ಒಟ್ಟಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆ! ಪರಿಶೀಲಿಸಿಕೊಳ್ಳಿ
ಎಲ್ಲಾ ಮಹಿಳೆಯರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಿದೆ, ತಕ್ಷಣ ಪರಿಶೀಲಿಸಿಕೊಳ್ಳಿ
ಕಳೆದ ಆರು ತಿಂಗಳಿನಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯಶಸ್ವಿಯಾಗಿ ನಡೆಯುತ್ತಿದೆ. ಆರಂಭದಲ್ಲಿ ಕೆಲವು ಗೊಂದಲಗಳು ಇದ್ದರೂ ಕೂಡ ಮಹಿಳೆಯರ ಖಾತೆಗೆ (Bank Account) ಪ್ರತಿ ತಿಂಗಳು ತಪ್ಪದೇ ಸರ್ಕಾರದಿಂದ ಹಣ ವರ್ಗಾವಣೆ ಆಗುತ್ತಿದೆ.
ಕೋಟ್ಯಾಂತರ ಮಹಿಳೆಯರು ಅರ್ಜಿ ಸಲ್ಲಿಸಿ ಇನ್ನೂ ಕೆಲವು ಮಹಿಳೆಯರಿಗೆ ಮಾತ್ರ ಹಣ ವರ್ಗಾವಣೆ ಆಗುತ್ತಿಲ್ಲ ಎಂಬುದನ್ನು ಹೊರತುಪಡಿಸಿದರೆ, ಹೆಚ್ಚಿನ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
ಉಚಿತ ವಿದ್ಯುತ್! ಗೃಹಜ್ಯೋತಿ ಯೋಜನೆಯಲ್ಲಿ ರಾತ್ರೋ-ರಾತ್ರಿ ಮಹತ್ವದ ಬದಲಾವಣೆ
ಮಹಿಳೆಯರನ್ನು ಆರ್ಥಿಕವಾಗಿ ಬೆಂಬಲಿಸುವುದಕ್ಕೆ (financial support) ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗಿರುವ ಗೃಹಲಕ್ಷ್ಮಿ ಯೋಜನೆ ಹಾಗೂ ಶಕ್ತಿ ಯೋಜನೆ ಬಹಳ ನೆರವಾಗಿದೆ ಎಂದು ಹೇಳಬಹುದು.
ಗೃಹಲಕ್ಷ್ಮಿ ಐದನೇ ಕಂತು ಬಿಡುಗಡೆ ಆಯ್ತು! (5th installment released)
ಮಹಿಳೆಯರಿಗೆ ಜನವರಿ ತಿಂಗಳು ಬಂಪರ್ ತಿಂಗಳು ಎಂದೇ ಹೇಳಬಹುದು. ಯಾಕಂದ್ರೆ ಗೃಹಲಕ್ಷ್ಮಿಯ ಎರಡು ಕಂತುಗಳು ಇದೇ ತಿಂಗಳಿನಲ್ಲಿ ಬಿಡುಗಡೆ ಆಗಿವೆ. 4 ಮತ್ತು 5ನೇ ಕಂತಿನ ಹಣ ಒಟ್ಟು ನಾಲ್ಕು ಸಾವಿರ ರೂಪಾಯಿಗಳು ಜನವರಿ ತಿಂಗಳಲ್ಲಿ ಮಹಿಳೆಯರ ಖಾತೆ ತಲುಪಿವೆ (Money Deposit).
ಫೆಬ್ರುವರಿ (February) ಮೊದಲ ವಾರದಲ್ಲಿ 6ನೇ ಕಂತಿನ ಹಣವು ಕೂಡ ಬಿಡುಗಡೆ ಆಗಲಿದೆ. ಹಣ ಪಡೆದುಕೊಳ್ಳಲು ಸಾಧ್ಯವಾಗದೇ ಇರುವ ಗೃಹಿಣಿಯರು ತಮ್ಮ ಖಾತೆಯಲ್ಲಿ ಇರುವ ಸಮಸ್ಯೆ ಪರಿಹರಿಸಿಕೊಂಡಿದ್ದರೆ, ಅಂತಹವರಿಗೆ ಕನಿಷ್ಠ 2 ಕಂತಿನ ಹಣವನ್ನಾದರೂ ಒಟ್ಟಿಗೆ ಪಡೆದುಕೊಳ್ಳಲು ಸಾಧ್ಯವಿದೆ.
ಇನ್ನು ಯಾರು ಹಣ ಪಡೆದುಕೊಳ್ಳಲು ಸಾಧ್ಯವಾಗಿಲ್ಲವೋ ಅಂತವರಿಗೆ ಯಾವುದೇ ರೀತಿಯ ವಂಚನೆ ಆಗುವುದಿಲ್ಲ. ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಮಹಿಳೆಯರ ಖಾತೆಗೂ ಹಣ ಬಿಡುಗಡೆ ಆಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar) ಭರವಸೆ ನೀಡಿದ್ದಾರೆ.
ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ; ಸಿಗುತ್ತೆ 5 ಲಕ್ಷ ರೂಪಾಯಿ ಬೆನಿಫಿಟ್!
ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ ಡಿಬಿಟಿ ಸ್ಟೇಟಸ್! (Check your DBT status)
ಗುಡ್ ನ್ಯೂಸ್ ಅಂದ್ರೆ ರಾಜ್ಯ ಸರ್ಕಾರದ ಹೊಸ ಮೊಬೈಲ್ ಅಪ್ಲಿಕೇಶನ್ (mobile application) ಮೂಲಕ ನೀವು ಈ ಎರಡು ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳುವುದು.
ಬಿಪಿಎಲ್ ರೇಷನ್ ಕಾರ್ಡುದಾರರಿಗೆ ಬಿಗ್ ಅಪ್ಡೇಟ್, ಲಕ್ಷಾಂತರ ರೇಷನ್ ಕಾರ್ಡುಗಳು ರದ್ದು!
*ನಿಮ್ಮ ಸ್ಮಾರ್ಟ್ ಫೋನ್ನಲ್ಲಿ ಪ್ಲೇ ಸ್ಟೋರ್ ಗೆ ಹೋಗಿ DBT Karnataka ಎನ್ನುವ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ.
*ಇದನ್ನು ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.
*ಏಕೆ ನಿಮ್ಮ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಗೆ ಒಂದು ಓಟಿಪಿ ಕಳುಹಿಸಲಾಗುತ್ತದೆ. ಅದನ್ನ ನಮೂದಿಸಿ. ಬಳಿಕ 4 ಅಂಕೆಯ mPIN ಹಾಕಿ, ಲಾಗಿನ್ ಆಗಿ. ಈ ಸಂಖ್ಯೆ ನಿಮ್ಮ ಮೊಬೈಲ್ ಅಪ್ಲಿಕೇಶನ್ ನ ಪಾಸ್ವರ್ಡ್ ಆಗಿರುತ್ತದೆ.
*ಲಾಗಿನ್ ಆದ ಬಳಿಕ ತೆರೆದುಕೊಳ್ಳುತ್ತದೆ. ಇಲ್ಲಿ ನಾಲ್ಕು ಆಯ್ಕೆಗಳನ್ನು ಕಾಣಬಹುದು. Payment, bank account details, profile and contact. ನಾಲ್ಕು ಆಯ್ಕೆಗಳಲ್ಲಿ ಬ್ಯಾಂಕ್ ಅಕೌಂಟ್ ಡೀಟೇಲ್ಸ್ ಎಂಬುದನ್ನು ಕ್ಲಿಕ್ ಮಾಡಿದರೆ ಯಾವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಎಂಬುದು ತೋರಿಸುತ್ತದೆ.
ಪ್ರೊಫೈಲ್ ಮೇಲೆ ಕ್ಲಿಕ್ ಮಾಡಿದ್ರೆ ನಿಮ್ಮ ಹೆಸರು ಮೊಬೈಲ್ ಸಂಖ್ಯೆ ಮೊದಲಾದ ಮಾಹಿತಿಗಳು ಲಭ್ಯವಾಗುತ್ತವೆ. ಪೇಮೆಂಟ್ ಆಯ್ಕೆ ಮೇಲೆ ಕ್ಲಿಕ್ ಮಾಡಿದ್ರೆ ಸರ್ಕಾರದಿಂದ ಡಿಬಿಟಿ ಆಗಿರುವ ಯಾವುದೇ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ರೆ ಆ ಸಂಪೂರ್ಣ ವಿವರ ಕಾಣಿಸುತ್ತದೆ. ಕಾಂಟಾಕ್ಟ್ ನಲ್ಲಿ ಮೊಬೈಲ್ ಸಂಖ್ಯೆ ಕಾಣಿಸುತ್ತದೆ.
ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ; ತರಬೇತಿ ಜೊತೆಗೆ ಸಾಲ ಸೌಲಭ್ಯ
ಹೀಗೆ ಈ ಒಂದು ಮೊಬೈಲ್ ಅಪ್ಲಿಕೇಶನ್ ಮೂಲಕ ನೀವು ಗೃಹಲಕ್ಷ್ಮಿ ಯೋಜನೆಯ ಹಾಗೂ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ (Bank Account) ಆಗಿರುವ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದು.
Gruha Lakshmi and Annabhagya Yojana money Released to this district