ಯೂಟ್ಯೂಬರ್ ಮಧು ಗೌಡ ಪತಿ ವಿರುದ್ಧ ಹಿಟ್ & ರನ್ ಆರೋಪ; ಪ್ರಕರಣ ದಾಖಲು, ಕಾರು ಸೀಜ್

Hit and Run Case: ಮೈಸೂರಿನಲ್ಲಿ ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ತೆರಳಿದ ಆರೋಪ ಯೂಟ್ಯೂಬರ್ ಮಧು ಗೌಡ ಪತಿ ವಿರುದ್ಧ ಕೇಳಿಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂಬಂಧಪಟ್ಟ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು (Mysuru): ಯೂಟ್ಯೂಬರ್ ಮಧು ಗೌಡ (Youtuber Madhu Gowda) ಅವರ ಪತಿ ನಿಖಿಲ್ ರವೀಂದ್ರ (Nikhil Ravindra) ವಿರುದ್ಧ ರಸ್ತೆ ಅಪಘಾತದ ಬಳಿಕ ಸ್ಥಳದಿಂದ ತೆರಳಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮೈಸೂರಿನ ವಿ.ವಿ.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದ್ದು, ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದ ಸಿಸಿಟಿವಿ (CCTV Footage) ದೃಶ್ಯಾವಳಿಗಳು ಲಭ್ಯವಾಗಿವೆ ಎನ್ನಲಾಗಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿಖಿಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಅಭಿಷೇಕ್ ಎಂಬುವವರಿಗೆ ಡಿಕ್ಕಿ ಹೊಡೆದಿದ್ದಾರೆ ಎಂಬುದು ದೂರುದಾರರ ಆರೋಪವಾಗಿದೆ.

ಇದನ್ನೂ ಓದಿ: ನಾಳೆಯಿಂದ ನಂದಿನಿ ಹಾಲು, ಮೊಸರು ದುಬಾರಿ: ಹೊಸ ದರಗಳ ಪಟ್ಟಿ ಇಲ್ಲಿದೆ

ಅಪಘಾತದ ಪರಿಣಾಮ ಅಭಿಷೇಕ್ ಅವರ ಕೈ ಮತ್ತು ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಮೂಳೆ ಮುರಿತವೂ ಸಂಭವಿಸಿದೆ ಎಂದು ವರದಿಯಾಗಿದೆ. ಗಾಯಾಳು ಅಭಿಷೇಕ್ ತಮ್ಮ ಒಂಬತ್ತು ತಿಂಗಳ ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನು ಅಪಘಾತ ಸಂಭವಿಸಿದ ಬಳಿಕ ಕಾರನ್ನು ನಿಲ್ಲಿಸಿ ಗಾಯಾಳುವಿಗೆ ನೆರವಾಗುವ ಬದಲು ಚಾಲಕ ಸ್ಥಳದಿಂದ ತೆರಳಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಅಪಘಾತದ ಬಳಿಕ ಗಾಯಾಳುವಿನ ಆರೋಗ್ಯ ವಿಚಾರಿಸಿಲ್ಲ ಎಂಬ ಅಂಶವೂ ದೂರಿನಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ದಾಖಲೆ ಇಲ್ಲದ ಜಮೀನಿಗೂ ಇ-ಸ್ವತ್ತು ಭಾಗ್ಯ! ವಿದ್ಯುತ್ ಬಿಲ್, ವಾಸ ದೃಢೀಕರಣ ಪತ್ರ ಇದ್ರೆ ಸಾಕು

ಸದ್ಯ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಸಂಬಂಧಿಸಿದ ಕಾರನ್ನು ಸೀಜ್ (Vehicle Seizure) ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

TRENDING ARTICLES1 / 5
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories