ರೇಷನ್ ಕಾರ್ಡ್ ಇಲ್ಲದವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ? ಹೊಸ ಸೂಚನೆ ನೀಡಿದ ಸರ್ಕಾರ
ಸರ್ಕಾರದ ಗ್ಯಾರೆಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಇನ್ನಿತರ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಇರುವುದು ಕಡ್ಡಾಯವಾಗಿದೆ
ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಪೈಕಿ (Govt Schemes), ಈಗಾಗಲೇ ಹಲವು ಯೋಜನೆಗಳನ್ನು ಚಾಲ್ತಿಗೆ ತರುವ ಮೂಲಕ ಜನರಿಂದ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇನ್ನು ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿಗಳನ್ನು ಅವರ ಖಾತೆಗೆ (Bank Account) ಜಮಾ ಮಾಡುವಂತೆ ಸರ್ಕಾರ ಈ ಹಿಂದೆ ಬರವಸೆ ನೀಡಿತ್ತು.
ಇನ್ನು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಶುರುವಾಗಿದ್ದು, ಲಕ್ಷಗಳಲ್ಲಿ ಅರ್ಜಿಗಳು (Apply Gruha Lakshmi Yojane) ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಪಡಿತರ ಚೀಟಿ (Ration Card) ಬಹಳ ಮುಖ್ಯ ಎನ್ನುವುದು ನಿಮ್ಮೆಲ್ಲರಿಗೂ ಸಹ ಗೊತ್ತೇ ಇದೆ.
ಸರ್ಕಾರದ ಗ್ಯಾರೆಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಇನ್ನಿತರ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಇರುವುದು ಕಡ್ಡಾಯವಾಗಿದೆ. ಇನ್ನು ಅನೇಕರ ಬಳಿ ರೇಷನ್ ಕಾರ್ಡ್ ಇಲ್ಲದೆ ಇರುವುದು, ಹಾಗೆ ಇನ್ನಿತರ ಸದಸ್ಯರ ಬಳಿ ಇರುವ ರೇಷನ್ ಕಾರ್ಡ್ ನಲ್ಲಿ ಕೆಲವು ತಪ್ಪುಗಳು ಕಂಡು ಬಂದಿದ್ದು, ಅಂತವರು ರೇಷನ್ ಕಾರ್ಡ್ ತಿದ್ದುಪಡಿ (Ration Card Correction) ಮಾಡಿಸಿ ನಂತರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ಸೂಚನೆ ನೀಡಿತ್ತು. ಇನ್ನು ಇದೀಗ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಇನ್ನಷ್ಟು ಸುಲಭ ಮಾಡಲಾಗಿದೆ.
ಹೌದು, ಕೆಲವರು ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇನ್ನು ಕಾರಣಾಂತರಗಳಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆೆಯನ್ನು ಸರ್ಕಾರ ನಿಲ್ಲಿಸಿದೆ.
ಇನ್ನು ಇದೀಗ ಅನೇಕರು ರೇಷನ್ ಕಾರ್ಡ್ ಇಲ್ಲದೆ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ ಎಂದು ತಿಳಿದು ಬೇಸರ ವ್ಯಕ್ತ ಪಡಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇಲ್ಲ. ಇದು ನಿರಂತರವಾದ ಪ್ರಕ್ರಿಯೆ ಆಗಿದೆ, ನೀವು ಯಾವಾಗ ಬೇಕಾದರೂ ಅರ್ಜಿಯನ್ನು ಸಲ್ಲಿಸಬಹುದು.
ರಾಜ್ಯದ ಜನರಿಗೆ ಸಿಹಿ ಸುದ್ದಿ! ಅನ್ನಭಾಗ್ಯ ಯೋಜನೆಯ ಸಂಕಷ್ಟಕ್ಕೆ ರಾತ್ರೋರಾತ್ರಿ ಪರಿಹಾರ ಹುಡುಕಿದ ಸರ್ಕಾರ
ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಇರುವವರು ತಿದ್ದುಪಡಿ ಮಾಡಿಸಿ ನಂತರ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ. ಇನ್ನು ಸರ್ಕಾರದ ಮುಂದಿನ ಆದೇಶದ ನಂತರ ಹೊಸ ರೇಷನ್ ಕಾರ್ಡ್ ಅರ್ಜಿಗಳಿಗೆ ಸಹ ಆಹ್ವಾನ ನೀಡಲಾಗುತ್ತದೆ, ಆಗ ನೀವು ರೇಷನ್ ಕಾರ್ಡ್ ಅಪ್ಲೈ ಮಾಡಿ ನಂತರ ಈ ಯೋಜನೆಯ ಲಾಭ ಪಡೆಯಬಹುದು ಎಂದಿದ್ದಾರೆ.
ಇನ್ನು ಬಿಪಿಎಲ್ ರೇಷನ್ ಕಾರ್ಡ್ ಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿ, ನಂತರ ಅವರಿಗೆ ರೇಷನ್ ಕಾರ್ಡ್ ವಿತರಿಸಲಾಗುತ್ತದೆ. ಆದರೆ ಸರ್ಕಾರದ ಮುಂದಿನ ಆದೇಶದವರೆಗೂ ಹೊಸ ರೇಷನ್ ಕಾರ್ಡ್ ಗಳಿಗೆ ಮಂಜೂರು ನೀಡಲಾಗುವುದಿಲ್ಲ ಎಂದು ಆರೋಗ್ಯ ಮತ್ತು ಆಹಾರ ಸಚಿವ ಮುನಿಯಪ್ಪ ಅವರು ತಿಳಿಸಿದ್ದಾರೆ.
How to apply for Gruha Lakshmi Yojana without ration card