ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯತ್ (Chitradurga district Gram Panchayat recruitment) ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ
ಈಗ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುತ್ತಾರೆ. ಆದರೆ ವಿದ್ಯಾಬ್ಯಾಸ ಮುಗಿದ ನಂತರ ಸರ್ಕಾರಿ ಉದ್ಯೋಗ (government job) ಕ್ಕೆ ಸೇರಬೇಕು ಎನ್ನುವುದು ಹಲವರ ಕನಸಾಗಿರುತ್ತದೆ.
ಸರ್ಕಾರಿ ಉದ್ಯೋಗವಾದರೆ ಉದ್ಯೋಗದ ಭದ್ರತೆ ಹೆಚ್ಚಾಗಿರುತ್ತದೆ. ಅಲ್ಲದೆ ಒಮ್ಮೆ ಉದ್ಯೋಗಕ್ಕೆ ಸೇರಿದ ನಂತರ ನಿವೃತ್ತಿಯ (retired life) ವರೆಗೆ ಯಾವುದೇ ರೀತಿಯ ಚಿಂತೆ ಇರುವುದಿಲ್ಲ. ಹಾಗಾಗಿ ಹೆಚ್ಚಿನ ಯುವಕರು ಸರ್ಕಾರಿ ನೌಕರಿ ಸೇರಲು ಕಾಯುತ್ತಿರುತ್ತಾರೆ. ಇದೀಗ ರಾಜ್ಯ ಸರ್ಕಾರವು ಇಂತಹ ಯುವಕರಿಗೆ ಗುಡ್ ನ್ಯೂಸ್ ನೀಡಿದೆ.
ಗೃಹಲಕ್ಷ್ಮಿ ಹಣ ಒಂದೇ ದಿನದಲ್ಲಿ ಜಮಾ! ಈ ಖಾತೆ ತೆರೆದವರಿಗೆ ತಕ್ಷಣ ಹಣ ಬಂದಿದೆ
ಗ್ರಾಮ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ: (Gram Panchayat recruitment)
ನಮ್ಮ ರಾಜ್ಯದಲ್ಲಿ ಅನೇಕ ಗ್ರಾಮ ಪಂಚಾಯತ್ನಲ್ಲಿ ಅಗತ್ಯಕ್ಕೆ ತಕ್ಕಷ್ಟು ಸಿಬ್ಬಂದಿಗಳು ಇಲ್ಲ. ಹಾಗಾಗಿ ಸರ್ಕಾರವು ಈ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಇದರ ಭಾಗವಾಗಿ ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯತ್ (Chitradurga district Gram Panchayat recruitment) ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ 6 ಲೈಬ್ರರಿ ಸೂಪರ್ವೈಸರ್ (library supervisor) ಹುದ್ದೆಗಳು ಖಾಲಿ ಇದೆ. ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಮುಗಿದವರು, ಲೈಬ್ರರಿ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್ (library science certificate course) ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕೆಲಸಕ್ಕೆ ಆಯ್ಕೆ ಆದವರಿಗೆ ಪ್ರತಿ ತಿಂಗಳು 15,196 ರೂ. ಸಂಬಳ ನೀಡಲಾಗುತ್ತದೆ.
ಉಚಿತ ಅಕ್ಕಿ, ಗೃಹಲಕ್ಷ್ಮಿ ಹಣ ಪಡೆಯೋಕೆ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡಿ!
ಶೈಕ್ಷಣಿಕ ಅರ್ಹತೆಗಳು: (education qualification)
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪಿಯುಸಿ ಲೈಬ್ರರಿ ಸೈನ್ಸ್ ಕೋರ್ಸ್ ಸರ್ಟಿಫಿಕೇಟ್ ಪಡೆದಿರಬೇಕು.
ಜಮೀನು, ಆಸ್ತಿ ಖರೀದಿ ಮಾಡುವವರಿಗೆ ಹೊಸ ನಿಯಮ! ನೋಂದಣಿಗೆ ಹೊಸ ರೂಲ್ಸ್
ವಯೋಮಿತಿ: (age limit)
ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ 18 ವರ್ಷ ಮೇಲ್ಪಟ್ಟವರು ಹಾಗೂ 35 ವರ್ಷಗಳಿಗಿಂತ ಕಡಿಮೆ ಇರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ: ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ಕ್ಕೆ ಸೇರಿದವರಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದವರಿಗೆ 3 ವರ್ಷ, ವಿಧವಾ ಅಭ್ಯರ್ಥಿಗಳಿಗೆ 1೦ ವರ್ಷ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು 26 ಡಿಸೆಂಬರ್ 2023 ಅಂದರೆ ಇಂದೇ ಕೊನೆಯ ದಿನವಾಗಿದೆ (Today is the last date to apply).
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸಬಹುದು.
ಆಯ್ಕೆ ಸಮಿತಿ ಕಾರ್ಯದರ್ಶಿಗಳು ಹಾಗೂ ಉಪ ಭದ್ರತೆಗಳು
ಜಿಲ್ಲಾ ಪಂಚಾಯತ್ ಚಿತ್ರದುರ್ಗ,
ಕ್ರೀಡಾಂಗಣ ರಸ್ತೆ, ಚಿತ್ರದುರ್ಗ
ಎಪಿಎಲ್, ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದವರಿಗೆ ಹೊಸ ಆದೇಶ
Government Job in Gram Panchayat, Just apply if you have passed PUC