Welcome To Kannada News Today

ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆ, ಭಾರೀ ವಿರೋಧ, ಎಚ್ಚೆತ್ತ ಬಿಎಸ್‌ವೈ

Govt transfers Kalaburagi DC, rescinds hours later

🌐 Kannada News :

ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆ, ಭಾರೀ ವಿರೋಧ, ಎಚ್ಚೆತ್ತ ಬಿಎಸ್‌ವೈ

ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ವರ್ಗಾವಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ತಡೆ ಹಿಡಿದಿದ್ದಾರೆ. ವರ್ಗಾವಣೆ ಮಾಡಿದ ಕೇವಲ ಎರಡು ಗಂಟೆ ಒಳಗೆ ಕಲಬುರಗಿ ಜಿಲ್ಲಾಧಿಕಾರಿ ಶರತ್ ಅವರ ವರ್ಗಾವಣೆ ತಡೆಹಿಡಿಯಲಾಗಿದೆ, ಈ ಬಗ್ಗೆ ಮೊದಲುರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ನಂತರ ಏಕಾಏಕಿ ಯಡಿಯೂರಪ್ಪ ತಡೆಹಿಡಿದಿದ್ದಾರೆ.

ಖುದ್ದು ಯಡಿಯೂರಪ್ಪ ಅವರೇ ಜಿಲ್ಲಾಧಿಕಾರಿ ಶರತ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಅವರ ಕಾರ್ಯವೈಖರಿಯನ್ನು ಪ್ರಶಂಶಿಸಿದರು. ಅಲ್ಲದೇ ವರ್ಗಾವಣೆ ಮಾಡುವುದಿಲ್ಲ. ನೀವೇ ಮುಂದುವರಿಯಿರಿ ಎಂದು ಹೇಳಿದ್ದಾರೆ.

ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ, ಸುರಾಲ್ಕರ್ ವಿಕಾಸ್ ಕಿಶೋರ್ ಕಲಬುರಗಿ ಡಿಸಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಡಿಸಿ ವರ್ಗಾವಣೆ ಆದೇಶದ ಬೆನ್ನಲ್ಲೇ ವ್ಯಾಪಕ ಟೀಕೆಗಳು ವ್ಯಕ್ತವಾದವು. ಕಲಬುರಗಿಯಲ್ಲಿ ಈಗಾಗಲೇ ಕೊರೊನಾದಿಂದ ಐವರು ಸಾವನ್ನಪ್ಪಿದ್ರೆ, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಬೇಕಿತ್ತಾ ಎಂದು ಸಾರ್ವಜನಿಕರು ಪ್ರಶ್ನಿಸತೊಡಗಿದರು.

ಡಿ.ಸಿ ಶರತ್ ವರ್ಗಾವಣೆಗೆ ಅಧಿಕಾರಿ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಆ ಬಳಿಕ ಸಿಎಂ ಬಿಎಸ್​ವೈ ಅವರು ಡಿಸಿ ಶರತ್ ಜೊತೆ ದೂರವಾಣಿ ಮೂಲಕ ಸಂಪರ್ಕಿಸಿ, ಅವರ ಕಾರ್ಯವೈಖರಿಯನ್ನು ಪ್ರಶಂಸಿದರು. ಜೊತೆಗೆ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ, ಮುಂದುವರಿಸಿ, ಸದ್ಯ ನಿಮ್ಮನ್ನು ವರ್ಗಾವಣೆ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

state government withdrew the transfer orders of Kalaburagi Deputy Commissioner Sharat B

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.