ಪಿಯುಸಿ ಪಾಸ್ ಆಗಿದ್ರೆ ಸಾಕು ಗ್ರಾಮ ಪಂಚಾಯತ್ ನಲ್ಲಿ ಸರ್ಕಾರಿ ಕೆಲಸ! ಅರ್ಜಿ ಸಲ್ಲಿಸಿ

ಗ್ರಾಮ ಪಂಚಾಯತ್ ನಲ್ಲಿ ಸುಮಾರು ಆರು ಲೈಬ್ರರಿ ಸೂಪರ್ವೈಸರ್ (library supervisor) ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಈ ಜಿಲ್ಲೆಯ ಗ್ರಾಮ ಪಂಚಾಯತ್ (Gram Panchayat recruitment) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (2nd PUC) ಪಾಸ್ ಆಗಿದ್ದರು ಕೂಡ ಅರ್ಜಿ ಸಲ್ಲಿಸಬಹುದು.

ಇದು ಸರ್ಕಾರಿ ಉದ್ಯೋಗವಾಗಿದ್ದು ಉದ್ಯೋಗ ಪಡೆದುಕೊಳ್ಳಲು ಲೇಖನವನ್ನು ಸಂಪೂರ್ಣವಾಗಿ ಓದಿ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ. ಮೊದಲು ಬಂದವರಿಗೆ ಆದ್ಯತೆ.

ಯುವ ನಿಧಿ ಯೋಜನೆಗೆ ಡಿಸೆಂಬರ್ 21ರಿಂದ ಅರ್ಜಿ ಸಲ್ಲಿಕೆ ಆರಂಭ! ಈ ದಾಖಲೆಗಳು ಕಡ್ಡಾಯ

ಪಿಯುಸಿ ಪಾಸ್ ಆಗಿದ್ರೆ ಸಾಕು ಗ್ರಾಮ ಪಂಚಾಯತ್ ನಲ್ಲಿ ಸರ್ಕಾರಿ ಕೆಲಸ! ಅರ್ಜಿ ಸಲ್ಲಿಸಿ - Kannada News

ಗ್ರಾಮ್ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳು ಖಾಲಿ! (Gram Panchayat recruitment 2023)

ಚಿತ್ರದುರ್ಗ ಜಿಲ್ಲೆಯ (Chitradurga district) ಗ್ರಾಮ ಪಂಚಾಯತ್ ನಲ್ಲಿ ಸುಮಾರು ಆರು ಲೈಬ್ರರಿ ಸೂಪರ್ವೈಸರ್ (library supervisor) ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಪೋಸ್ಟ್ ನಲ್ಲಿ ಅರ್ಜಿ ಕಳುಹಿಸಬಹುದು.

ವಿದ್ಯಾರ್ಹತೆ; (qualification)

ಚಿತ್ರದುರ್ಗ ಗ್ರಾಮ ಪಂಚಾಯತ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಲೈಬ್ರರಿ ಸೈನ್ಸ್ ಸರ್ಟಿಫಿಕೇಷನ್ ಕೋರ್ಸ್ (library science certification course) ಮುಗಿಸಿರಬೇಕು.

ಈ 15 ಜಿಲ್ಲೆಗಳ ಮಹಿಳೆಯರಿಗೆ ಗೃಹಲಕ್ಷ್ಮಿ 4ನೇ ಕಂತಿನ ಹಣ ಜಮಾ! ಖಾತೆ ಚೆಕ್ ಮಾಡಿಕೊಳ್ಳಿ

Govt job vacancyವಯೋಮಿತಿ:

ಗ್ರಾಮ್ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷ ಒಳಗಿನವರಾಗಿರಬೇಕು ಎಂದು ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಸೂಚನೆ ಹೊರಡಿಸಿದೆ. ಆದರೆ ವಯೋಮಿತಿ ಸಡಿಲಿಕೆ ಕೂಡ ನೀಡಲಾಗಿದ್ದು SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ PWD/ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ ಮತ್ತು ನೇಮಕಾತಿ: (salary and selection process)

ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಏನು ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳು 15196.72 ರೂ. ವೇತನ ಪಡೆದುಕೊಳ್ಳಬಹುದು, ಆಯ್ಕೆಯಾದ ಅಭ್ಯರ್ಥಿಗಳು ಚಿತ್ರದುರ್ಗದ ಗ್ರಾಮ ಪಂಚಾಯತ್ ನಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು ಎಂದು ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಸೂಚನೆಯಲ್ಲಿ ತಿಳಿಸಿದೆ.

ರೇಷನ್ ಕಾರ್ಡ್ ವಿತರಣೆಯಲ್ಲಿ ಬಿಗ್ ಅಪ್ಡೇಟ್! ಈಗ ಪಡಿತರ ಪಡೆಯೋದು ಇನ್ನಷ್ಟು ಸುಲಭ

ಅರ್ಜಿ ಸಲ್ಲಿಸುವ ದಿನಾಂಕ ಮತ್ತು ಅರ್ಜಿ ಸಲ್ಲಿಸುವ ವಿಧಾನ! (Last date to apply)

ಚಿತ್ರದುರ್ಗ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 26 2023 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿ ಹಾಗೂ ದಾಖಲೆಗಳನ್ನು ಪೋಸ್ಟ್ ನಲ್ಲಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಮತ್ತು ಉಪ ಭದ್ರತೆಗಳು, ಜಿಲ್ಲಾ ಪಂಚಾಯತ್
ಕ್ರೀಡಾಂಗಣ ರಸ್ತೆ, ಚಿತ್ರದುರ್ಗ

If you pass PUC, there is a vacancy in Gram Panchayat, Apply immediately

Follow us On

FaceBook Google News

If you pass PUC, there is a vacancy in Gram Panchayat, Apply immediately