ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್! ಕೋರ್ಟ್‌ ಆದೇಶ ಏನು ಗೊತ್ತಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಪುರಸ್ಕರಿಸಿದೆ.

ಬೆಂಗಳೂರು (Bengaluru): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಕೊಂಚ ರಿಲೀಫ್ ಸಿಕ್ಕಿದೆ. ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ದರ್ಶನ್‌ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ಕುರಿತು ಮಂಗಳವಾರ (ಸೆ.8) ಆದೇಶ ಹೊರಬಿದ್ದಿದೆ.

ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ಭಾಗಶಃ ಪುರಸ್ಕರಿಸಿದೆ. ಇದರೊಂದಿಗೆ ಬೆಂಗಳೂರಿನ 59ನೇ ಸಿಸಿಹೆಚ್‌ ನ್ಯಾಯಾಲಯ ನೀಡಿದ್ದ ಹಿಂದಿನ ಆದೇಶವನ್ನು ರದ್ದುಪಡಿಸಲಾಗಿದೆ.

ಪ್ರದೋಷ್‌ ಅವರು ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ತಿಳಿಸಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬೆಂಗಳೂರಿನ 59ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಆಗಸ್ಟ್‌ 25ರಂದು ಅಂಗೀಕರಿಸಿತ್ತು.

ಪ್ರದೋಷ್‌ ಮಾಫಿ ಸಾಕ್ಷಿಯಾಗುವ ನಿರ್ಧಾರವು ಪ್ರಕರಣದಲ್ಲಿ ದರ್ಶನ್‌ಗೆ ಕಾನೂನಾತ್ಮಕವಾಗಿ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಅವರ ಪರ ವಕೀಲರು ಸೆಷನ್ಸ್‌ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಇದೀಗ ಹೈಕೋರ್ಟ್‌ 59ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಒಂದು ವಾರದೊಳಗೆ ಮರುಆದೇಶ ಹೊರಡಿಸುವಂತೆ ಸೂಚಿಸಿದೆ. ಆದರೆ ಪ್ರಕರಣವನ್ನು ಸಂಪೂರ್ಣವಾಗಿ ಹೊಸದಾಗಿ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ (Justice M. Nagaprasanna) ಸ್ಪಷ್ಟಪಡಿಸಿದ್ದಾರೆ. ಹೊಸದಾಗಿ ಆದೇಶ ನೀಡಿದರೆ ಸಾಕು ಎಂದು ನ್ಯಾಯಾಲಯ ತಿಳಿಸಿದೆ.

ಈ ಆದೇಶದಿಂದ ಪ್ರದೋಷ್‌ ಅವರ ಮಾಫಿ ಸಾಕ್ಷಿ ಪ್ರಕ್ರಿಯೆ ಕುರಿತು ಮುಂದಿನ ಕಾನೂನು ಕ್ರಮಗಳ ಮೇಲೆ ಗಮನ ನೆಟ್ಟಿದೆ. ಪ್ರಕರಣದಲ್ಲಿ ನ್ಯಾಯಾಲಯದ ಮುಂದಿನ ಆದೇಶ ಇದೀಗ ಕುತೂಹಲ ಮೂಡಿಸಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories