹೆಚ್ಚು. ಆದರೆ ಕಾಂಗ್ರೆಸ್ ಸರ್ಕಾರ ತಮ್ಮ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.
ಈ ಐದು ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಅನ್ನಭಾಗ್ಯ ಯೋಜನೆ (Annabhagya Yojane) ಸಹ ಆಗಿದೆ. ಈ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಇರುವ ಪ್ರತಿ ವ್ಯಕ್ತಿಗೆ ತಿಂಗಳಿಗೆ 10ಕೆಜಿ ಅಕ್ಕಿ ಕೊಡುವುದಾಗಿ ಹೇಳಲಾಗಿತ್ತು.
ಆದರೆ ಅಕ್ಕಿ ಪೂರೈಕೆಯಲ್ಲಿ ಸಮಸ್ಯೆ ಎದುರಾಗಿ, ಸರ್ಕಾರವು ಈಗ 10ಕೆಜಿ ಅಕ್ಕಿ ಪೂರೈಕೆ ಸಾಧ್ಯವಾಗದೆ, 5ಕೆಜಿ ಅಕ್ಕಿ ಕೊಟ್ಟು ಅದರ ಜೊತೆಗೆ ಇನ್ನು 5 ಕೆಜಿ ಹಣವನ್ನು ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ವರ್ಗಾಯಿಸುವುದಾಗಿ ಸರ್ಕಾರ ತಿಳಿಸಿದೆ. ಹಣ ಕೊಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಬಿಪಿಎಲ್ ಕಾರ್ಡ್ ಇರುವವರಿಗೆ 5 ಲಕ್ಷದ ಜೊತೆಗೆ ಫ್ರೀ ಹೆಲ್ತ್ ಕಾರ್ಡ್ ಸಿಗಲಿದೆ ! ಸರ್ಕಾರದಿಂದ ಗುಡ್ ನ್ಯೂಸ್
ಇನ್ನು ಯುವ ಪೀಳಿಗೆಗೆ ಇರುವ ಯುವನಿಧಿ ಯೋಜನೆಯು (Yuva Nidhi Scheme) ಈ ವರ್ಷ ಡಿಸೆಂಬರ್ ನಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ಇದನ್ನು ಸರ್ಕಾರವೇ ಖಚಿತ ಪಡಿಸಿದೆ. ಇನ್ನು ಶಕ್ತಿ ಯೋಜನೆಯ (Shakti Scheme) ಸೌಲಭ್ಯಕ್ಕಾಗಿ ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ಕೊಡಬೇಕು. ಆ ವ್ಯವಸ್ಥೆ ಆಗುವವರೆಗು ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಪ್ರಯಾಣ ಮಾಡಬಹುದು.
ಇನ್ನೆರಡು ಯೋಜನೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಕೆಲಸ ಶುರುವಾಗಿದ್ದು, ಮಹಿಳೆಯರು ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಎರಡು ಯೋಜನೆಗಳು ಅಧಿಕೃತವಾಗಿ ಲಾಂಚ್ ಆಗಲಿದೆ.
ಗೃಹಲಕ್ಷ್ಮಿ (Gruha Lakshmi Scheme) ಮತ್ತು ಗೃಹಜ್ಯೋತಿ ಯೋಜನೆಗಳು (Gruha Jyothi Scheme) ಅಧಿಕೃತವಾಗಿ ಲಾಂಚ್ ಆಗುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಮಾಹಿತಿ ನೀಡಿದ್ದು, ಈ ಸುದ್ದಿ ಕಾಯುತ್ತಿದ್ದ ಎಲ್ಲಾ ಮಹಿಳೆಯಿರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಈ ಜನರಿಗಿಲ್ಲ ಗೃಹಜ್ಯೋತಿ ಭಾಗ್ಯ, ಇವರು ಕರೆಂಟ್ ಬಿಲ್ ಕಟ್ಟಲೇಬೇಕು! ಸರ್ಕಾರದಿಂದ ಹೊಸ ಸೂಚನೆ!
ಅಧಿಕೃತ ಮಾಹಿತಿ ಪ್ರಕಾರ ಆಗಸ್ಟ್ 7ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆ ಲಾಂಚ್ ಆಗಲಿದೆ. ಇನ್ನು ಆಗಸ್ಟ್ 17ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಲಾಂಚ್ ಆಗಲಿದೆ. ಎರಡು ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಡೆಯಲಿದೆ.
ಈ ಎರಡು ಯೋಜನೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ಶುರುವಾಗಿದೆ. ಈ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಇದನ್ನೆಲ್ಲ ನೋಡಿಕೊಳ್ಳುತ್ತಿದ್ದಾರೆ. ಮೊದಲಿಗೆ ನಿಗದಿ ಪಡಿಸಿದ ಜಾಗದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಯೋಜನೆಯನ್ನು ಉದ್ಘಾಟಿಸಲಿದ್ದು, ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಮಾಡಲಿದ್ದಾರೆ.
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ, ಎಲ್ಲರಿಗೂ ಸಿಗುತ್ತೆ ಫ್ರೀ ಲ್ಯಾಪ್ ಟಾಪ್! ಇಂದೇ ಅರ್ಜಿ ಸಲ್ಲಿಸಿ
ರಾಜ್ಯದಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಆಗಬೇಕು ಎಂದು ಕಾಂಗ್ರೆಸ್ ಸರ್ಕಾರ ಈ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅಲ್ಲದೆ ಕೊಟ್ಟ ಮಾತಿನಂತೆ ಎಲ್ಲ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪಕ್ಷ ಕೆಲಸಮಾಡುತ್ತಿದೆ. ಈ ಮೂಲಕ ಆಗಸ್ಟ್ ತಿಂಗಳಿನಿಂದಲೇ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ಹಣ ಜಮಾ ಆಗಲಿದೆ.
Good news for Gruha Jyoti and Gruha Lakshmi Yojana applicants