ಹಾಸನದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ, ಹಲವರಿಗೆ ಗಾಯ
ಹಾಸನ ಜಿಲ್ಲೆಯ ಬಾಳ್ಳುಪೇಟೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಫಿ ತೋಟದ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ, ಹಲವರು ಗಾಯಗೊಂಡಿದ್ದಾರೆ.
- ಕಾಫಿ ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕರಿಗೆ ಅಪಘಾತ
- ತಮಿಳುನಾಡಿನಿಂದ ಮಡಿಕೇರಿಗೆ ತೆರಳುತ್ತಿದ್ದ ಟಾಟಾ ವಿಂಗರ್ ಪಲ್ಟಿ
- ನಾಲ್ವರಿಗೆ ಗಂಭೀರ ಗಾಯ, ಸ್ಥಳದಲ್ಲಿ ಪೊಲೀಸರು ಪರಿಶೀಲನೆ
ಹಾಸನ ಜಿಲ್ಲೆಯ ಬಾಳ್ಳುಪೇಟೆ ಸಮೀಪದ ನಿಡನೂರು ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ಈ ದುರಂತ ಸಂಭವಿಸಿದೆ. ಟಾಟಾ ವಿಂಗರ್ ವಾಹನವು ತಮಿಳುನಾಡಿನ ಸೇಲಂನಿಂದ ಮಡಿಕೇರಿಯ ಶನಿವಾರಸಂತೆಯ ಕಾಫಿ ತೋಟಕ್ಕೆ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಪ್ರಯಾಣಿಕರು ಮತ್ತು ಗಾಯಾಳುಗಳು:
ವಾಹನದಲ್ಲಿ ಒಟ್ಟು 14 ಮಂದಿ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ಹಲವರು ಗಾಯಗೊಂಡಿದ್ದಾರೆ. ಈ ಪಲ್ಟಿಯ ಪರಿಣಾಮವಾಗಿ ಕೂಲಿ ಕಾರ್ಮಿಕರ ಬಟ್ಟೆ, ಆಹಾರ ಸಾಮಗ್ರಿಗಳು ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಪರಿಶೀಲನೆ:
ಅಪಘಾತದ ಮಾಹಿತಿ ದೊರಕುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯಲ್ಲಿ ಅತೀ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಅಂದಾಜಿಸಲಾಗಿದೆ. ಸ್ಥಳೀಯರು ಕೂಡ ಗಾಯಾಳುಗಳಿಗೆ ಸಹಾಯಕ್ಕೆ ಧಾವಿಸಿದ್ದು, ಅಗತ್ಯ ಚಿಕಿತ್ಸೆ ನೀಡಲಾಗಿದೆ.
Hassan Road Accident Injures Coffee Estate Workers
Our Whatsapp Channel is Live Now 👇