ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿರುವವರಿಗೆ ಸರ್ಕಾರದಿಂದ ಸಿಕ್ತು ಗುಡ್ ನ್ಯೂಸ್

ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಹೊಂದಿರುವವರಿಗೆ ಸರ್ಕಾರದಿಂದ ಹೆಚ್ಚುವರಿ ಪ್ರಯೋಜನಗಳು ಸಿಗುತ್ತವೆ.

ಕೇಂದ್ರ ಸರ್ಕಾರ (Central government) ವಾಗಿರಲಿ ಅಥವಾ ರಾಜ್ಯ ಸರ್ಕಾರ (State government) ಆಗಿರಲಿ, ಪ್ರಜೆಗಳ ಹಿತ ದೃಷ್ಟಿಯಿಂದ ಅದರಲ್ಲೂ ಹಿಂದುಳಿದ ವರ್ಗದ ಜನರ ಕಲ್ಯಾಣಕ್ಕಾಗಿ ಸಾಕಷ್ಟು ಉತ್ತಮ ಯೋಜನೆಗಳನ್ನು ಪರಿಚಯಿಸುತ್ತವೆ. ಯೋಜನೆಗಳ ಪ್ರಯೋಜನವನ್ನು ಪ್ರತಿಯೊಬ್ಬ ಫಲಾನುಭವಿ ಕೂಡ ಪಡೆದುಕೊಳ್ಳಬೇಕು ಎನ್ನುವುದು ಸರ್ಕಾರದ ಮಹತ್ವದ ಉದ್ದೇಶ.

ಸರ್ಕಾರ ಬಡವರಿಗಾಗಿ ಜಾರಿಗೆ ತರುವ ಯಾವುದೇ ಯೋಜನೆಗಳಿರಲಿ, ಅದಕ್ಕೆ ಮುಖ್ಯವಾಗಿ ಬಡತನ ರೇಖೆಗಿಂತ ಕೆಳಗಿನವರು (below poverty line) ಫಲಾನುಭವಿಗಳಾಗಿದ್ದರೆ ಅಂತವರಿಗೆ ಬಿಪಿಎಲ್ ಕಾರ್ಡ್ (BPL card) ಹೊಂದಿರುವುದು ಬಹಳ ಮುಖ್ಯ. ಯಾಕೆಂದರೆ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಹೊಂದಿರುವವರಿಗೆ ಸರ್ಕಾರದಿಂದ ಹೆಚ್ಚುವರಿ ಪ್ರಯೋಜನಗಳು ಸಿಗುತ್ತವೆ.

ಅನ್ನಭಾಗ್ಯ ಯೋಜನೆಯ ಮಹತ್ವದ ಅಪ್ಡೇಟ್; ಸ್ಕೀಮ್ ನಲ್ಲಿ ಧಿಡೀರ್ ಬದಲಾವಣೆ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿರುವವರಿಗೆ ಸರ್ಕಾರದಿಂದ ಸಿಕ್ತು ಗುಡ್ ನ್ಯೂಸ್ - Kannada News

ಇದಕ್ಕೆ ಉದಾಹರಣೆಯಾಗಿ ಇತ್ತೀಚಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ (Congress government), ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ (AnnaBhagya scheme) ಗೃಹಲಕ್ಷ್ಮಿ ಯೋಜನೆ (Gruh alakshmi scheme) ಮೊದಲಾದ ಗ್ಯಾರಂಟಿ ಯೋಜನೆಗಳಿಗೆ ಫಲಾನುಭವಿಗಳು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಮಾತ್ರ ಪ್ರಯೋಜನ ಪಡೆದುಕೊಳ್ಳಬಹುದು.

ಬಿಪಿಎಲ್ ರೇಷನ್ ಕಾರ್ಡ್ ಒಂದು ನಿಮ್ಮ ಬಳಿ ಇದ್ದರೆ ಆಸ್ಪತ್ರೆಯ ಖರ್ಚು ವೆಚ್ಚಗಳಿರಬಹುದು, ಶೈಕ್ಷಣಿಕ ವೆಚ್ಚಗಳಿರಬಹುದು, ಅಷ್ಟೇ ಯಾಕೆ ಸರ್ಕಾರಿ ಕಚೇರಿಯಲ್ಲಿ ಯಾವುದೇ ಕೆಲಸ ಮಾಡಿಸಿಕೊಳ್ಳುವುದಕ್ಕೂ ಕೂಡ ಬಹಳ ಅನುಕೂಲವಾಗುತ್ತದೆ.

ನಿಟ್ಟಿನಲ್ಲಿ ಹೊಸ ರೇಷನ್ ಕಾರ್ಡ್ (new ration card) ಗಾಗಿ ಅರ್ಜಿ ಸಲ್ಲಿಸಿರುವವರು ತಮಗೆ ರೇಷನ್ ಕಾರ್ಡ್ ವಿತರಣೆ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Covid-19 ಸಮಯದಲ್ಲಿ ಹಾಗೂ ಚುನಾವಣಾ (election) ನೀತಿ ಸಂಹಿತೆಯ ಪ್ರಕಾರ ಕಳೆದ ಎರಡು ವರ್ಷಗಳಿಂದ ಸಲ್ಲಿಕೆಯಾಗಿರುವ ಸುಮಾರು ಮೂರು ಲಕ್ಷ ರೇಷನ್ ಕಾರ್ಡ್ ಅರ್ಜಿಗಳು ಇನ್ನೂ ವಿತರಣೆ ಆಗಿಲ್ಲ. ಈ ಬಗ್ಗೆ ಸದ್ಯ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ (minister K.H Muniyappa) ಸ್ಪಷ್ಟನೆ ನೀಡಿದ್ದಾರೆ.

ಈ ಕಾರ್ಡ್ ನಂಬರ್ ಬಳಸಿ ಗೃಹಲಕ್ಷ್ಮಿ ಯೋಜನೆ ಹಣ ಬಂತಾ ಇಲ್ವಾ? ನೋಡಬಹುದು

ಸಚಿವರು ಹೇಳಿದ್ದೇನು?

ತಮ್ಮ ಸಾಮಾಜಿಕ ಜಾಲತಾಣದ X ಖಾತೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ಹಂಚಿಕೊಂಡಿದ್ದು, ಸದ್ಯದಲ್ಲಿಯೇ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲಾಗುವುದು. ಬೇರೆ ಬೇರೆ ಕಾರಣಗಳಿಂದ ರೇಷನ್ ಕಾರ್ಡ್ ತಿದ್ದುಪಡಿ (ration card correction) ಮಾಡಿಕೊಳ್ಳಲು ಸಾಧ್ಯವಾಗದೆ ಇರುವವರೆಗೂ ಕೂಡ ಮತ್ತೆ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗುವುದು ಎನ್ನುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

BPL Ration Cardರದ್ದಾಗಲಿದೆ ಇಂತಹ ರೇಷನ್ ಕಾರ್ಡ್! (Ration card cancellation)

ಸಚಿವರು ಇನ್ನೊಂದು ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದು, ಒಂದು ರಾಜ್ಯಕ್ಕೆ ಇಷ್ಟೇ ಬಿಪಿಎಲ್ ಕಾರ್ಡ್ ನೀಡಬೇಕು ಎನ್ನುವ ನಿಯಮ ಇರುತ್ತದೆ. 2016ರ ಮಾನದಂಡಗಳನ್ನು ಮೀರಿ ಯಾರು BPL ರೇಷನ್ ಕಾರ್ಡ್ ಹೊಂದಿರುತ್ತಾರೋ ಅಂತವರ ಕಾರ್ಡ್ ಅನ್ನು ರದ್ದು ಪಡಿ ಮಾಡುವುದು ಅನಿವಾರ್ಯವಾಗಿದೆ.

ಉಳ್ಳವರು ರೇಷನ್ ಕಾರ್ಡ್ ಹೊಂದಿರುವುದರಿಂದ ನಿಜವಾದ ಫಲಾನುಭವಿಗಳಿಗೆ ವಂಚನೆ ಆಗುತ್ತಿದೆ. ಹಾಗಾಗಿ ಆಹಾರ ಇಲಾಖೆ ಬಹಳ ಕುಲಂಕುಶವಾಗಿ ರೇಷನ್ ಕಾರ್ಡ್ ಪರಿಶೀಲನೆ ನಡೆಸುತ್ತಿದ್ದು, ಸದ್ಯದಲ್ಲಿ ಸಾಕಷ್ಟು ಕಾನೂನು ಬಾಹಿರವಾಗಿ, ನಿಯಮ ವಿರುದ್ಧವಾಗಿ ರೇಷನ್ ಕಾರ್ಡ್ ಹೊಂದಿರುವವರ ಕಾರ್ಡ್ ರದ್ದು ಪಡಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆ ಹಣ ಬಂತಾ? ಸ್ಟೇಟಸ್ ಈ ರೀತಿ ತೋರಿಸಿದ್ರೆ ಹಣ ಬರೋಲ್ಲ

ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ತಿಳಿದುಕೊಳ್ಳಿ!

ಸರ್ಕಾರ ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ ರದ್ದುಪಡಿ ಮಾಡಿದೆ. ನಿಮ್ಮ ಊರಿನಲ್ಲಿ ಯಾರ ರೇಷನ್ ಕಾರ್ಡ್ ರದ್ದಾಗಿದೆ ಅಥವಾ ನಿಮ್ಮ ರೇಷನ್ ಕಾರ್ಡ್ ಇದಿಯೋ ಎಲ್ಲವೂ ಎಂಬುದನ್ನು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ https://ahara.kar.nic.in/ ಗೆ ಭೇಟಿ ಕೊಟ್ಟು ತಿಳಿದುಕೊಳ್ಳಬಹುದು.

ಈ ವೆಬ್ ಸೈಟ್ ನಲ್ಲಿ ಮುಖಪುಟ ತೆರೆದುಕೊಂಡಾಗ ಎಡ ಭಾಗದಲ್ಲಿ ಇರುವ ಮೂರು ಲೈನ್ ಗಳ ಮೇಲೆ ಕ್ಲಿಕ್ ಮಾಡಿ. ಈ ಸ್ಥಿತಿ ಎನ್ನುವ ಆಯ್ಕೆಯನ್ನು ಕಾಣುತ್ತೀರಿ. ಅಲ್ಲಿ ರದ್ದು ಪಡಿ ಅಥವಾ ತಿದ್ದುಪಡಿ ಮಾಡಲಾದ ಪಡಿತರ ಚೀಟಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಬಳಿಕ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಅದರ ಮೇಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮೊದಲಾದ ವಿವರಗಳನ್ನು ನೀಡಿದರೆ ರದ್ದುಪಡಿ ಆಗಿರುವ ಹೆಸರುಗಳನ್ನು ನೋಡಬಹುದು.

Good news from the government for those who have applied for new ration card

Follow us On

FaceBook Google News

Good news from the government for those who have applied for new ration card