ಗೃಹಲಕ್ಷ್ಮಿ ಯೋಜನೆ (Gruha lakshmi scheme) ಅಡಿಯಲ್ಲಿ ಕೋಟ್ಯಾಂತರ ಮಹಿಳೆಯರು ಲಾಭ ಪಡೆದುಕೊಳ್ಳುತ್ತಿರುವುದು ನಿಜ. ಆದರೆ ಇದುವರೆಗೆ ಸಾಕಷ್ಟು ಮಹಿಳೆಯರು ತಮ್ಮ ಖಾತೆಗೆ (Bank Account) ಹಣ ಜಮಾ ಆಗದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಕೂಡ ಅಷ್ಟೇ ನಿಜ.
ಈ ರೀತಿ ಮಹಿಳೆಯರಿಗೆ ಹಣ ವರ್ಗಾವಣೆ (DBT) ಮಾಡಲು ಸರ್ಕಾರ ಬೇರೆ ಬೇರೆ ರೀತಿಯ ಉಪಕ್ರಮಗಳನ್ನು ಕೂಡ ಕೈಗೊಂಡಿದೆ. ಸರ್ಕಾರದ ಕೆಲವು ನಿಯಮಗಳನ್ನು ಸರಿಯಾಗಿ ಅನುಸರಿಸಿದರೆ ಪೆಂಡಿಂಗ್ (pending amount) ಇರುವ ಹಣ ಕೂಡ ನಿಮ್ಮ ಖಾತೆಗೆ ಬರುತ್ತದೆ ಎನ್ನುವುದಕ್ಕೆ ಹುಬ್ಬಳ್ಳಿಯ ಮಹಿಳೆ ಒಬ್ಬರ ಖಾತೆಗೆ ಪೆಂಡಿಂಗ್ ಹಣ ಜಮಾ ಆಗಿರುವುದು ಇದಕ್ಕೆ ಸಾಕ್ಷಿಯಾಗಿದೆ.
ಇಂತಹವರ ರೇಷನ್ ಕಾರ್ಡ್ ಹೊಸ ಅರ್ಜಿಗಳು ರಿಜೆಕ್ಟ್! ರದ್ದಾದವರ ಪಟ್ಟಿ ಬಿಡುಗಡೆ
ಈವರೆಗೆ ಸರಿಯಾಗಿ ಬ್ಯಾಂಕ್ ಖಾತೆಗೆ EKYC ಹಾಗೂ NPCI mapping ಆಗದೆ ಇರುವ ಹುಬ್ಬಳ್ಳಿಯ ಮಹಿಳೆ ಒಬ್ಬರ ಖಾತೆಗೆ ಈ ಎಲ್ಲಾ ಕೆಲಸವನ್ನು ಡಿಸೆಂಬರ್ ತಿಂಗಳಿನಲ್ಲಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಜನವರಿ ತಿಂಗಳಿನಲ್ಲಿ 23 ರಿಂದ 25 ನೇ ತಾರೀಖಿನ ಅವಧಿಗೆ 10,000ಗಳನ್ನು ಅಂದರೆ 5 ಕಂತಿನ ಹಣವನ್ನು ಜಮಾ ಮಾಡಲಾಗಿದೆ.
ಈ ಕೆಲಸ ತಕ್ಷಣ ಮಾಡಿಸಿ!
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ (Aadhaar Card link) ಆಗಿರುವುದು ಮಾತ್ರವಲ್ಲದೆ ರೇಷನ್ ಕಾರ್ಡ್ ನಲ್ಲಿಯೂ ಕೂಡ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಮನೆಯಲ್ಲಿ ಯಜಮಾನರು ಮಾತ್ರವಲ್ಲದೆ ಮನೆಯ ಕುಟುಂಬದ ಎಲ್ಲಾ ಸದಸ್ಯರಿಗೂ ಕೂಡ ಕೆವೈಸಿ ಮಾಡಿಸಿಕೊಳ್ಳಬೇಕು. ಇದರ ಜೊತೆಗೆ ಎನ್ ಪಿ ಸಿ ಐ ಮ್ಯಾಪಿಂಗ್ ಕೂಡ ಕಡ್ಡಾಯವಾಗಿದೆ.
ನಿಮ್ಮ ಊರಲ್ಲೇ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಿ
ನಿಮಗೆ ಈಗಾಗಲೇ ಐದು ಕಂತಿನ ಹಣ ಜಮಾ ಆಗಿದ್ದರೆ ನೀವು NPCI mapping ಮಾಡಿಕೊಳ್ಳುವ ಅಗತ್ಯ ಇಲ್ಲ. ಅದು ಸಹಜವಾಗಿ ಬ್ಯಾಂಕ್ ನಲ್ಲಿ ಲಿಂಕ್ ಆಗಿರುತ್ತದೆ. ಒಂದು ವೇಳೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಇಲ್ಲಿಯವರೆಗಿನ ಎಲ್ಲಾ ಕಂತಿನ ಹಣ ಜಮಾ ಆಗದೆ ಇದ್ದರೆ ಅದರಲ್ಲೂ ಐದನೇ ಕಂತಿನ ಹಣ ಬಾರದೆ ಇದ್ದರೆ ತಕ್ಷಣ ಬ್ಯಾಂಕ್ ಗೆ ಹೋಗಿ ತಮ್ಮ ಖಾತೆಗೆ NPCI ಮ್ಯಾಪಿಂಗ್ ಆಗಬೇಕು.
ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯನ್ನು ಒದಗಿಸಿದರೆ ನಿಮ್ಮ ಖಾತೆಯ ವಿವರಗಳನ್ನು ಪಡೆದು NPCI mapping ಅನ್ನು ಬ್ಯಾಂಕ್ ಸಿಬ್ಬಂದಿಗಳು ಮಾಡಿಕೊಡುತ್ತಾರೆ.
ಮಹಿಳೆಯರಿಗೆ ಮತ್ತೊಂದು ಯೋಜನೆ ಜಾರಿಗೆ ತಂದ ಸರ್ಕಾರ; ಸಿಗಲಿದೆ ಇನ್ನಷ್ಟು ಬೆನಿಫಿಟ್
ಡಿ ಬಿ ಟಿ ಸ್ಟೇಟಸ್ ಚೆಕ್ ಮಾಡಿ!
ಇದಕ್ಕಾಗಿ ನೀವು ಮೊದಲು ನಿಮ್ಮ ರೇಷನ್ ಕಾರ್ಡ್ ಆಕ್ಟಿವ್ ಆಗಿದ್ಯೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ಮಾಡುವುದು ಕೂಡ ಅಷ್ಟೇ ಮುಖ್ಯ. ಯಾಕಂದ್ರೆ ಇಂದು ಸಾಕಷ್ಟು ಅನರ್ಹರ ರೇಷನ್ ಕಾರ್ಡ್ ಅನ್ನು ಸರ್ಕಾರ ರದ್ದುಪಡಿ ಮಾಡಿದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಕೂಡ ಒಂದು ವೇಳೆ ರದ್ದುಪಡಿಯಾಗಿದ್ದರೆ ಆ ಕಾರಣಕ್ಕೆ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಾರದೆ ಇರಬಹುದು.
ಇದಕ್ಕಾಗಿ ನೀವು ರಾಜ್ಯ ಸರ್ಕಾರದ ಮಾಹಿತಿ ಕಣಜ ಎನ್ನುವ ಆದಿಕೃತ ವೆಬ್ಸೈಟ್ಗೆ ಹೋಗಿ. ಮುಖಪುಟದಲ್ಲಿ ಕಾಣುವ ಗೃಹ ಲಕ್ಷ್ಮಿ ಸ್ಟೇಟಸ್ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ. ಈಗ ಗೋ ಎಂದು ಕ್ಲಿಕ್ ಮಾಡಿದರೆ, ನಿಮ್ಮ ಗೃಹಲಕ್ಷ್ಮಿ ಖಾತೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ.
ಗೃಹಲಕ್ಷ್ಮಿ ಯೋಜನೆ 6ನೇ ಮತ್ತು 7ನೇ ಕಂತಿನ ಹಣ ಪಡೆಯೋಕೆ ಈ ಕೆಲಸ ಕಡ್ಡಾಯ!
ಇನ್ನು ಎರಡನೆಯದಾಗಿ ಮಹಿಳೆಯರು ಗೃಹ ಲಕ್ಷ್ಮಿ ಸ್ಟೇಟಸ್ ತಿಳಿದುಕೊಳ್ಳಲು, ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ DBT Karnataka ಎನ್ನುವ ಮೊಬೈಲ್ ಅಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು, ಡಿಬಿಟಿ ಸ್ಟೇಟಸ್ ತಿಳಿಯಬಹುದು.
Gruha Lakshmi Yojana Pending Money Deposit Together, Check your Bank account
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.