ಹಸು, ಎಮ್ಮೆ ಖರೀದಿಗೆ ಶೇ.25ರಷ್ಟು ಸಹಾಯಧನ! ಹೈನುಗಾರಿಕೆಗೆ ಸರ್ಕಾರದ ಪ್ರೋತ್ಸಾಹ
ಉತ್ತರ ಕರ್ನಾಟಕದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ, ಮಿಶ್ರತಳಿ ಹಸು ಮತ್ತು ಸುಧಾರಿತ ಎಮ್ಮೆ ಖರೀದಿಗೆ ಸಹಾಯಧನ ನೀಡುವ ಯೋಜನೆಗೆ ಅನುಮೋದನೆ ನೀಡಿದೆ.

- ಹೈನುಗಾರಿಕೆ ಉತ್ತೇಜನಕ್ಕೆ ಹೊಸ ಯೋಜನೆ
- ಮಿಶ್ರತಳಿ ಹಸು, ಎಮ್ಮೆ ಖರೀದಿಗೆ ಸಹಾಯಧನ
- 9,600 ಮಹಿಳಾ ಫಲಾನುಭವಿಗಳಿಗೆ ಪ್ರೋತ್ಸಾಹ
ಬೆಂಗಳೂರು (Bengaluru): ಉತ್ತರ ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಆದಾಯದ ಅವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ (Karnataka Govt) ಮಹತ್ವದ ಹೆಜ್ಜೆ ಇಟ್ಟಿದೆ. ಮಿಶ್ರತಳಿ ಹಸು ಅಥವಾ ಸುಧಾರಿತ ಎಮ್ಮೆ ಖರೀದಿಸುವ (Dairy Farming Scheme) ಮಹಿಳೆಯರಿಗೆ ಪ್ರೋತ್ಸಾಹಧನ ನೀಡುವ ಯೋಜನೆಗೆ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಈ ಯೋಜನೆಯಡಿ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳ ಒಟ್ಟು 9,600 ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹರಿಗೆ ಶೇ.25ರಷ್ಟು ಸಹಾಯಧನ (Subsidy) ನೀಡಲಾಗುತ್ತಿದ್ದು, ಹೈನುಗಾರಿಕೆಯನ್ನು ಸ್ವಾವಲಂಬಿ ಆದಾಯದ ಮೂಲವನ್ನಾಗಿ ಬೆಳೆಸಲು ನೆರವಾಗಲಿದೆ.
ಇದನ್ನೂ ಓದಿ: ಕರ್ನಾಟಕ ಹವಾಮಾನ: ಅ.9ರಂದು ಬೆಂಗಳೂರು, ಮೈಸೂರು, ಮಂಡ್ಯ ಭಾಗದಲ್ಲಿ ಮಿಂಚು, ಗುಡುಗು ಸಹಿತ ಮಳೆ
ಯೋಜನೆಗೆ ಒಟ್ಟು ₹18 ಕೋಟಿ ವೆಚ್ಚವಾಗಲಿದೆ. ಬೆಳಗಾವಿ ವಿಭಾಗದ 4,800 ಫಲಾನುಭವಿಗಳಿಗೆ ₹9 ಕೋಟಿ ಹಾಗೂ ಕಲಬುರಗಿ ವಿಭಾಗದ 4,800 ಫಲಾನುಭವಿಗಳಿಗೆ ₹9 ಕೋಟಿ ಅನುದಾನವನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.
ಪ್ರತಿ ಫಲಾನುಭವಿಗೆ ₹18,750ರಂತೆ ಪ್ರೋತ್ಸಾಹಧನ (Incentive) ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಮಿಶ್ರತಳಿ ಹಸು ಅಥವಾ ಸುಧಾರಿತ ಎಮ್ಮೆ ಖರೀದಿಗೆ ಈ ನೆರವು ಬಳಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ, ಶೇ.90ರಷ್ಟು ಬೆಳೆ ಹಾನಿ! 2,500 ರೂಪಾಯಿ ಮೊದಲ ಕಂತಿನ ಪರಿಹಾರ ಬಿಡುಗಡೆಗೆ ಕ್ರಮ
ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ (Women Empowerment) ಹೆಚ್ಚಿಸುವುದರ ಜೊತೆಗೆ ಹಾಲು ಉತ್ಪಾದನೆ ಹೆಚ್ಚಿಸುವುದು ಮತ್ತು ಹೈನುಗಾರಿಕೆ (Dairy Farming) ಚಟುವಟಿಕೆಗೆ ಉತ್ತೇಜನ ನೀಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.
ಗೃಹಲಕ್ಷ್ಮಿ ಯೋಜನೆಯ ಹೊಸ ಲಿಸ್ಟ್ ಸಿದ್ದ; ಈ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸಿಗುತ್ತೆ ಹಣ!
Read the story
ಕರ್ನಾಟಕ ಮಹಿಳೆಯರಿಗೆ ₹2 ಲಕ್ಷದವರೆಗೆ ಸಾಲ ಸೌಲಭ್ಯ; ಸ್ವಂತ ಉದ್ಯಮ ಆರಂಭಿಸಲು ಆರ್ಥಿಕ ನೆರವು
Read the story
10 ಲಕ್ಷ ಮಂದಿ ರೈತರಿಗೆ ಪಿಎಂ ಕಿಸಾನ್ ಯೋಜನೆ ಹಣ ಸ್ಥಗಿತ! ಕೇಂದ್ರದ ಶಾಕಿಂಗ್ ನಿರ್ಧಾರ
Read the story
ಕರ್ನಾಟಕ SSLC ವಿದ್ಯಾರ್ಥಿಗಳು ಹಾಗೂ ಶಾಲೆಗಳಿಗೆ KSEAB ಮಹತ್ವದ ಸೂಚನೆ! ತಪ್ಪದೇ ಗಮನಿಸಿ
Read the story
ಕರ್ನಾಟಕ ರಾಜ್ಯದಲ್ಲಿ ಅಕ್ಕಿ ಬೆಲೆ ಗಗನಕ್ಕೆ; ಕೆಜಿಗೆ ₹20 ರೂಪಾಯಿ ಏರಿಕೆ! 4 ತಿಂಗಳಲ್ಲಿ ಶೇ 30ರಷ್ಟು ಹೆಚ್ಚಳ
Read the story




