Karnataka NewsBangalore News

ಅಂತೂ ಬಿಡುಗಡೆ ಆಯ್ತು 4ನೇ ಕಂತಿನ ಗೃಹಲಕ್ಷ್ಮಿ ಹಣ; ನಿಮ್ಮ ಖಾತೆಗೆ ಬಂದಿದ್ಯಾ ಚೆಕ್ ಮಾಡಿ

ಪ್ರತಿಶತ 100ರಷ್ಟು ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಎರಡು ಸಾವಿರ ರೂಪಾಯಿಗಳನ್ನು ಹಾಕಲು ಸರ್ಕಾರ ಸಾಕಷ್ಟು ಪ್ರಯತ್ನ ಪಡುತ್ತಿದೆ..

ಆದರೆ ಕೆಲವು ತಾಂತ್ರಿಕ ದೋಷಗಳು (technical error) ಹಾಗೂ ಬ್ಯಾಂಕ್ ಖಾತೆಗೆ ಈಕೆ ವೈ ಸಿ (EKYC) ಮಾಡಿಸಿಕೊಳ್ಳುವುದರಲ್ಲಿ ಬಹಳ ಸಮಸ್ಯೆ ಉಂಟಾಗುತ್ತಿದ್ದು, ಅಂತವರ ಖಾತೆಗೆ (Bank Account) ಇದುವರೆಗೆ ಒಂದೇ ಒಂದು ಕಂತಿನ ಹಣವು ಕೂಡ ವರ್ಗಾವಣೆ ಆಗಿಲ್ಲ.

Gruha Lakshmi money received only 2,000, Update About Pending Money

ಹೊಸ ರೇಷನ್ ಕಾರ್ಡ್ ವಿತರಣೆ! ಹೊಸ ವರ್ಷಕ್ಕೆ ಗುಡ್ ನ್ಯೂಸ್ ನೀಡಿದ ಸರ್ಕಾರ

4ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ (4th installment released)

ಗೃಹಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಮೂರು ಕಂತುಗಳನ್ನು ಬಿಡುಗಡೆ ಮಾಡಲಾಗಿದ್ದು, ಇದಕ್ಕಾಗಿ ಸಾಕಷ್ಟು ಕೋಟ್ಯಾಂತರ ರೂಪಾಯಿಗಳನ್ನು ಸರ್ಕಾರ ಮೀಸಲಿಟ್ಟಿದೆ. ಸರ್ಕಾರದ ಇತರ ಗ್ಯಾರಂಟಿ ಯೋಜನೆಗಳಿಗೆ ಹೋಲಿಸಿದರೆ ಗೃಹಲಕ್ಷ್ಮಿ ಯೋಜನೆಗೆ ಅನುದಾನಗೊಂಡಿರುವ ಮೊತ್ತ ಬಹಳ ಜಾಸ್ತಿ ಎನ್ನಬಹುದು. ಮೊದಲ ಕಂತಿನಲ್ಲಿ 2,444 ಕೋಟಿ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿತ್ತು.

ಸರ್ಕಾರದಿಂದ ನಾಲ್ಕನೇ ಕಂತಿನ ಹಣ ಈ 15 ಜಿಲ್ಲೆಗಳಿಗೆ ಬಿಡುಗಡೆ!

ಸರ್ಕಾರ ನಾಲ್ಕನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳನ್ನು ಫಲಾನುಭವಿ ಮಹಿಳೆಯರ ಖಾತೆಗೆ ತಲುಪಿಸುವ (Money Deposit) ಕೆಲಸ ಮಾಡುತ್ತಿದೆ. ಬ್ಯಾಂಕ್ಗಳಿಗೆ ಸರ್ಕಾರದಿಂದ ಹಣ ಜಮಾ ಆಗಿದ್ದು, ಯಾರ ಬ್ಯಾಂಕ್ ಖಾತೆ ಸರಿಯಾಗಿ ಇದೆಯೋ ಅಂಥವರ ಖಾತೆಗೆ ತಪ್ಪದೆ ಹಣ ಜಮಾ ಆಗುತ್ತದೆ.

ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ ಆಗಿರುವ ಜಿಲ್ಲೆ (15 district) ಗಳನ್ನು ನೋಡುವುದಾದರೆ, ಚಿತ್ರದುರ್ಗ, ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾಸನ, ಬಿಜಾಪುರ, ಉತ್ತರ ಕನ್ನಡ, ದಾವಣಗೆರೆ, ಗದಗ, ರಾಯಚೂರು, ಕಲಬುರಗಿ, ಮೈಸೂರು ಜಿಲ್ಲೆಗಳಿಗೆ ನಾಲ್ಕನೇ ಕಂತಿನ ಹಣ ಬಿಡುಗಡೆ ಆಗಿದೆ.

ಇನ್ಮುಂದೆ ಇಂತಹವರಿಗೆ ಅನ್ನಭಾಗ್ಯ ಯೋಜನೆ ಹಣ ಸಿಗೋಲ್ಲ! ಸರ್ಕಾರದ ದೃಢ ನಿರ್ಧಾರ

ಇನ್ನು ಉಳಿದ ಜಿಲ್ಲೆಗಳಿಗೂ ಕೂಡ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆ ಬಿಡುಗಡೆ ಆಗಲಿದ್ದು, ಗೃಹಿಣಿಯರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ಆತಂಕ ಪಟ್ಟುಕೊಳ್ಳುವ ಅಗತ್ಯವಿಲ್ಲ.

ಡಿ ಬಿ ಡಿ ಸ್ಟೇಟಸ್ ಚೆಕ್ (DBT status check) ಮಾಡುವುದರ ಮೂಲಕ ನಿಮ್ಮ ಖಾತೆಗೆ ಹಣ ಜನ ಆಗಿದೆಯೋ ಇಲ್ಲವೋ ಎಂದು ತಿಳಿದುಕೊಳ್ಳಬಹುದು.

Gruha Lakshmi Yojanaಈ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ! (Download mobile application)

ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡಿರುವ ಡಿ ಬಿ ಟಿ ಕರ್ನಾಟಕ (DBT Karnataka) ಎನ್ನುವ ಮೊಬೈಲ್ ಅಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ. ನಂತರ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ (Aadhaar card number) ಯನ್ನು ನಮೂದಿಸಿ, ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ ಒಂದು ಓಟಿಪಿ (OTP) ಕಳುಹಿಸಲಾಗುತ್ತಿದೆ. ಅದನ್ನು ಕೂಡ ನಮೂದಿಸಬೇಕು. ಬಳಿಕ ನಿಮ್ಮದೇ ಆಗಿರುವ mPIN ಸಂಖ್ಯೆಯನ್ನು ಕ್ರಿಯೇಟ್ ಮಾಡಿ ಲಾಗಿನ್ ಆಗಬೇಕು.

ಇಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೋ ಎಂದು ತಿಳಿದುಕೊಳ್ಳಬಹುದು. ಅಷ್ಟೇ ಅಲ್ಲ ಕರ್ನಾಟಕ ಸರ್ಕಾರದಿಂದ ಬಿಡುಗಡೆ ಆಗುವ ಯಾವುದೇ ಯೋಜನೆಯ ಹಣ ನೇರವಾಗಿ ನಿಮ್ಮ ಖಾತೆಗೆ ತಲುಪಿದರೆ ಅದರ ವಿವರಗಳನ್ನು ಈ ಅಪ್ಲಿಕೇಶನ್ ಮೂಲಕವೇ ತಿಳಿದುಕೊಳ್ಳಬಹುದು.

ಗೃಹಲಕ್ಷ್ಮಿಯರಿಗೆ ಸಿಗಲಿದೆ ₹90,000! ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ

ಕೋಟ್ಯಾಂತರ ಫಲಾನುಭವಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳನ್ನು ಉಚಿತವಾಗಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಕ್ಯಾಂಪ್ (camp) ಕೂಡ ಏರ್ಪಡಿಸಿದ್ದ ಸರ್ಕಾರ, ಈ ಮೂಲಕ ಪ್ರತಿಯೊಬ್ಬ ಮಹಿಳೆಯರ ಖಾತೆಗೂ ಹಣ ವರ್ಗಾವಣೆ ಆಗಲು ಖಾತೆಗಳಲ್ಲಿ ಇರುವ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಹರಿಸಲು ಪ್ರಯತ್ನಿಸಿದೆ.

ಜನವರಿ 15ರ ಒಳಗೆ ಪ್ರತಿಯೊಬ್ಬ ಮಹಿಳೆಯರ ಖಾತೆಗೆ ಕೂಡ ನಾಲ್ಕನೇ ಕಂತಿನ ಹಣ ವರ್ಗಾವಣೆಯಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Gruha lakshmi Scheme 4th installment Released, Check your account Status

Our Whatsapp Channel is Live Now 👇

Whatsapp Channel

Related Stories