ಈ ತಿಂಗಳ 30ಕ್ಕೆ ಇಂತಹ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ 2,000 ಜಮೆ, ಪ್ರಮುಖ ಮಾಹಿತಿ ಹಂಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮಿಯರಿಗೆ ಸರ್ಕಾರದ ಕಡೆಯಿಂದ ಪ್ರತಿ ತಿಂಗಳು ₹2000 ರೂಪಾಯಿ ನೀಡುವ ಯೋಜನೆ ಇದಾಗಿದ್ದು, ಈ ಯೋಜನೆಗೆ ಆಗಸ್ಟ್ 30ರಂದು ಚಾಲನೆ ಸಿಗಲಿದೆ.
ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ನೀಡಿರುವ ಮಹತ್ವದ ಯೋಜನೆ ಗೃಹಲಕ್ಷ್ಮಿ ಯೋಜನೆ (Gruha Lakshmi Yojana) ಆಗಿದೆ. ಈ ಯೋಜನೆಯ ಮೂಲಕ ಮನೆಯನ್ನು ನಡೆಸುವ ಎಲ್ಲಾ ಗೃಹಲಕ್ಷ್ಮಿಯರಿಗೆ ಸರ್ಕಾರದ ಕಡೆಯಿಂದ ಪ್ರತಿ ತಿಂಗಳು ₹2000 ರೂಪಾಯಿ ನೀಡುವ ಯೋಜನೆ ಇದಾಗಿದ್ದು, ಈ ಯೋಜನೆಗೆ ಆಗಸ್ಟ್ 30ರಂದು ಚಾಲನೆ ಸಿಗಲಿದೆ.
ಮೈಸೂರಿನಲ್ಲಿ (Mysore) ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಬಗ್ಗೆ ಈಗ ರಾಜ್ಯದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಅವರು ಮುಖ್ಯವಾದ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದ 28 ಲಕ್ಷ ಜನರಿಗೆ ಸಿಗೋದಿಲ್ಲ ಅನ್ನಭಾಗ್ಯ ಯೋಜನೆಯ 2ನೇ ಕಂತಿನ ಹಣ! ನಿಯಮ ಬದಲಾವಣೆ
ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೆಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಾಜ್ಯದ ಸುಮಾರು 86% ಮಹಿಳಾ ಯಜಮಾನಿಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಾಧ್ಯಮದವರ ಎದುರು ಈ ಎಲ್ಲಾ ವಿಚಾರಗಳ ಬಗ್ಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, “ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ, ಬಸವಣ್ಣನವರು ಕಲಿಸಿರುವ ತತ್ವಗಳ ಅನುಸಾರ ನಡೆಯುತ್ತಿದೆ. ರಾಜ್ಯದಲ್ಲಿರುವ 1.28 ಕೋಟಿ ಮನೆಯ ಮಹಿಳಾ ಮುಖ್ಯಸ್ಥೆಯರ ಪೈಕಿ ಈಗಾಗಲೇ 1.10 ಕೋಟಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ರಿಜಿಸ್ಟರ್ ಮಾಡಿದ್ದಾರೆ.
ಆಗಸ್ಟ್ 30 ರಿಂದ ಮನೆಯ ಯಜಮಾನಿಯರ ಬ್ಯಾಂಕ್ ಖಾತೆಗೆ (Bank Account) ಹಣ ವರ್ಗಾವಣೆ ಆಗಲಿದೆ” ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಈ ಯೋಜನೆಯನ್ನು ಜಾರಿಗೆ ತಂದಿರುವುದು ಮಹಿಳೆಯ ಸಬಲೀಕರಣ ಆಗಬೇಕು ಎಂದು, ಹಾಗಾಗಿ ಎಲ್ಲಾ ಮಹಿಳೆಯರು ಈ ಯೋಜನೆಯ (Govt Scheme) ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಎಲ್ಲಾ ಮಹಿಳೆಯರಿಗೆ ತಿಳಿಸಿದ್ದಾರೆ.
ಮತ್ತೊಂದು ಗ್ಯಾರಂಟಿ ಯೋಜನೆ ಘೋಷಿಸಿದ ಕಾಂಗ್ರೆಸ್ ಸರ್ಕಾರ! ರಾಜ್ಯದ ಎಲ್ಲಾ ಜನತೆಗೆ ಸಿಗಲಿದೆ ಇನ್ನೊಂದು ಭಾಗ್ಯ
ಗೃಹಲಕ್ಷ್ಮಿ ಚಾಲನೆಯ ಬಗ್ಗೆ ಮಾತನಾಡಿ, “ಇಡೀ ರಾಜ್ಯದಲ್ಲಿ ಒಂದೇ ಸಮಯಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗುತ್ತದೆ, ಸಂವಾದಕ್ಕಾಗಿ ಆನ್ಲೈನ್ ಮೂಲಕ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಮೈಸೂರು, ಮಂಡ್ಯ, ಕೊಡಗು, ಹಾಸನ ಜಿಲ್ಲೆಗಳ ಗೃಹಲಕ್ಷ್ಮಿ ಫಲಾನುಭವಿಗಳು ಯೋಜನೆಯ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಇದಕ್ಕಾಗಿ 2000 ಬಸ್ ಗಳ ವ್ಯವಸ್ಥೆ ಮಾಡಲಾಗಿದೆ..” ಎಂದು ಹೇಳಿದ್ದಾರೆ.
ಫ್ರೀ ಕರೆಂಟ್ ಸ್ಕೀಮ್! ಗೃಹಜ್ಯೋತಿ ಯೋಜನೆಯಲ್ಲಿ ಧಿಡೀರ್ ಹೊಸ ಬದಲಾವಣೆ ತಂದ ರಾಜ್ಯ ಸರ್ಕಾರ
“ಈ ಕಾರ್ಯಕ್ರಮ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸೇರಿದ ಕಾರ್ಯಕ್ರಮ ಅಲ್ಲ, ಈ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದವರು ಪಾಲ್ಗೊಳ್ಳಬಹುದು. ಕಾರ್ಯಕ್ರಮಕ್ಕೆ ಬರುವವರಿಗಾಗಿ 1 ಲಕ್ಷ ಚೇರ್ ಗಳ ವ್ಯವಸ್ಥೆ ಮಾಡಲಾಗುತ್ತದೆ. 140 ಅಡಿ ಸ್ಕ್ರೀನ್ ವ್ಯವಸ್ಥೆಯನ್ನು ಕೂಡ ಮಾಡಲಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾದ ಎಲ್ಲಾ ಮಹಿಳೆಯರು ‘ನಾ ಗೃಹಲಕ್ಷ್ಮಿ, ನಾ ನಾಯಕಿ’ ಎಂದು ರಂಗೋಲಿಯಿಂದ ಬರೆಯುತ್ತಾರೆ. ಎಲ್ಲಾ ಪಂಚಾಯಿತಿಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ..” ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
Gruha Lakshmi Yojana 2000 Money Credit On August 30 Said Minister Lakshmi Hebbalkar
Follow us On
Google News |