ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಸರ್ಕಾರದ ನಿರ್ಧಾರ; ರೇಷನ್ ಕಾರ್ಡ್ ವಿತರಣೆ!

ಬಿಪಿಎಲ್ ಕಾರ್ಡ್ (BPL Card) ಹೊಂದಿರುವವರಿಗೆ ಸರ್ಕಾರದಿಂದ ವಿಶೇಷ ಅನ್ನಭಾಗ್ಯ ಯೋಜನೆ (Annabhagya scheme) ಯಂತಹ ಯೋಜನೆಗಳು ಕೂಡ ಜಾರಿಗೆ ಬಂದಿವೆ.

ಬಡತನ ರೇಖೆಗಿಂತ ಕೆಳಗಿರುವ (below poverty line) ಕುಟುಂಬಗಳಿಗೆ ಇದು ಗುಡ್ ನ್ಯೂಸ್ ಎಂದೇ ಹೇಳಬಹುದು. ಯಾಕಂದ್ರೆ ಕಳೆದ ಎರಡುವರೆ ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್ (BPL card) ಪಡೆದುಕೊಳ್ಳಲು ಕಾದು ಕುಳಿತಿದ್ದವರಿಗೆ, ಸರ್ಕಾರ ಅಂತೂ ಬಿಪಿಎಲ್ ಕಾರ್ಡ್ ವಿತರಣೆ ಮಾಡಲು ನಿರ್ಧರಿಸಿದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ! (Ration card correction)

ಇಂದು ರೇಷನ್ ಕಾರ್ಡ್ ಎನ್ನುವುದು ಬಹಳ ಮುಖ್ಯವಾಗಿರುವ ದಾಖಲೆಯಾಗಿದೆ. ಸರ್ಕಾರದ ಯೋಜನೆ ಪ್ರಯೋಜನ ಪಡೆದುಕೊಳ್ಳಲು, ಆರೋಗ್ಯ ಸೇವೆಯಲ್ಲಿ ರಿಯಾಯಿತಿ ಪಡೆದುಕೊಳ್ಳಲು ಹಾಗೂ ಇತರ ಸರ್ಕಾರಿ ಕೆಲಸಗಳಿಗೂ ಕೂಡ ರೇಷನ್ ಕಾರ್ಡ್ ಇದ್ರೆ ಬಹಳ ಅನುಕೂಲವಾಗುತ್ತದೆ.

ಬಿಪಿಎಲ್ ಕಾರ್ಡ್ (BPL Card) ಹೊಂದಿರುವವರಿಗೆ ಸರ್ಕಾರದಿಂದ ವಿಶೇಷ ಅನ್ನಭಾಗ್ಯ ಯೋಜನೆ (Annabhagya scheme) ಯಂತಹ ಯೋಜನೆಗಳು ಕೂಡ ಜಾರಿಗೆ ಬಂದಿವೆ.

ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಸರ್ಕಾರದ ನಿರ್ಧಾರ; ರೇಷನ್ ಕಾರ್ಡ್ ವಿತರಣೆ! - Kannada News

ಇನ್ಮುಂದೆ ಮೊಬೈಲ್‌ನಲ್ಲೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಿ; ಇಲ್ಲಿದೆ ಮಾಹಿತಿ!

ಇದೀಗ ಸರ್ಕಾರ ರೇಷನ್ ಕಾರ್ಡ್ ಅಗತ್ಯವಾಗಿರುವ ದಾಖಲೆ ಎನ್ನುವ ಕಾರಣಕ್ಕೆ ರೇಷನ್ ಕಾರ್ಡ್ ನಲ್ಲಿ ಹೆಸರಿನಿಂದ ಹಿಡಿದು ವಿಳಾಸದ ವರೆಗೆ ಎಲ್ಲ ಮಾಹಿತಿಗಳು ಸರಿಯಾಗಿ ಇರಬೇಕು ಎನ್ನುವ ಕಾರಣಕ್ಕೆ, ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ಅವಕಾಶ ಮಾಡಿ ಕೊಟ್ಟಿತ್ತು.

ಸರ್ಕಾರದ ಗ್ಯಾರಂಟಿ ಯೋಜನೆ (guarantee schemes) ಗಳ ಪ್ರಯೋಜನ ಪಡೆದುಕೊಳ್ಳಲು ಬಿಪಿಎಲ್ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ಗುರುತಿನ ಕಾರ್ಡ್ ಆಗಿದ್ದು, ಇದರಲ್ಲಿ ಅಗತ್ಯ ಇರುವ ತಿದ್ದುಪಡಿಗೆ ಈಗಾಗಲೇ ನಾಲ್ಕು ಬಾರಿ ಅವಕಾಶ ಮಾಡಿಕೊಡಲಾಗಿತ್ತು.

ಆದರೆ ಕೆಲವು ತಾಂತ್ರಿಕ ದೋಷ (technical issues) ಗಳಿಂದ ಎಲ್ಲರೂ ತಿದ್ದುಪಡಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಹಾಗಾಗಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಸದ್ಯದಲ್ಲಿಯೇ ಮತ್ತೆ ಅವಕಾಶ ನೀಡಲಿದೆ.

ಈ ತಿಂಗಳ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿದೆ! ಈ ರೀತಿ ಚೆಕ್ ಮಾಡಿಕೊಳ್ಳಿ

BPL Ration Cardಹೊಸ ಬಿಪಿಎಲ್ ಕಾರ್ಡ್ ವಿತರಣೆ!

ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಸಾಕಷ್ಟು ಮಂದಿ ಅರ್ಜಿ ಸಲ್ಲಿಸಿ ಎರಡುವರೆ ವರ್ಷಗಳ ಕಳೆದವು. ಕರೋನಾ ಕಾರಣದಿಂದಾಗಿ ಹಾಗೂ ವಿಧಾನಸಭಾ ಚುನಾವಣೆ (vidhansabha election)ಯ ನೀತಿ ಸಂಹಿತೆಯ ಕಾರಣದಿಂದಾಗಿ ಕಳೆದ ಎರಡುವರೆ ವರ್ಷಗಳಿಂದ ಅರ್ಜಿಗಳನ್ನ ಪರಿಶೀಲನೆ ನಡೆಸಿ ವಿತರಣೆ ಮಾಡಲಾಗಿಲ್ಲ.

ಆದರೆ ಇದರ ಬಗ್ಗೆ ಈಗ ಮಹತ್ವದ ಮಾಹಿತಿಯನ್ನು ನೀಡಿರುವ ಆಹಾರ ಸಚಿವ ಕೆಎಚ್ ಮುನಿಯಪ್ಪ (Food minister K.H muniyappa) , ಇನ್ನು ಕೆಲವೇ ದಿನಗಳಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ. ಬಿಪಿಎಲ್ ಕಾರ್ಡ್ ಇರದೆ ಸಾಕಷ್ಟು ಕುಟುಂಬಗಳು ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಅಂತ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಹಾಗಾಗಿ ಎಲ್ಲರಿಗೂ ಈ ಸೌಲಭ್ಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರ ಇನ್ನು ಸದ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಆರಂಭಿಸಬಹುದು.

ಗೃಹಲಕ್ಷ್ಮಿ 6ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್; ಅದಕ್ಕೂ ಮೊದಲು ಈ ಕೆಲಸ ಮಾಡಿ

ಹೊಸ ಅರ್ಜಿ ಸಲ್ಲಿಸಲು ಅವಕಾಶವಿದೆಯೇ?

ಒಂದು ರಾಜ್ಯಕ್ಕೆ ಇಷ್ಟೇ ರೇಷನ್ ಕಾರ್ಡ್ ವಿತರಣೆ ಮಾಡಬೇಕು ಎನ್ನುವ ನಿಯಮ ಇರುತ್ತದೆ. ಹಾಗಾಗಿ ಹಳೆಯ ಅರ್ಜಿ ಪರಿಶೀಲಿಸಿ, ರೇಷನ್ ಕಾರ್ಡ್ ವಿತರಣೆ ಆಗದ ಹೊರತು ಮತ್ತೆ ಹೊಸ ಅರ್ಜಿಗೆ ಅವಕಾಶ ಇರುವುದಿಲ್ಲ. ಆದರೆ ಸದ್ಯದಲ್ಲೇ ಹೊಸ ಕಾರ್ಡ್ ವಿತರಣೆ ಆಗುತ್ತಿರುವುದರಿಂದ, ಮತ್ತೆ ಹೊಸ ಅತಿ ಸಲ್ಲಿಸುವುದಕ್ಕೂ ಕೂಡ ಸರ್ಕಾರ ಅವಕಾಶ ಮಾಡಿಕೊಡುವ ನಿರೀಕ್ಷೆ ಇದೆ.

ರೈತರಿಗೆ ಗುಡ್ ನ್ಯೂಸ್; ರಾಜ್ಯದ 30 ಲಕ್ಷ ರೈತರಿಗೆ ಸಿಗಲಿದೆ ಬರ ಪರಿಹಾರ ಸೌಲಭ್ಯ!

Government’s decision to issue new BPL card, Distribution of Ration Card

Follow us On

FaceBook Google News

Government's decision to issue new BPL card, Distribution of Ration Card