ಗೃಹಲಕ್ಷ್ಮಿ ಹಣಕ್ಕೆ ಹೊಸ ಅರ್ಜಿ, ಹೊಸ ಷರತ್ತುಗಳು! ಈ ದಾಖಲೆಗಳು ಇಲ್ಲದವರಿಗೆ ಹಣ ಇಲ್ಲ
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆಗೆ ಹೊಸ ಅರ್ಜಿ ಸಿದ್ಧವಾಗಿದ್ದು, ಬ್ಯಾಂಕ್ ಖಾತೆ, ಆಧಾರ್ ಜೋಡಣೆ ಮತ್ತು ಪಡಿತರ ಚೀಟಿ ವಿವರಗಳಿಗೆ ಸಂಬಂಧಿಸಿದ ಹಲವು ನಿಯಮಗಳನ್ನು ಸೇರ್ಪಡೆ ಮಾಡಲಾಗಿದೆ.

- ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ ಜಾರಿ
- ಬ್ಯಾಂಕ್ ಖಾತೆ ವಿವರ ನೀಡುವುದು ಕಡ್ಡಾಯ
- ಆಧಾರ್, ಪಡಿತರ ಚೀಟಿ ಮಾಹಿತಿ ಅಗತ್ಯ
ಬೆಂಗಳೂರು (Bengaluru): ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ (Gruha Lakshmi Yojane) ಫಲಾನುಭವಿಗಳ ಮರುಪರಿಶೀಲನೆಗೆ ಸಂಬಂಧಿಸಿದಂತೆ ಹೊಸ ಅರ್ಜಿಯಲ್ಲಿ ಹಲವು ಅಂಶಗಳನ್ನು ಸೇರಿಸಲಾಗಿದೆ.
ಬ್ಯಾಂಕ್ ಖಾತೆ (Bank Account), ಆಧಾರ್ (Adhaar) ಮತ್ತು ಪಡಿತರ ಚೀಟಿಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಲು ಈ ಅರ್ಜಿಯಲ್ಲಿ ನಿರ್ದಿಷ್ಟ ಪ್ರಶ್ನೆಗಳನ್ನು ರೂಪಿಸಲಾಗಿದೆ.
ಹೊಸ ಅರ್ಜಿಯ ಪ್ರಕಾರ, ಫಲಾನುಭವಿಗಳು ಕರ್ನಾಟಕದ ವ್ಯಾಪ್ತಿಯಲ್ಲಿರುವ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿರಬೇಕು. ದೇಶದ ಯಾವುದೇ ಬ್ಯಾಂಕ್ನಲ್ಲಿ ಖಾತೆ ಇದ್ದರೂ, ಅದರ ಶಾಖೆ ಕರ್ನಾಟಕದಲ್ಲಿರಬೇಕು ಎಂಬ ಷರತ್ತು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ರೈತ ಮಹಿಳೆಯರಿಗೆ ಉಚಿತ ನಾಟಿ ಕೋಳಿಮರಿ ವಿತರಣೆ; ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಿ
ಅಲ್ಲದೆ, ಸಾಲಕ್ಕೆ (Loan Account) ಸಂಬಂಧಿಸಿದ ಖಾತೆಯ ಬದಲು ಬೇರೆ ಖಾತೆಯ ವಿವರ ನೀಡಬೇಕು ಹಾಗೂ ಜಂಟಿ ಬ್ಯಾಂಕ್ ಖಾತೆಯನ್ನು ಒದಗಿಸಬಾರದು ಎಂದು ಸೂಚಿಸಲಾಗಿದೆ.
ಪಡಿತರ ಚೀಟಿ (Ration Card) ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಆಧಾರ್ (Aadhaar) ಸಂಖ್ಯೆಯನ್ನು ಮೊಬೈಲ್ ಸಂಖ್ಯೆಯೊಂದಿಗೆ ಜೋಡಿಸದ ಫಲಾನುಭವಿಗಳು ಅದನ್ನು ಜೋಡಣೆ ಮಾಡಿಸಿಕೊಳ್ಳಬೇಕೆಂಬ ಅಂಶವೂ ಅರ್ಜಿಯಲ್ಲಿದೆ.
ಇದನ್ನೂ ಓದಿ: ಕರ್ನಾಟಕ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಭಾಗ್ಯ; ಅ.31ರೊಳಗೆ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನಾ ಅರ್ಜಿಯ ಅಂತಿಮ ಪ್ರತಿ ಸಿದ್ಧವಾಗಿದ್ದು, ಸಮೀಕ್ಷೆ ಆರಂಭಿಸುವ ಕುರಿತು ಅಧಿಕೃತ ಸೂಚನೆಗಾಗಿ ಕಾಯಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಮುಗಿದ ಬಳಿಕ ಸಮೀಕ್ಷೆ ಆರಂಭವಾಗುವ ಸಾಧ್ಯತೆಯಿದೆ.
ಆ್ಯಪ್ ಮೂಲಕ ಸಮೀಕ್ಷೆ ನಡೆಸಿದರೂ, ಆಫ್ಲೈನ್ನಲ್ಲಿಯೂ ಮರುಪರಿಶೀಲನಾ ಅರ್ಜಿಯನ್ನು ಭರ್ತಿ ಮಾಡಬೇಕಾಗುತ್ತದೆ ಎಂಬ ಮಾಹಿತಿ ಇದೆ.
ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಆದರೆ, ಸಮೀಕ್ಷೆ ಆರಂಭದ ದಿನಾಂಕ ಮತ್ತು ಹೊಸ ನಿಯಮಗಳ ಜಾರಿಯ ಕುರಿತು ಅಧಿಕೃತ ಘೋಷಣೆ ಹೊರಬಂದ ಬಳಿಕವೇ ಸ್ಪಷ್ಟತೆ ಸಿಗಲಿದೆ. ಆದ್ದರಿಂದ ಫಲಾನುಭವಿಗಳು ಅಂತಿಮ ಸೂಚನೆಗಳನ್ನು ಗಮನಿಸುವುದು ಸೂಕ್ತ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.
ಗೃಹಲಕ್ಷ್ಮಿ ಯೋಜನೆಯ ಹೊಸ ಲಿಸ್ಟ್ ಸಿದ್ದ; ಈ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸಿಗುತ್ತೆ ಹಣ!
Read the story
ಕರ್ನಾಟಕ ಮಹಿಳೆಯರಿಗೆ ₹2 ಲಕ್ಷದವರೆಗೆ ಸಾಲ ಸೌಲಭ್ಯ; ಸ್ವಂತ ಉದ್ಯಮ ಆರಂಭಿಸಲು ಆರ್ಥಿಕ ನೆರವು
Read the story
10 ಲಕ್ಷ ಮಂದಿ ರೈತರಿಗೆ ಪಿಎಂ ಕಿಸಾನ್ ಯೋಜನೆ ಹಣ ಸ್ಥಗಿತ! ಕೇಂದ್ರದ ಶಾಕಿಂಗ್ ನಿರ್ಧಾರ
Read the story
ಕರ್ನಾಟಕ SSLC ವಿದ್ಯಾರ್ಥಿಗಳು ಹಾಗೂ ಶಾಲೆಗಳಿಗೆ KSEAB ಮಹತ್ವದ ಸೂಚನೆ! ತಪ್ಪದೇ ಗಮನಿಸಿ
Read the story
ಕರ್ನಾಟಕ ರಾಜ್ಯದಲ್ಲಿ ಅಕ್ಕಿ ಬೆಲೆ ಗಗನಕ್ಕೆ; ಕೆಜಿಗೆ ₹20 ರೂಪಾಯಿ ಏರಿಕೆ! 4 ತಿಂಗಳಲ್ಲಿ ಶೇ 30ರಷ್ಟು ಹೆಚ್ಚಳ
Read the story





