ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆಗೆ ಸರ್ಕಾರ ಹೊಸ ತಂತ್ರ! ಮಹಿಳೆಯರಿಗೆ ಬಿಗ್ ರಿಲೀಫ್
ಇದುವರೆಗೆ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ನಿಮ್ಮ ಖಾತೆಗೆ ಬಾರದೆ ಇದ್ರೆ ಈ ಸುದ್ದಿ ನಿಮಗಾಗಿ. ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ (Payment Bank) ಸಿಬ್ಬಂದಿಗಳು, ಗೃಹಿಣಿಯರ ಖಾತೆ ಪರಿಶೀಲನೆ ನಡೆಸಿ ಹಣ ಬರದೆ ಇರುವ ಖಾತೆಗೆ ಹಣ ಬರುವಂತೆ ಮಾಡುತ್ತಿದ್ದಾರೆ.
ಪ್ರತಿಯೊಂದು ಜಿಲ್ಲೆಯ ಹಳ್ಳಿಗಳಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಹಣ ಯಾಕೆ ಬರುತ್ತಿಲ್ಲ ಎನ್ನುವುದನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಇಲ್ಲಿದೆ ಸಿಹಿ ಸುದ್ದಿ! ಹೊಸ ರೇಷನ್ ಕಾರ್ಡ್ ವಿತರಣೆ ದಿನಾಂಕ ಘೋಷಿಸಿದ ಸರ್ಕಾರ
ಇಲ್ಲಿಯವರೆಗೆ 25 ಗ್ರಾಮಗಳಿಗೆ ಭೇಟಿ ನೀಡಿರುವ ಅಂಚೆ ಇಲಾಖೆಯ ಸಿಬ್ಬಂದಿಗಳು ಬ್ಯಾಂಕ್ ಖಾತೆಯಲ್ಲಿ (Bank Account) ಸಮಸ್ಯೆ ಇದ್ದರೆ, ಅಂಚೆ ಕಚೇರಿಯಲ್ಲಿ ಹೊಸ ಖಾತೆಯನ್ನು ತೆರೆದು ಗೃಹಿಣಿಯರಿಗೆ ಮುಂದಿನ ಕಂತಿನ ಹಣ ಸಿಗುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ಬಾರದೆ ಇರಲು ಕಾರಣ ಏನು?
ಮುಖ್ಯವಾಗಿ ಬ್ಯಾಂಕಿಗೆ ಸಂಬಂಧಿಸಿದ ತೊಂದರೆಗೆ ಆಗಿರುತ್ತದೆ, ಬ್ಯಾಂಕಿನಲ್ಲಿ ಖಾತೆ ಹೊಂದಿದ ಮೇಲೆ ಈಕೆವೈಸಿ ಮಾಡಿಸುವುದು, ಆಧಾರ್ ಸೀಡಿಂಗ್, NPCI ಮ್ಯಾಪಿಂಗ್ ಕಡ್ಡಾಯ ಅನ್ನೋದನ್ನ ಸರ್ಕಾರ ಈಗಾಗಲೇ ತಿಳಿಸಿದೆ.
ಆದರೆ ಈ ಕೆಲಸಗಳು ಸರಿಯಾಗಿ ಆಗಿಲ್ಲ, ಇದರ ಜೊತೆಗೆ ಕೆಲವು ತಾಂತ್ರಿಕ ದೋಷಗಳಿಂದಾಗಿಯೂ ಕೂಡ ಸರ್ಕಾರ ಫಲಾನುಭವಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಾಗುತ್ತಿಲ್ಲ.
ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣಕ್ಕಾಗಿ ಕಾಯುತ್ತಿರುವ ಜನರಿಗೆ ಹೊಸ ಅಪ್ಡೇಟ್
ಇದರ ಜೊತೆಗೆ ಒಂದಕ್ಕಿಂತ ಹೆಚ್ಚು ಖಾತೆ ಹೊಂದಿದ್ದರೆ ಅಥವಾ ನೀವು ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಕಳೆದ ಕೆಲವು ವರ್ಷಗಳಿಂದ ಆ ಖಾತೆಯ ಮೂಲಕ ಯಾವುದೇ ಹಣಕಾಸಿನ ವಹಿವಾಟು ನಡೆಸದೇ ಇದ್ದರೆ, ಇಂತಹ ಕೆಲವು ಸಂದರ್ಭಗಳಲ್ಲಿ ನಿಮ್ಮ ಖಾತೆಗೆ ಹಣ ಜಮಾ ಆಗದೆ ಇರುವ ಸಾಧ್ಯತೆ ಇರುತ್ತದೆ.
ಯಶಸ್ವಿನಿ ಕಾರ್ಡ್ ಮಾಡಿಸಿಕೊಳ್ಳಿ 5 ಲಕ್ಷ ಬೆನಿಫಿಟ್ ಪಡೆಯಿರಿ! ಬಂಪರ್ ಯೋಜನೆ
ಅಂಗನವಾಡಿ ಕಾರ್ಯಕರ್ತೆಯರ ಸಹಾಯ ಪಡೆದುಕೊಳ್ಳಿ!
ಇನ್ನು ಸರ್ಕಾರದ ಇನ್ಸ್ಟ್ರಕ್ಷನ್ ಪ್ರಕಾರ ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಮನೆ ಮನೆಗೆ ಹೋಗಿ ಮಹಿಳೆಯರ ಖಾತೆಗೆ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಯಾರಿಗೆ ಹಣ ಬಂದಿಲ್ಲವೋ ಅಂತವರ ಹೆಸರನ್ನು ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅರ್ಜಿ ಸಲ್ಲಿಸಿ ಹಣ ಜಮಾ ಆಗದೆ ಇರುವ ಮಹಿಳೆಯರು ಹೆಚ್ಚು ತಲೆ ಕೆಡಿಸಿಕೊಳ್ಳದೆ ಮುಂದಿನ ಕಂತಿನ ಹಣವನ್ನು ನಿರೀಕ್ಷೆ ಮಾಡಬಹುದು.
ಗೃಹಲಕ್ಷ್ಮಿ ಹಣ ಬಂದಿಲ್ಲ ಅನ್ನೋ ಮಹಿಳೆಯರಿಗೆ ಸಿಕ್ತು ಪರಿಹಾರ! ಇಲ್ಲಿದೆ ಮಾಹಿತಿ
Government’s new strategy for Gruha Lakshmi Yojana money transfer