ನಿಮಗೂ ಕೂಡ ಸರ್ಕಾರಿ ನೌಕರಿ (Government Job) ಗಿಟ್ಟಿಸಿಕೊಳ್ಳಬೇಕು ಅಂತ ಇದ್ರೆ ಇದೊಂದು ಸುವರ್ಣ ಅವಕಾಶ. ರಾಜ್ಯ ವಿಧಾನಸಭೆ (Karnataka Legislative Assembly) ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ (interested candidate can apply) ಯನ್ನು ಆಹ್ವಾನಿಸಿದೆ.
ತನ್ನಲ್ಲಿ ಖಾಲಿ ಇರುವ ಹುದ್ದೆಗಳ (Vacancy) ಬಗ್ಗೆ ಕರ್ನಾಟಕ ವಿಧಾನಸಭೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು ಅರ್ಜಿ ಸಲ್ಲಿಸಲು ಇಂದೇ (ಸೆಪ್ಟೆಂಬರ್ 8, 2023) ಕೊನೆಯ ದಿನಾಂಕವಾಗಿದೆ. ಹಾಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯ ಆಧಾರದ ಮೇಲೆ ಕೂಡಲೇ ಈ ಹುದ್ದೆಗೆ ಅಪ್ಲೈ ಮಾಡಿ.
ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳು ಯಾವವು! Jobs
ಕರ್ನಾಟಕ ವಿಧಾನಸಭೆ ಹೊರಡಿಸಿರುವ ಅಧಿ ಸೂಚನೆಯ ಪ್ರಕಾರ ಇಲ್ಲಿ ಒಟ್ಟು ಮೂರು ಚಾಲಕ (Driver Job) ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಳನೇ ತರಗತಿಯನ್ನು ಪಾಸ್ ಆಗಿರಬೇಕು ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಏಳನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಕರ್ನಾಟಕ ವಿಧಾನಸಭೆ ನೇಮಕಾತಿ ಅದೇ ಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗೆ ಬೇಕಾಗಿರುವ ವಯೋಮಿತಿ – Age Limit
ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 35 ವರ್ಷಕ್ಕಿಂತ ಹೆಚ್ಚಿನವರು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಓಬಿಸಿ (OBC) ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ ಸಿ ಎಸ್ ಟಿ (SC/ST) ಅಭ್ಯರ್ಥಿಗಳಿಗೆ ಐದು ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಕರ್ನಾಟಕ ವಿಧಾನಸಭೆ ಚಾಲಕ ಹುದ್ದೆಗಳಿಗೆ ಆಯ್ಕೆಯಾದರೆ ಅಭ್ಯರ್ಥಿಗಳಿಗೆ ಮಾಸಿಕ 21,400 ರೂ.ರಿಂದ 42,000 ರೂ.ಗಳ ವರೆಗೆ ಸಂಬಳ ನೀಡಲಾಗುವುದು. ಇನ್ನು ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿಯೇ (Bengaluru Posting) ಕಾರ್ಯ ನಿರ್ವಹಿಸಲು ಸಿದ್ಧವಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – Last Date
ರಾಜ್ಯ ವಿಧಾನಸಭೆಯಲ್ಲಿ ಖಾಲಿ ಇರುವ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕಳೆದ ತಿಂಗಳು ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 8, 2023. ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ – How To Apply
ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯವಿರುವ ದಾಖಲೆಗಳನ್ನು ಕೂಡ ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ಕಾರ್ಯದರ್ಶಿ, ಅಸೆಂಬ್ಲಿ ಸಚಿವಾಲಯ
ಕರ್ನಾಟಕ ಅಂಚೆಪಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ
ಬೆಂಗಳೂರು 560001.
ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ, ಸರ್ಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದು. ಹಾಗೂ ಇಂದೇ ಕೊನೆಯ ದಿನಾಂಕವಾದ್ದರಿಂದ ಕೂಡಲೇ ಅರ್ಜಿ ಸಲ್ಲಿಸಿ.
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019