ಇನ್ಮುಂದೆ ಇಂಥವರಿಗೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಆಗೋಲ್ಲ! ಇಲ್ಲಿದೆ ಕಾರಣ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ(Gruha lakshmi Yojana) ಗೆ ಅತಿ ಹೆಚ್ಚಿನ ಅನುದಾನ ನೀಡಲಾಗಿದೆ, ಇಲ್ಲಿಯವರೆಗೆ ಸುಮಾರು 3000 ಕೋಟಿ ರೂಪಾಯಿಗಳನ್ನು ಗೃಹಲಕ್ಷ್ಮಿ ಯೋಜನೆಗಾಗಿ ಸರ್ಕಾರ ಮೀಸಲಿಟ್ಟಿದೆ ಎನ್ನಬಹುದು.
ಕೊಟ್ಯಂತರ ಮಹಿಳೆಯರು ಅರ್ಜಿ ಸಲ್ಲಿಸಿದ್ದು ಸಾಕಷ್ಟು ಜನರು ಇಲ್ಲಿಯವರೆಗೆ 8 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ಆದಾಗ್ಯೂ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರ ಖಾತೆಗೆ (Bank Account) ಹಣ ಬಂದಿಲ್ಲ.
ಕೆಲವರಿಗೆ ಮೊದಲ ಎರಡು ಕಂತಿನ ಹಣ ಮಾತ್ರ ಬಿಡುಗಡೆ ಆಗಿದೆ. ನಂತರದ ದಿನಗಳಲ್ಲಿ ಯಾವುದೇ ಕಂತಿನ ಹಣ ಖಾತೆಗೆ ಜಮಾ (Money Deposit) ಆಗಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಸರ್ಕಾರವು ತಿಳಿಸಿದ್ದು, ಖಾತೆಯಲ್ಲಿ ಇರುವ ಸಮಸ್ಯೆ ಹಾಗೂ ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಬರುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೊಸ ರೇಷನ್ ಕಾರ್ಡ್ ಗ್ರಾಮೀಣ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದ್ಯಾ ನೋಡಿಕೊಳ್ಳಿ
80,000 ಅರ್ಜಿಗಳ ತಿರಸ್ಕಾರ!
ಹಿಂದಿನ ಅರ್ಜಿಗಳು ಹಾಗೂ ಹೊಸದಾಗಿ ಸಲ್ಲಿಕೆ ಆಗಿರುವ ಅರ್ಜಿಗಳನ್ನು ನೋಡಿದರೆ ಸುಮಾರು 80,000 ದಷ್ಟು ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ ಎನ್ನಲಾಗಿದೆ. ಇದಕ್ಕೆ ಮೂಲ ಕಾರಣ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಡತನ ರೇಖೆಗಿಂತ ಕೆಳಗಿರುವವರು ಅಥವಾ ಸರ್ಕಾರಿ ನೌಕರಿಯಲ್ಲಿ ಇಲ್ಲದೆ ಇರುವವರು ಪಡೆದುಕೊಳ್ಳಲು ಅವಕಾಶ ಇತ್ತು.
ಆದರೆ ಸಾಕಷ್ಟು ಜನ ಆದಾಯ ತೆರಿಗೆ ಪಾವತಿ (income tax payment) ಮಾಡುವವರು ಹಾಗೂ ಸರ್ಕಾರಿ ನೌಕರಿಯಲ್ಲಿ ಇರುವ ಮಹಿಳೆಯರು ಕೂಡ ಅರ್ಜಿ ಸಲ್ಲಿಸಿದ್ದು ಅಂತವರ ಅರ್ಜಿಯನ್ನು ಸರ್ಕಾರ ತಿರಸ್ಕರಿಸಿದೆ.
ಈ ಪಟ್ಟಿಯಲ್ಲಿ ಹೆಸರು ಇಲ್ಲದೇ ಇದ್ರೆ ಅಂಥವರಿಗೆ ಸಿಗಲ್ಲ ಅನ್ನಭಾಗ್ಯ ಯೋಜನೆ ಹಣ!
ಈಗಾಗಲೇ ಅನರ್ಹರು ಕೂಡ ಬಿಪಿಎಲ್ ಕಾರ್ಡ್ (BPL Ration card) ಹೊಂದಿರುವುದು ಸರ್ಕಾರದ ಗಮನಕ್ಕೆ ಬಂದಿದೆ, ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆ, ಮುತುವರ್ಜಿಯಿಂದ ರೇಷನ್ ಕಾರ್ಡ್ ಪರಿಶೀಲನೆ ನಡೆಸುತ್ತಿದ್ದು, ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಅನ್ನು ರದ್ದುಪಡಿಸಲಾಗಿದೆ. ಹೀಗಾಗಿ ಯಾವ ಮಹಿಳೆಯರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅಂತವರ ರೇಷನ್ ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮಿ ಯೋಜನೆಯ ಹಣವು ಬರುವುದಿಲ್ಲ.
ಗೃಹಜ್ಯೋತಿ ಉಚಿತ ವಿದ್ಯುತ್ 200 ಯೂನಿಟ್ ದಾಟದಂತೆ ಮಾಡಿಕೊಳ್ಳಿ! ಇಲ್ಲಿದೆ ಟ್ರಿಕ್ಸ್
ಒಂದೇ ತಿಂಗಳಿನಲ್ಲಿ ಎರಡು ಕಂತಿನ ಹಣ!
ಏಪ್ರಿಲ್ ತಿಂಗಳಿನಲ್ಲಿ ಎಂಟನೇ ಕಂತಿನ ಹಣ ಬಿಡುಗಡೆ ಆಗಿದೆ ಆದರೆ ಸಾಕಷ್ಟು ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 9ನೇ ತಿಂಗಳ ಹಣವು ಕೂಡ ಸಾಕಷ್ಟು ಮಹಿಳೆಯರ ಖಾತೆಗೆ ತಲುಪಿದೆ, ಅಂದರೆ ಒಂದು ತಿಂಗಳಿನಲ್ಲಿ 4000ಗಳನ್ನು ಮಹಿಳೆಯರು ಪಡೆದುಕೊಳ್ಳಲು ಸಾಧ್ಯವಾಗಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗಿದ್ಯೋ ಇಲ್ಲವೋ ಎನ್ನುವುದನ್ನು DBT Karnataka ಮೊಬೈಲ್ ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಬಹುದು. ಅಥವಾ ಮಾಹಿತಿ ಕಣಜ ವೆಬ್ಸೈಟ್ ಗೆ ಹೋದ್ರೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ.
ಗೃಹಲಕ್ಷ್ಮಿ ಹಣ ಒಂದೇ ತಿಂಗಳಿನಲ್ಲಿ 4 ಸಾವಿರ ಜಮಾ; ನಿಮ್ಮ ಖಾತೆಗೂ ಬಂದಿದ್ಯ ಚೆಕ್ ಮಾಡಿ!
Gruha Lakshmi Yojana money will not be released to such people from now on
Our Whatsapp Channel is Live Now 👇