ಮೈಸೂರು, ಕೋಲಾರ ಸೇರಿದಂತೆ ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆಯ ಪರಿಣಾಮ ಅವಾಂತರಗಳು ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆಯ ಭಾಗವಾಗಿ ನಾಳೆ (ಡಿಸೆಂಬರ್ 3) ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
- ಡಿಸೆಂಬರ್ 3 ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ.
- ಭಾರೀ ಮಳೆ; ಕೊಡಗು ಜಿಲ್ಲೆಗೆ ರೆಡ್ ಅಲರ್ಟ್.
- ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಎಚ್ಚರಿಕೆ.
ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ (Heavy Rain) ಪರಿಣಾಮ ಅವಾಂತರಗಳು ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆಯ ಭಾಗವಾಗಿ ನಾಳೆ (ಡಿಸೆಂಬರ್ 3) ಶಾಲೆ-ಕಾಲೇಜುಗಳಿಗೆ ರಜೆ (Schools and Colleges Declared Holiday) ಘೋಷಿಸಲಾಗಿದೆ. ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ನಾಳೆಯೂ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಕೊಡಗು ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯನ್ನು ಎಚ್ಚರಿಸಿದೆ. ಜಿಲ್ಲಾಧಿಕಾರಿಯು ಇಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಕೂಡ ನಾಳೆ (ಡಿ.3) ರಜೆ ನೀಡಲಾಗಿದೆ. ಈ ರಜಾದಿನದ ಮತ್ತೊಂದು ದಿನ ತರಗತಿಗಳನ್ನು ನಡೆಸಲು ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (2ನೇ ಪಿಯುಸಿ ತನಕ) ನಾಳೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಇದೆ ರೀತಿಯಾಗಿ, ಚಿಕ್ಕಮಗಳೂರು, ಚಾಮರಾಜನಗರ, ಮತ್ತು ಉಡುಪಿ ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಸಹ ರಜೆ ಘೋಷಿಸಲಾಗಿದೆ.
Heavy Rainfall Alert, Schools and Colleges Declared Holiday in Several Districts of Karnataka