ಪಿಯುಸಿ ಪಾಸಾಗಿದ್ರೆ ಗ್ರಾಮ ಪಂಚಾಯತಿಯಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಿ
ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
ನಿರುದ್ಯೋಗ ಎನ್ನುವುದು ನಮ್ಮ ದೇಶ ಎದುರಿಸುತ್ತಿರುವ ಬಹಳ ದೊಡ್ಡ ಸಮಸ್ಯೆಯಾಗಿದೆ. ಈ ಸಮಸ್ಯೆ ನಿವಾರಣೆಗಾಗಿಯೇ ಸರ್ಕಾರಗಳು ಒಂದಲ್ಲಾ ಒಂದು ರೀತಿಯಲ್ಲಿ ಪ್ರಯತ್ನ ಮಾಡುತ್ತಿವೆ. ಸರ್ಕಾರದಲ್ಲಿ ಆದಷ್ಟು ಉದ್ಯೋಗ ಕಲ್ಪಿಸುವುದು ಒಂದೆಡೆಯಾದರೆ, ಉದ್ಯಮಿಗಳ ಹೂಡಿಕೆ ಪ್ರೋತ್ಸಾಹ ನೀಡುವ ಮೂಲಕವು ನಿರುದ್ಯೋಗ ನಿವಾರಣೆಗೆ ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ.
ಇದೀಗ ರಾಜ್ಯ ಸರ್ಕಾರವು ಗ್ರಾಮ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಯಾವ ಜಿಲ್ಲೆಯಲ್ಲಿ ಅರ್ಜಿ ಕರೆಯಲಾಗಿದೆ, ಏನೇನು ದಾಖಲೆಗಳು ಬೇಕಾಗುತ್ತವೆ ಎನ್ನುವುದನ್ನು ತಿಳಿದುಕೊಳ್ಳೋಣ.
ಇಂತಹ ಮಹಿಳೆಯರಿಗೆ 6ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣ ಬರೋಲ್ಲ! ಬಿಗ್ ಅಪ್ಡೇಟ್
ನಮ್ಮ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನಿರುದ್ಯೋಗಿಗಳಿಗೆ ಇದು ಒಂದು ರೀತಿಯಲ್ಲಿ ಸುವರ್ಣಾವಕಾಶವಾಗಿದ್ದು, ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಯಾವ ಯಾವ ಹುದ್ದೆ ಖಾಲಿ ಇದೆ?:
ಗ್ರಂಥಾಲಯ ಮೇಲ್ವಿಚಾರಕರು
ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸರ್ಕಾರ!
ಶೈಕ್ಷಣಿಕ ಅರ್ಹತೆ ಏನು?:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ರಾಜ್ಯದ ಮಾನ್ಯತೆ ಪಡೆದ ಯಾವುದೇ ವಿಶ್ವ ವಿದ್ಯಾಲಯದಿಂದ ಕಡ್ಡಾಯವಾಗಿ ೧೨ನೇ ತರಗತಿ ಇಲ್ಲವೇ ದ್ವಿತೀಯ ಪಿಯುಸಿ ಪಾಸಾಗಿರಬೇಕು. ಲೈಬ್ರರಿ ಸರ್ಟಿಫಿಕೇಟ್ ಕೋರ್ಸ್ ಹಾಗೂ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಮುಗಿಸಿರಬೇಕು.
ಎಷ್ಟು ಸಂಬಳ ನೀಡಲಾಗುತ್ತದೆ?:
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ೧೬ ಸಾವಿರ ರೂ. ವೇತನ ನೀಡಲಾಗುತ್ತದೆ.
ಇಂತಹ ರೈತರ ಖಾತೆಗೆ ಬರ ಪರಿಹಾರ ಹಣ 2000 ರೂಪಾಯಿ ಬಿಡುಗಡೆ! ಬಿಗ್ ಅಪ್ಡೇಟ್
ವಯೋಮಿತಿ ಎಷ್ಟು?:
ಅರ್ಜಿ ಸಲ್ಲಿಸುವವರು ಕನಿಷ್ಟ ೧೮ ವರ್ಷ ಮೇಲ್ಪಟ್ಟವರಾಗಿರಬೇಕು ಹಾಗೂ ೩೪ ವರ್ಷದ ಒಳಗಿನವರಾಗಿರಬೇಕು.
ಅರ್ಜಿ ಸಲ್ಲಿಸಲು ಫೆ.೨೩ ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?:
ನೀವು ರಾಜ್ಯ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡಬೇಕು. ಅಲ್ಲಿ ನಿಮಗೆ ಅರ್ಜಿ ನಮೂನೆ ಕಾಣಿಸುತ್ತದೆ. ಅದನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.
ಹೀಗೆ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ ನೀವು ಸಹ ಉದ್ಯೋಗ ಪಡೆದುಕೊಂಡು ಮನೆಗೆ ಆಧಾರ ಆಗಬಹುದು. ಮನೆಯಲ್ಲಿಯೇ ಸುಮ್ಮನೆ ಕುಳಿತುಕೊಳ್ಳುವ ಬದಲು ಉದ್ಯೋಗ ಮಾಡಿದಲ್ಲಿ ಸಮಾಜದಲ್ಲಿ ನಿಮ್ಮ ಗೌರವವೂ ಹೆಚ್ಚಾಗುತ್ತದೆ. ಆದ್ದರಿಂದ ಕೇವಲ ಪಿಯುಸಿ ಅಷ್ಟೇ ಆಗಿದೇ ಎಂದು ಚಿಂತೆ ಮಾಡುವ ಬದಲು ರಾಜ್ಯ ಸರ್ಕಾರ ನೀಡಿರುವ ಈ ಅವಕಾಶ ಬಳಕೆ ಮಾಡಿಕೊಂಡು ಉದ್ಯೋಗಸ್ಥರಾಗಿ.
If you pass PUC, there is a job opportunity in Gram Panchayat